ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಹುಮತ ಗಳಿಸುವಲ್ಲಿ ಕಾಂಗ್ರೆಸ್ ವಿಫಲವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾಜ್ಯಪಾಲ ವಾಜುಬಾಯಿ ವಾಲಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. 


COMMERCIAL BREAK
SCROLL TO CONTINUE READING

ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಕಸರತ್ತು; ಕುಮಾರಸ್ವಾಮಿಗೆ ಸಿಎಂ ಹುದ್ದೆ ಆಫರ್


ಇಂದು ಸಂಜೆ ರಾಜ್ಯಪಾಲರ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜೀನಾಮೆ ಸಲ್ಲಿಸಿದರು. ರಾಜ್ಯದಲ್ಲಿ ತಮ್ಮ ನೇರ, ದಿಟ್ಟ, ಕಟುವಾದ ರಾಜಕಾರನದಿಂದ್, ಆಡಳಿತಕ್ಕೆ ಹೆಸರಾಗಿದ್ದ ನಿಷ್ಟಾವಂತ ಮುಖ್ಯಮಂತ್ರಿ ಎಂದೇ ಹೆಸರಾಗಿದ್ದ ಸಿದ್ದರಾಮಯ್ಯ ಅವರು, ಈಗ ಮಾಜಿ ಮುಖ್ಯಮಂತ್ರಿ ಆಗಿದ್ದಾರೆ. ಈ ಮೂಲಕ ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿಯಾಗಿ 5 ವರ್ಷಗಳ ಯಶಸ್ವಿ ಆಡಳಿತ ನಡೆಸಿ, ಅಧಿಕಾರಾವಧಿ ಪೂರ್ಣಗೊಳಿಸಿದ ಮೊಟ್ಟಮೊದಲ ಅಹಿಂದಾ ನಾಯಕ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. 


ಬಾದಾಮಿಯಲ್ಲಿ ಶ್ರೀರಾಮುಲು ಸೋಲು; ನಿಟ್ಟುಸಿರುಬಿಟ್ಟ ಸಿದ್ದರಾಮಯ್ಯ


ಆದರೆ, ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹೀನಾಯ ಸೋಲು ಅನುಭವಿಸಿದರು. ಈ ಕ್ಷೇತ್ರದ ಚುನಾವಣೆಯಲ್ಲಿ 37,279 ಮತಗಳನ್ನು ಗಳಿಸಿದ ಸಿದ್ದರಾಮಯ್ಯ ಅವರ ವಿರುದ್ಧ   ಜಿ.ಟಿ.ದೇವೇಗೌಡರು 61,351ಮತಗಳನ್ನು ಗಳಿಸಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ಮುಖಭಂಗ; ಜಿ.ಟಿ.ದೇವೇಗೌಡಗೆ ಗೆಲುವು


ಕರ್ನಾಟಕ ವಿಧಾನಸಭೆ ಚುನಾವಣೆ 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನ ನಡೆದಿತ್ತು. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಲ್ಲದೆ ಸರಿ ಸುಮಾರು 28ಕ್ಕೂ ಅಧಿಕ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ 222 ಸ್ಥಾನಗಳ ಪೈಕಿ ಬಿಜೆಪಿ 104, ಕಾಂಗ್ರೆಸ್ 78 ಮತ್ತು ಜೆಡಿಎಸ್ 38 ಹಾಗೂ ಇತರೆ 2 ಸ್ಥಾನಗಳನ್ನು ಗಳಿಸಿದ್ದು, ಯಾವ ಪಕ್ಷ ಸರ್ಕಾರ ರಚನೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.