ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ- ಅಮಿತ್ ಶಾ

ನಕಲಿ ವೋಟರ್ ಐಡಿ ತಯಾರಿಸುವ ಮೂಲಕ ಕಾಂಗ್ರೆಸ್ ನಿಂದ ವಾಮಮಾರ್ಗ ಅನುಸರಿಸಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ.   

Last Updated : May 21, 2018, 04:42 PM IST
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ- ಅಮಿತ್ ಶಾ title=

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದ್ದು, ನಮ್ಮ ಪಕ್ಷದ ಸ್ಥಾನ ಗಣನೀಯವಾಗಿ ಏರಿಕೆಯಾಗಿದೆ. ಸರ್ಕಾರ ರಚಿಸುವ ಮೊದಲ ಅಧಿಕಾರ ನಮ್ಮದಾಗಿತ್ತು. ಜನತೆಯ ಆಜ್ಞೆಯು ಸ್ಪಷ್ಟವಾಗಿ ಕಾಂಗ್ರೆಸ್ ವಿರೋಧವಾಗಿದ್ದರೂ, ಸರ್ಕಾರ ರಚಿಸಲು ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾಂಗ್ರೆಸ್-ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಂದ ನಂತರ ಸರ್ಕಾರ ರಚಿಸಿದ್ದ ಬಿಜೆಪಿ ಬಹುಮತ ಸಾಧಿಸಲು ವಿಫಲವಾದ ಬಳಿಕ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸೋಮವಾರ ಮೊದಲ ಬಾರಿಗೆ ಮಾಧ್ಯಮಗೋಷ್ಠಿ ನಡೆಸಿದರು. ಪಕ್ಷದ ಪ್ರಧಾನ ಕಚೇರಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿದ್ದಾರೆ. ಇದೊಂದು ಅಪವಿತ್ರ ಮೈತ್ರಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ನಕಲಿ ವೋಟರ್ ಐಡಿ ತಯಾರಿಸುವ ಮೂಲಕ ಕಾಂಗ್ರೆಸ್ ನಿಂದ ವಾಮಮಾರ್ಗ ಅನುಸರಿಸಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕರ್ನಾಟಕದಲ್ಲಿ ನಾವು 40 ಸ್ಥಾನಗಳಿಂದ ಈಗ 104 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದೇವೆ ಇದು ನಮ್ಮ ಪಕ್ಷದ ಜಯ ಎಂದು ತಿಳಿಸಿದರು. ಚುನಾವಣೆಗೂ ಮುನ್ನ ಕಾಂಗ್ರೆಸ್ ವಿರುದ್ಧ ಚುನಾವಣಾ ಪ್ರಚಾರ ಮಾಡಿದ್ದ ಜೆಡಿಎಸ್, ಜೆಡಿಎಸ್ ವಿರುದ್ಧ ಚುನಾವಣಾ ಪ್ರಚಾರ ಮಾಡಿದ್ದ ಕಾಂಗ್ರೆಸ್ ಎರಡೂ ಪಕ್ಷಗಳು ಫಲಿತಾಂಶದ ಮೂಲಕ ಒಂದಾಗಿವೆ ಎಂದು ಎರಡೂ ಪಕ್ಷಗಳ ವಿರುದ್ಧ ಹರಿಹೈದರು.

ಸಿದ್ದರಾಮಯ್ಯ ಸರ್ಕಾರದಲ್ಲಿ ಕಳೆದ 5 ವರ್ಷಗಳಲ್ಲಿ 3700 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ದೊಡ್ಡ ವಿಫಲವಾಯಿತು. ರೈತರು, ಕಾರ್ಮಿಕರು, ನಿರುದ್ಯೋಗಿಗಳು ಮತ್ತು ದಲಿತ ದಬ್ಬಾಳಿಕೆ ಮುಂತಾದ ವಿಷಯಗಳ ಕುರಿತು ಕರ್ನಾಟಕ ಚುನಾವಣೆ ಫಲಿತಾಂಶ ನೀಡಿದೆ. ಬಹುಪಾಲು ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸೋತಿದ್ದಾರೆ. ಸ್ವತಃ ಮುಖ್ಯಮಂತ್ರಿಯವರೇ ಒಂದು ಕ್ಷೇತ್ರದಲ್ಲಿ ಸೋತಿದ್ದಾರೆ. ಅಲ್ಲದೆ ಇನ್ನೊಂದು ಕ್ಷೇತ್ರದಲ್ಲಿ ಅತಿ ಸಣ್ಣ ಅಂತರದಿಂದ ಸೋತಿದ್ದಾರೆ. ಕರ್ನಾಟಕದಲ್ಲಿ ಜನಾದೇಶ ಕಾಂಗ್ರೆಸ್ ವಿರುದ್ಧವಾಗಿ ಬಂದಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಇದೀಗ ಪಿಪಿಪಿ ಪಕ್ಷವಾಗಿ ಅಂದರೆ, ಇದು ಈಗ ಪಂಜಾಬ್, ಪುದುಚೇರಿ ಮತ್ತು ಪರಿವಾದದ ಪಕ್ಷವಾಗಿ ಉಳಿದಿದೆ ಎಂದು ವ್ಯಂಗ್ಯವಾಡಿದರು.

ಈ ಚುನಾವಣೆಯಲ್ಲಿ ಒಂದು ಒಳ್ಳೆಯ ವಿಷಯವೆಂದರೆ, ಕಾಂಗ್ರೆಸ್ ಈಗ ಪ್ರಜಾಪ್ರಭುತ್ವದ ಸಂಸ್ಥೆಗಳಲ್ಲಿ ವಿಶ್ವಾಸ ಹೆಚ್ಚಿಸಲು ಪ್ರಾರಂಭಿಸಿದೆ. ಕಾಂಗ್ರೆಸ್ ಗೆ ಇದೀಗ EVM ಗಳೊಂದಿಗೆ ಉತ್ತಮವಾಗಿದೆ. ನ್ಯಾಯಾಂಗದಲ್ಲಿ ವಿಶ್ವಾಸ ಹೆಚ್ಚಾಗಿದೆ, ಚುನಾವಣಾ ಆಯೋಗವು ತುಂಬಾ ಚೆನ್ನಾಗಿ ಕಾಣುತ್ತಿದೆ  ಎಂದು ಅಮಿತ್ ಶಾ ಹೇಳಿದರು.

Trending News