Education Budget 2024: ದೇಶದಲ್ಲಿ 390 ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ : 1.4 ಕೋಟಿ ಯುವಕರಿಗೆ ತರಬೇತಿ

 Education Budget 2024:ಹೆಚ್ಚು ಹೆಚ್ಚು ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗಿದೆ. ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಲು ಒತ್ತು ನೀಡಲಾಗಿದೆ. ಇದಕ್ಕಾಗಿ ಸಮಿತಿ ರಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

Written by - Ranjitha R K | Last Updated : Feb 1, 2024, 01:17 PM IST
  • ದೇಶದಲ್ಲಿ 390 ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ
  • 7 ಹೊಸ ಐಐಟಿಗಳು, 1 6 ಐಐಐಟಿಗಳು ಮತ್ತು 15 ಏಮ್ಸ್
  • 1.4 ಕೋಟಿ ಯುವಕರಿಗೆ ತರಬೇತಿ
Education Budget 2024: ದೇಶದಲ್ಲಿ 390 ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ : 1.4 ಕೋಟಿ ಯುವಕರಿಗೆ ತರಬೇತಿ title=

Education Budget 2024: ದೇಶದಲ್ಲಿ 390 ಹೊಸ ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ ಎಂದು  ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ   ಹೇಳಿದ್ದಾರೆ. 7 ಹೊಸ ಐಐಟಿಗಳು (7 IIT) 1 6 ಐಐಐಟಿಗಳು (16 IIIT) ಮತ್ತು 15 ಏಮ್ಸ್ (15 AIIMS)) ತೆರೆಯಲಾಗಿದೆ. ಅಷ್ಟೇ ಅಲ್ಲ 1.4 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದೆ ಎಂದು ಹಣಕಾಸು ಸಚಿವರು ಬಜೆಟ್ ಭಾಷಣದಲ್ಲಿ ಮಾಹಿತಿ ನೀಡಿದ್ದಾರೆ.  

ನಮ್ಮ ಸರ್ಕಾರ ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬ ಒಂದೇ ಘೋಷಣೆಯಡಿ ಕೆಲಸ ಮಾಡುತ್ತಿದೆ ಎಂದು ಹಣಕಾಸು ಸಚಿವರು ಹೇಳಿದರು. ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಹೆಚ್ಚು ಹೆಚ್ಚು ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗಿದೆ. ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಲು ಒತ್ತು ನೀಡಲಾಗಿದೆ. ಇದಕ್ಕಾಗಿ ಸಮಿತಿ ರಚಿಸಲಾಗುವುದು. ಯುಷ್ಮಾನ್ ಭಾರತ್ ಯೋಜನೆಯಡಿ ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು ಎದ್ನು ಹೇಳಿದ್ದಾರೆ. 

ಇದನ್ನೂ ಓದಿ : Union Budget 2024: ರೈತರಿಗಾಗಿ ಎಂಎಸ್ಪಿ ಹೆಚ್ಚಳ, 11.8 ಕೋಟಿ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಲಾಭ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಪಡಿಸುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರ ಮುನ್ನಡೆಯುತ್ತಿದೆ. 'ಕಳೆದ ನಾಲ್ಕು ವರ್ಷಗಳಲ್ಲಿ ಆರ್ಥಿಕ ಅಭಿವೃದ್ಧಿ ತ್ವರಿತ ಗತಿಯಲ್ಲಿ ನಡೆದಿದೆ ಎಂದಿದ್ದಾರೆ. ಮೀನುಗಾರಿಕೆ ಉತ್ಪಾದನೆ ದ್ವಿಗುಣಗೊಂಡಿದೆ. ಮತ್ಸ್ಯ ಸಂಪದ ಯೋಜನೆ 55 ಲಕ್ಷ ಜನರಿಗೆ ಹೊಸ ಉದ್ಯೋಗ ಒದಗಿಸಿದೆ ಎಂದು ಹೇಳಿದ್ದಾರೆ. .

ಪ್ರಧಾನಿ ನರೇಂದ್ರ ಮೋದಿ ಅವರು ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಜೊತೆಗೆ ಮತ್ತೊಂದು ಘೋಷಣೆಯನ್ನು ಸೇರಿಸಿದ್ದಾರೆ. ಅಂದರೆ ಜೈ ಜವಾನ್, ಜೈ ಕಿಸಾನ್, ಜೈ ಸೈನ್ಸ್, ಜೈ ರಿಸರ್ಚ್. ಇದಕ್ಕಾಗಿ ದೇಶದಲ್ಲಿ ಸಂಶೋಧನೆಗೆ ಉತ್ತೇಜನ ನೀಡಲಾಗುವುದು. ಸಂಶೋಧನೆಗಾಗಿ 1 ಲಕ್ಷ ಕೋಟಿ ನಿಧಿಯನ್ನು 50 ವರ್ಷಗಳವರೆಗೆ ಬಡ್ಡಿ ರಹಿತವಾಗಿ ನೀಡಲಾಗುವುದು. ಸಂಶೋಧನೆಯನ್ನು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :  Union Budget 2024: ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಉದ್ಯೋಗಿಗಳಿಗೆ ʼ3 ದಿನ ವಾರದ ರಜೆʼ ಘೋಷಣೆ..!?

ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆಯು 10 ವರ್ಷಗಳಲ್ಲಿ 28 ಪ್ರತಿಶತದಷ್ಟು ಹೆಚ್ಚಾಗಿದೆ, STEM ಕೋರ್ಸ್‌ಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರ ದಾಖಲಾತಿ ಶೇಕಡಾ 43 ರಷ್ಟಿದೆ ಎಂದು ಹೇಳಿದ್ದಾರೆ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News