ಬೆಂಗಳೂರು: ಕಳೆದೆರಡು ದಿನಗಳಿಂದ ಹೆಚ್ಚಾಗಿದ್ದ ಚಿನ್ನದ ಬೆಲೆ ಮತ್ತೆ ಇಂದು ಕಡಿಮೆಯಾಗಿದೆ.  ಇಂದು ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,830 ರೂ. ಇದ್ದುದು ಇಂದು 45,480 ರೂ. ಆಗಿದೆ. 22 ಕ್ಯಾರೆಟ್ ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 42,010 ರೂ. ಇದ್ದುದು ಇಂದು 41,690 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತವಾಗಿದ್ದು, ನಿನ್ನೆ 1 ಕೆಜಿ 65,400 ರೂ. ಇದ್ದ ಬೆಳ್ಳಿ ಬೆಲೆ ಇಂದು 64,900ಕ್ಕೆ ಕುಸಿದಿದೆ. 


COMMERCIAL BREAK
SCROLL TO CONTINUE READING

ಭಾರತದಲ್ಲಿ ಚಿನ್ನದ ಬೆಲೆ(Gold Rate) ಇಂದು ಕೊಂಚ ಕಡಿಮೆಯಾಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 43,910 ರೂ. ಇದ್ದುದು 43,750 ರೂ.ಗೆ ಕುಸಿದಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 44,920 ರೂ. ಇದ್ದುದು ಇಂದು 44,750 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 45,480 ರೂ. ಆಗಿದೆ. ಹಾಗೇ, 22 ಕ್ಯಾರೆಟ್ ನ 10 ಗ್ರಾಂ ಚಿನ್ನಕ್ಕೆ ಇಂದು 41,690 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 47,000 ರೂ. ದಾಟಿದೆ. 


SBI, HDFC, ICICI ಖಾತೆದಾರರೇ ಎಚ್ಚರ! OTPಗೆ ಸಂಬಂಧಿಸಿದ ಈ ಮಾಹಿತಿ ತಪ್ಪದೇ ತಿಳಿಯಿರಿ


ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಭಾರೀ ಇಳಿಕೆಯಾಗಿದ್ದು, ನಿನ್ನೆ 65,400 ರೂ. ಇದ್ದ ಬೆಳ್ಳಿ ಬೆಲೆ(Siliver Rate) ಇಂದು 1 ಕೆಜಿಗೆ 64,900 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 65,700 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,000 ರೂ. ದಾಟಿದೆ.  


ಈ ಬ್ಯಾಂಕ್ ಗಳಲ್ಲಿ ಅಕೌಂಟ್ ಇದ್ದರೆ ತಕ್ಷಣ ಈ ಕೆಲಸ ಮಾಡಿ, ತಪ್ಪಿದರೆ ಎದುರಾದೀತು ಸಮಸ್ಯೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ... 
Android Link -
 https://bit.ly/3hDyh4G 
Apple Link - https://apple.co/3loQYe  
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.