21 ರಿಂದ 60 ವರ್ಷದೊಳಗಿನ ಮಹಿಳೆಯರಿಗೆ 10,000 ರೂ: ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ ಸರ್ಕಾರ

subhadra yojana scheme: ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ  ನಿಟ್ಟಿನಲ್ಲಿ ಸರ್ಕಾರ ಈ ಯೋಜನೆಗಳನ್ನು ಜಾರಿಗೆ ತಂದಿವೆ.   

Written by - Ranjitha R K | Last Updated : Nov 25, 2024, 10:57 AM IST
  • 'ಸುಭದ್ರಾ ಯೋಜನೆ' ಎಂದರೇನು ಗೊತ್ತಾ?
  • 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ಪ್ರಯೋಜನ
  • ಈ ಸೌಲಭ್ಯವನ್ನು ಯಾರು ಪಡೆಯುತ್ತಾರೆ ?
 21 ರಿಂದ 60 ವರ್ಷದೊಳಗಿನ  ಮಹಿಳೆಯರಿಗೆ 10,000 ರೂ: ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ ಸರ್ಕಾರ   title=

subhadra yojana scheme: ಮಹಿಳೆಯರಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ  ನಿಟ್ಟಿನಲ್ಲಿ ಸರ್ಕಾರ ಈ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪೈಕಿ ಕೆಲವು ಯೋಜನೆಗಳ ಬಗ್ಗೆ ಮಹಿಳೆಯರಿಗೆ ಅರಿವಿರುತ್ತದೆ. ಆದರೆ ಎಲ್ಲಾ ಯೋಜನೆಗಳ ಬಗ್ಗೆ ಬಹುತೇಕರಿಗೆ ತಿಳಿದಿರುವುದಿಲ್ಲ. ಹೀಗಾದಾಗ ಆ ಯೋಜನೆಯ ಲಾಭ ಪಡೆಯುವುದು ಕೂಡಾ ಸಾಧ್ಯವಾಗುವುದಿಲ್ಲ. 

ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ತಮ್ಮ ರಾಜ್ಯದಲ್ಲಿ ಮಹಿಳೆಯರಿಗಾಗಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ.ಈ ಯೋಜನೆಯ ಹೆಸರು ಸುಭದ್ರಾ ಯೋಜನೆ. ಈ ಯೋಜನೆಯ ಮೊದಲ ಕಂತನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ  ಸೆಪ್ಟೆಂಬರ್ 17 ರಂದು ಈ ಯೋಜನೆಗೆ ಚಾಲನೆ ನೀಡಿದ್ದರು. 

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಬದಲಾವಣೆ !ಈ ಬದಲವಾಣೆ ಹಿಂದಿರುವುದು ಎರಡು ಪ್ರಮುಖ ಕಾರಣ

'ಸುಭದ್ರಾ ಯೋಜನೆ' ಎಂದರೇನು ?:
'ಸುಭದ್ರಾ ಯೋಜನೆ' ಒಡಿಶಾ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಈ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ, ರಾಜ್ಯದ ಅರ್ಹ ಮಹಿಳೆಯರಿಗೆ ವರ್ಷಕ್ಕೆ 10,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು. ಅದನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ತಲಾ  5,000 ರೂಪಾಯಿಯಂತೆ ಎರಡು ಕಂತುಗಳಲ್ಲಿ ನೀಡಲಾಗುತ್ತದೆ.

ಈ ವರ್ಷದ ಆರಂಭದಲ್ಲಿ 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ಪ್ರಯೋಜನ : 
ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾ ಸರ್ಕಾರದ ಪ್ರಮುಖ ಯೋಜನೆ ಸುಭದ್ರಾವನ್ನು ಭುವನೇಶ್ವರದಲ್ಲಿ ಉದ್ಘಾಟಿಸಿದ್ದರು. ಮಾಹಿತಿಯ ಪ್ರಕಾರ,ಈ ಯೋಜನೆಯಿಂದ ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಪ್ರಯೋಜನವಾಗುವ ಗುರಿಯನ್ನು ಹೊಂದಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಈ ಸೌಲಭ್ಯವನ್ನು ಯಾರು ಪಡೆಯುತ್ತಾರೆ ?: 
ಸುಭದ್ರಾ ಯೋಜನೆಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕು:

೧. ಒಡಿಶಾದ ಖಾಯಂ ನಿವಾಸಿಯಾಗಿರಬೇಕು.
೨. ಮಹಿಳಾ ಅರ್ಜಿದಾರರು ಮಾತ್ರ ಅರ್ಹರು.
೩. 21 ರಿಂದ 60 ವರ್ಷಗಳ ನಡುವಿನ ಮಹಿಳೆಯರಿಗೆ ಲಾಭ 
೪.ಯಾವುದೇ ಸರ್ಕಾರಿ ವಲಯದಲ್ಲಿ ಕೆಲಸ ಮಾಡುತ್ರಬಾರದು 
೫.ಕುಟುಂಬದ ಆದಾಯವು ವರ್ಷಕ್ಕೆ  2.5 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.
೬.ಪ್ರತಿ ಕುಟುಂಬದ ಒಬ್ಬ ಮಹಿಳೆ ಮಾತ್ರ ಯೋಜನೆಯ ಪ್ರಯೋಜನ 
೭.ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಈ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಆದರೆ ಅವರ ಪತಿ ಸರ್ಕಾರಿ ಉದ್ಯೋಗಿಯಾಗಿದ್ದರೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಕೂಡಾ ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News