ಮೈಸೂರಿನಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯಿಂದ 3,750 ಕೋಟಿ ರೂ.ಹೂಡಿಕೆ
ಮೈಸೂರಿನಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯು 3,200 ಉದ್ಯೋಗ ಸೃಷ್ಟಿ ಮಾಡುವ 3,750 ಕೋಟಿ ರೂ. ಹೂಡಿಕೆಯ ಅತ್ಯಾಧುನಿಕ ಸೆಮಿಕಂಡಕ್ಟರ್ ತಯಾರಿಕಾ ಘಟಕ ಸ್ಥಾಪಿಸುತ್ತಿದ್ದು, ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕರ್ನಾಟಕ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯೊಂದಿಗೆ ಒಡಂಬಡಿಕೆಗೆ (MoU) ಸಹಿ ಹಾಕಲಾಯಿತು.
ಬೆಂಗಳೂರು: ಮೈಸೂರಿನಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯು 3,200 ಉದ್ಯೋಗ ಸೃಷ್ಟಿ ಮಾಡುವ 3,750 ಕೋಟಿ ರೂ. ಹೂಡಿಕೆಯ ಅತ್ಯಾಧುನಿಕ ಸೆಮಿಕಂಡಕ್ಟರ್ ತಯಾರಿಕಾ ಘಟಕ ಸ್ಥಾಪಿಸುತ್ತಿದ್ದು, ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕರ್ನಾಟಕ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯೊಂದಿಗೆ ಒಡಂಬಡಿಕೆಗೆ (MoU) ಸಹಿ ಹಾಕಲಾಯಿತು.
ಕೇನ್ಸ್ ಟೆಕ್ನಾಲಜಿ ಮೈಸೂರಿನಲ್ಲಿ ಇಎಸ್ಡಿಎಂ ಸೆಮಿಕಾನ್ ಪರಿಸರ ವ್ಯವಸ್ಥೆಯ ಪ್ರಮುಖ ನಿರ್ವಹಣ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದ್ದು, ಈ ಒಡಂಬಡಿಕೆಯು ಮೈಸೂರು ನಗರವನ್ನು ಜಾಗತಿಕ ನಕ್ಷೆಯಲ್ಲಿ ಗುರುತಿಸಲು ಸಹಾಯ ಮಾಡಲಿದೆ.
ಇದನ್ನೂ ಓದಿ: ವಿದ್ಯುತ್ ಕಂಬಗಳ ಮೇಲಿನ ಅನಧಿಕೃತ ಕೇಬಲ್ ಗಳ ತೆರವಿಗೆ ಒಂದು ವಾರದ ಗಡುವು ನೀಡಿದ ಬೆಸ್ಕಾಂ
ಕೇನ್ಸ್ ಸೆಮಿಕಾನ್ ಪ್ರೈವೇಟ್ ಲಿಮಿಟೆಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ (OSAT) ಸೌಲಭ್ಯದ ಸಂಸ್ಥೆಯಾಗಿದ್ದು, ಬಹು-ಲೇಯರ್ಡ್ ಬೋರ್ಡ್ಗಳನ್ನು ಉತ್ಪಾದಿಸಲು ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ತಯಾರಿಕಾ ಘಟಕವಾಗಿ ಕಾರ್ಯ ನಿರ್ವಹಿಸುತ್ತದೆ.
ಈ ಸಂದರ್ಭದಲ್ಲಿ ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, ಮಾಹಿತಿ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಶ್ರೀ ದರ್ಶನ್, ಕೇನ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಮೇಶ್ ಕಣ್ಣನ್ ಅವರು ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.