ಬೆಂಗಳೂರು :  Latest news on Karnataka state budget 2024 : ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.   ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯದಲ್ಲಿಯೂ ವ್ಯಾಪಕ ಬೆಳವಣಿಗೆ ಹೊಂದಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು  ಅವರು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಿದ್ದರಾಮಯ್ಯ ಕೊಡುಗೆ : 
1. 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನ
2.ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನ
3.ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಣ. 
4.ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವಿನೊಂದಿಗೆ ಸ್ಥಾಪನೆ  
5.ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ ನಿರ್ಮಾಣವಾಗಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ.
6.ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆಯನ್ನು ನೀಡಲು ಕ್ರಮ


ಇದನ್ನೂ ಓದಿ : Karnataka Budget 2024: ಮಹಿಳೆಯರ ಸ್ವಾವಲಂಬನೆಗಾಗಿ ಗ್ರಾಮೀಣ ಭಾಗಗಳಲ್ಲಿ ಕೆಫೆಸಂಜೀವಿನಿ


7.ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ. 
8.ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ 
9.ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ Cardiac Unit ಪ್ರಾರಂಭ 
10. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಲ್ಲಿ 64 Anaesthesia Workstation ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಸಲಾಗುವುದು.  
11.ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕಗಳನ್ನು ಸ್ಥಾಪನೆ. ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು.  
12. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL) ಸ್ಥಾಪನೆ.


ಇದನ್ನೂ ಓದಿ :Karnataka Budget 2024: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್, ಗ್ರಾಚ್ಯುಟಿ ಸವಲತ್ತು


13. ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು  ಕ್ರಮ
14.ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭ.ವೈದ್ಯಕೀಯ ಕಾಲೇಜಿನ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಅಗತ್ಯ ಕ್ರಮ.
15. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.