ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಳಿಗ್ಗೆ 09:00 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪದಗ್ರಹಣಕ್ಕೆ ಇನ್ನು ಕೆಲವೇ ಕ್ಷಣಗಳು ಬಾಕಿಯಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲು ಗಾಜಿನ ಮನೆಯಲ್ಲಿ ಸಕಲ ಸಿದ್ದತೆ ನಡೆದಿದೆ. ಈ ಹಿನ್ನೆಲೆಯಲ್ಲಿ ರಾಜಭವನದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. 


COMMERCIAL BREAK
SCROLL TO CONTINUE READING

ಇನ್ನು ಬಿಜೆಪಿ ಅಧಿಕಾರ ಸ್ವೀಕಾರಕ್ಕೆ ರಾಜ್ಯಪಾಲರು ಸಮ್ಮತಿ ನೀಡಿರುವುದರಿಂದ ಸಂಖ್ಯಾಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಲು ಮುಂದಾಗಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಭಾರೀ ಮುಖಭಂಗವಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಭದ್ರತೆ ಹೆಚ್ಚಿಸಲಾಗಿದೆ.



ಏತನ್ಮಧ್ಯೆ ರಾಜಭವನದ ಎದುರು ಮತ್ತು ಮಲ್ಲೇಶ್ವರಂನ ಬಿಜೆಪಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿದೆ.