ನವದೆಹಲಿ : PM Kisan Update: ಪಿಎಂ ಕಿಸಾನ್ ಫಲಾನುಭವಿಗಳಿಗೆ ಸಿಹಿ ಸುದ್ದಿ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತನ್ನು ಪ್ರಧಾನಮಂತ್ರಿ ನರೇಂದ್ರ  ಮೋದಿ ಬಿಡುಗಡೆ ಮಾಡಿದ್ದಾರೆ. ಇದರಡಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ 21,000 ಕೋಟಿ ರೂ. ಬಿಡುಗಡೆಯಾಗಿದೆ. 


COMMERCIAL BREAK
SCROLL TO CONTINUE READING

ಕೇಂದ್ರ ಸರ್ಕಾರ ತನ್ನ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ರಾಷ್ಟ್ರ ಮಟ್ಟದ 'ಗರೀಬ್ ಕಲ್ಯಾಣ ಸಮ್ಮೇಳನ'ವನ್ನು ಆಯೋಜಿಸಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು, ಕೇಂದ್ರದ ಎಂಟು ಸಚಿವಾಲಯಗಳ 16 ಯೋಜನೆ ಗಳ ಫಲಾನುಭವಿಗಳೊಂದಿಗೆ ವರ್ಚುವಲ್ ಸಂವಾದ ನಡೆಸುತ್ತಿದ್ದಾರೆ. 


ಇದನ್ನೂ ಓದಿ : Indian Railway Luggage Rule: ಇನ್ನು ಮನ ಬಂದಂತೆ ಲಗೇಜ್ ಕೊಂಡೊಯ್ಯುವಂತಿಲ್ಲ ರೈಲಿನಲ್ಲಿ , ಬೀಳಲಿದೆ ಭಾರೀ ದಂಡ


ನೀವು ಪಿಎಂ ಕಿಸಾನ್‌ನ ಫಲಾನುಭವಿಯಾಗಿದ್ದರೆ, ತಕ್ಷಣ ನಿಮ್ಮ ಹೆಸರು ಮತ್ತು ಖಾತೆಯನ್ನು ಈ ರೀತಿ ಪರಿಶೀಲಿಸಿ. 


ಈ ರೀತಿಯ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ :
1. ಇದಕ್ಕಾಗಿ, ನೀವು ಮೊದಲು PM ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್ https://pmkisan.gov.in ಗೆ ಹೋಗಿ .
2. ಈಗ ಅದರ ಮುಖಪುಟದಲ್ಲಿFarmers Corner ಆಯ್ಕೆ ಕಾಣಿಸುತ್ತದೆ. 
3. Farmers Corner ವಿಭಾಗದಲ್ಲಿ, Beneficiaries List ಆಯ್ಕೆಯ ಮೇಲೆ ಕ್ಲಿಕ್ ಮಾಡಿ. 
4. ಈಗ ಡ್ರಾಪ್ ಡೌನ್ ಪಟ್ಟಿಯಿಂದ ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
5.ಇಲ್ಲಿ  'Get Report' ಮೇಲೆ ಕ್ಲಿಕ್ ಮಾಡಿ. 
6. ಇದರ ನಂತರ ಫಲಾನುಭವಿಗಳ ಸಂಪೂರ್ಣ ಪಟ್ಟಿ ಕಾಣಿಸಿಕೊಳ್ಳುತ್ತದೆ, ಅದರಲ್ಲಿ ನೀವು ನಿಮ್ಮ ಹೆಸರನ್ನು ಪರಿಶೀಲಿಸಬಹುದು.


ಇದನ್ನೂ ಓದಿ :Gold Purchase And Selling New Rule: ಚಿನ್ನ ಖರೀದಿ ಮತ್ತು ಮಾರಾಟ ಮಾಡುವವರಿಗೊಂದು ಮಹತ್ವದ ಮಾಹಿತಿ! ಹೊಸ ನಿಯಮ ಜಾರಿಗೊಳಿಸಿದ ಸರ್ಕಾರ


ನಿಮ್ಮ ಕಂತಿನ ಸ್ಥಿತಿಯನ್ನು ಪರಿಶೀಲಿಸಿ  :
1. ನಿಮ್ಮ ಕಂತಿನ ಸ್ಥಿತಿಯನ್ನು ನೋಡಲು, PM ಕಿಸಾನ್ ವೆಬ್‌ಸೈಟ್‌ಗೆ ಹೋಗಿ.
2. ಈಗ ಬಲಭಾಗದಲ್ಲಿರುವ Farmers Corner ಮೇಲೆ ಕ್ಲಿಕ್ ಮಾಡಿ.
3. ಇದರ ನಂತರ ನೀವು ಬೆನಿಫಿಶಿಯರಿ ಸ್ಟೇಟಸ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
4. ಈಗ ನಿಮ್ಮೊಂದಿಗೆ ಹೊಸ ಪುಟ ತೆರೆದುಕೊಳ್ಳುತ್ತದೆ.
5. ಇಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
6. ಇದರ ನಂತರ ನೀವು ನಿಮ್ಮ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು .


ಮಾತ್ರವಲ್ಲ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸಹಾಯವಾಣಿ ಸಂಖ್ಯೆ 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಂಪರ್ಕಿಸಬಹುದು. ಇನ್ನು ನಿಮ್ಮ ದೂರನ್ನು pmkisan-ict@gov.in  ಗೆ ಮೇಲ್ ಮಾಡಬಹುದು. ಈ ಯೋಜನೆಯ ಪ್ರಯೋಜನವನ್ನು ಇನ್ನೂ ಪಡೆಯದ ರೈತರು ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು. 


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.