7th Pay Commission: ರಾಜ್ಯ ಸರ್ಕಾರಿ ನೌಕರರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಹೌದು, ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಿದೆ. ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿರುವ ಸರ್ಕಾರ, ರಾಜ್ಯ ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆಗಳ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ನೀಡಲು ಆದೇಶವನ್ನು ಸಹ ಹೊರಡಿಸಿದೆ.
ಇದನ್ನೂ ಓದಿ-Gold Rate: ಇಂದೂ ಕೂಡ ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ, ಹೊಸ ದರಗಳು ಇಂತಿವೆ!
ಈ ಕುರಿತು ತನ್ನ ಆದೇಶದಲ್ಲಿ ಬರೆದುಕೊಂಡಿರುವ ರಾಜ್ಯ ಸರ್ಕಾರ, '2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಬರುವ ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17 ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಲು ಸರ್ಕಾರ ಹರ್ಷ ವ್ಯಕ್ತಪಡಿಸುತ್ತದೆ' ಎಂದಿದೆ. ಆದರೆ, ಈ ಮಧ್ಯಂತರ ಪರಿಹಾರ ಸರ್ಕಾರಿ ನೌಕರರ ಹುದ್ದೆಗೆ ಅನುಗುಣವಾಗಿ ಅವರ ಮೂಲವೇತನವನ್ನು ಮಾತ್ರ ಆಧರಿಸಿರಲಿದ್ದು, ಅದಕ್ಕೆ ಇನ್ನಾವುದೇ ರೀತಿಯ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ' ಎಂದು ಸರ್ಕಾರ ಹೇಳಿದೆ.
ಇದನ್ನೂ ಓದಿ-ಕಾಂಡೋಮ್ ರಾಶಿಯ ಮುಂದೆ ಮಾಡೆಲ್ ಗಳ ಮಾರ್ಜಾಲ ನಡಿಗೆ...ವಿಶೇಷ ಫ್ಯಾಶನ್ ಷೋ ನೀವು ನೋಡಿ
ಇನ್ನೊಂದೆಡೆ 'ರಾಜ್ಯ ಸರ್ಕಾರದ ನಿವೃತ್ತ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೆತನದಾರರು/ಕುಟುಂಬ ನಿವೃತ್ತಿ ವೆತನದಾರರಿಗೂ ಕೂಡ ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ಮೂಲ ವೇತನ/ಅಥವಾ ಕುಟುಂಬ ನಿವೃತ್ತಿ ವೇತನದಲ್ಲಿ ಶೆ.17 ರಷ್ಟು ಮಧ್ಯಂತರ ಪರಿಹಾರ ಅನ್ವಯಿಸಲಿದೆ' ಎಂದೂ ಕೊಡ ಸರ್ಕಾರ ಸ್ಪಷ್ಟಪ್ಪಡಿಸಿದೆ. ಇನ್ನೊಂದೆಡೆ 'ಮಂಜೂರಾದ ಈ ತಾತ್ಕಾಲಿಕ ಪರಿಹಾರ ಮೊತ್ತ ವಿಶಿಷ್ಠ ಸಂಭವನೆಯಾಗಿದ್ದು, ಇದು ನಿವೃತ್ತಿ ಸೌಲಭ್ಯ/ತುಟ್ಟಿ ಭತ್ಯೆಯನ್ನು ನಿರ್ಧರಿಸುವಾಗ ಅಥವಾ ಬೇರೆ ಯಾವುದೇ ಉದ್ದೇಶಗಳಿಗೆ ಪರಿಗಣಿಸತಕ್ಕದ್ದಲ್ಲ' ಎಂದು ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.