ಶ್ರೀಘದಲ್ಲೇ ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಬಿಡುಗಡೆ- ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ?

PM Kisan Yojana: ದೇಶದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಮೋದಿ ಸರ್ಕಾರ ಆರಂಭಿಸಿದ ಮಹತ್ವದ ಯೋಜನೆಗಳಲ್ಲಿ ಪಿಎಂ ಕಿಸಾನ್ ಯೋಜನೆಯೂ ಒಂದು. ಈ ಯೋಜನೆಯಡಿ 12 ಕಂತುಗಳ ಹಣವನ್ನು ಪಡೆದಿರುವ ರೈತರು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ.

Written by - Yashaswini V | Last Updated : Feb 15, 2023, 07:41 AM IST
  • ಪಿಎಂ ಕಿಸಾನ್ ಯೋಜನೆಯ ಕಂತನ್ನು ಪಡೆಯಲು ಇ-ಕೆವೈಸಿ ಪೂರ್ಣಗೊಳಿಸುವುದು ಅತ್ಯಗತ್ಯವಾಗಿದೆ.
  • ಗಮನಾರ್ಹವಾಗಿ ಇ-ಕೆವೈಸಿ ಪೂರ್ಣಗೊಳಿಸಿದ ರೈತರಿಗಷ್ಟೇ ಈ ಯೋಜನೆಯ ಪ್ರಯೋಜನ ಲಭ್ಯವಾಗಲಿದೆ.
  • ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದರೆ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ತಪ್ಪದೇ ಇಂದೇ ಇ-ಕೆವೈಸಿಯನ್ನು ಪೂರ್ಣಗೊಳಿಸಿ.
ಶ್ರೀಘದಲ್ಲೇ ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಬಿಡುಗಡೆ- ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ?  title=
PM Kisan Yojana 13th installment

PM Kisan Yojana: ಪಿಎಂ ಮೋದಿ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿಗಾಗಿ ರೈತರು ಕಾಯುತ್ತಿದ್ದಾರೆ. ಈ ಯೋಜನೆಯಲ್ಲಿ ಸರ್ಕಾರದಿಂದ ಹಣ ನೇರವಾಗಿ ರೈತರ ಖಾತೆಗಳಿಗೆ ತಲುಪಲಿದೆ. ಈ ಯೋಜನೆಯ 12 ಕಂತುಗಳು ಬಿಡುಗಡೆಯಾಗಿದ್ದು, 13 ನೇ ಕಂತು ಕೂಡ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ. ಅದಕ್ಕೂ ಮೊದಲು 13ನೇ ಕಂತಿನ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರೂ ಇದೆಯೇ ಎಂದು ಪರಿಶೀಲಿಸಿ.

ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ಈ ರೀತಿ ಪರಿಶೀಲಿಸಿ:
ಪಿಎಂ ಕಿಸಾನ್ ಯೋಜನೆ 13 ನೇ ಕಂತನ್ನು ತೆಗೆದುಕೊಳ್ಳಲು ಬಯಸಿದರೆ, ನೀವು ಮೊದಲು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಬೇಕು. ಇದಕ್ಕಾಗಿ ಕೆಳಗಿನ ಹಂತಗಳನ್ನು ಅನುಸರಿಸಿ...
* ಮೊದಲನೆಯದಾಗಿ, ನೀವು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ. 
* ಇದರ ನಂತರ, ಬಲಭಾಗದಲ್ಲಿರುವ ಬೆನಿಫಿಶಿಯರಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ. 
* ಅಲ್ಲಿ ನೀವು ನಿಮ್ಮ ನೋಂದಣಿ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. 
* ಇದರ ನಂತರ ನೀವು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ. 

ಇದನ್ನೂ ಓದಿ- ಈ ಯೋಜನೆಯಲ್ಲಿ ಹೂಡಿಕೆ ಮಾಡಿ ಹೆಚ್ಚುವರಿ ಬಡ್ಡಿಯ ಲಾಭ ಪಡೆಯಿರಿ, ಆರ್ಬಿಐ ಹೇಳಿದ್ದೇನು?

ಪಿಎಂ ಕಿಸಾನ್ ಯೋಜನೆಯ ಕಂತನ್ನು ಪಡೆಯಲು ಇ-ಕೆವೈಸಿ ಪೂರ್ಣಗೊಳಿಸುವುದು ಅತ್ಯಗತ್ಯವಾಗಿದೆ. ಗಮನಾರ್ಹವಾಗಿ ಇ-ಕೆವೈಸಿ ಪೂರ್ಣಗೊಳಿಸಿದ ರೈತರಿಗಷ್ಟೇ ಈ ಯೋಜನೆಯ ಪ್ರಯೋಜನ ಲಭ್ಯವಾಗಲಿದೆ. ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದರೆ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ತಪ್ಪದೇ ಇಂದೇ ಇ-ಕೆವೈಸಿಯನ್ನು ಪೂರ್ಣಗೊಳಿಸಿ.

ಇದನ್ನೂ ಓದಿ- ದೇಶದ ಕೋಟ್ಯಾಂತರ ಸಣ್ಣ ವ್ಯಾಪಾರಿಗಳಿಗೊಂದು ಭಾರಿ ನೆಮ್ಮದಿಯ ಸುದ್ದಿ!

ನೀವು ಇನ್ನೂ ಪಿಎಂ ಕಿಸಾನ್ ಯೋಜನೆಯಲ್ಲಿ ನೋಂದಾಯಿಸಿಕೊಳ್ಳದಿದ್ದರೆ ಸರ್ಕಾರದ ಪ್ರಯೋಜನಗಳನ್ನು ಪಡೆಯಲು ಮೊದಲು  ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ನೋಂದಾಯಿಸಿಕೊಳ್ಳಬಹುದು. ಇದಕ್ಕಾಗಿ ಮೊದಲು ನಿಮ್ಮ ಪಡಿತರ ಚೀಟಿಯ ಎಲ್ಲಾ ಪುಟಗಳ ಸಾಫ್ಟ್ ಕಾಪಿಯ PDF ತಯಾರಿಸಿ. ಬಳಿಕ ಅದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News