ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ಪ್ರಚಾರ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದ್ದು, ಗಣಿ-ಧಣಿ ಆಸೆಗೆ ತಣ್ಣೀರೆರಚಿದಂತಾಗಿದೆ.
Supreme Court dismissed the plea of BJP leader G Janardhan Reddy for letting him go to Bellary to campaign for his brother, who is a candidate for the upcoming assembly elections in Karnataka. SC did not find any merit in the plea & dismissed it.
— ANI (@ANI) May 4, 2018
ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ, ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಯಾಗಿರುವ ತಮ್ಮ ಸಹೋದರನಿಗೆ ಪ್ರಚಾರ ಮಾಡಲು ಬಳ್ಳಾರಿಗೆ ತೆರಳುವಂತೆ ಅನುಮತಿ ನೀಡುವಂತೆ ಮನವಿ ಮಾಡಿ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಸಹೋದರನ ಪರ ಪ್ರಚಾರಕ್ಕಾಗಿ ಬಳ್ಳಾರಿಗೆ ತೆರಳುವ ಜನಾರ್ಧನ ರೆಡ್ಡಿ ಆಸೆ ಭಗ್ನವಾಗಿದೆ.