ಚಾಮುಂಡೇಶ್ವರಿ ಕ್ಷೇತ್ರದಿಂದ ಇಂದು ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ
ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಮಧ್ಯಾಹ್ನ 2ರಿಂದ 3ಗಂಟೆಯೊಳಗೆ ಮೈಸೂರಿನ ತಹಸೀಲ್ದಾರರ ಕಚೇರಿಯಲ್ಲಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವರು.
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ 2ರಿಂದ 3ಗಂಟೆಯೊಳಗೆ ಮೈಸೂರಿನ ತಹಸೀಲ್ದಾರರ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಇದಕ್ಕೂ ಮುನ್ನ ಬೆಳಗ್ಗೆ 10 ಗಂಟೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿರುವ ಪತ್ರಿಕಾ ಸಂವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವರು.
ಬಳಿಕ ಸ್ವಗ್ರಾಮ ಸಿದ್ದರಾಮನಹುಂಡಿಗೆ ಭೇಟಿ ನೀಡುವರು. ನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಬಳಿಕ ನಾಮಪತ್ರ ಸಲ್ಲಿಸುವರು.