Petrol-Diesel Price : ವಾಹನ ಸವಾರರೆ ಗಮನಿಸಿ : ಪೆಟ್ರೋಲ್ - ಡೀಸೆಲ್ ಬೆಲೆಯಲ್ಲಿ ₹15 ಏರಿಕೆ ಸಾಧ್ಯೆತೆ!

ತೈಲ ಬೆಲೆ ಏರಿಕೆಯ ಪರಿಣಾಮ ಮುಂದಿನ ದಿನಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ಕಂಡುಬರಲಿದೆ.

Written by - Channabasava A Kashinakunti | Last Updated : Feb 25, 2022, 03:03 PM IST
  • ದೇಶಿಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ
  • 5 ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್ - ಡೀಸೆಲ್ ದರ ಏರಿಕೆ
  • CNG ಮತ್ತು LPG ಕೂಡ ದುಬಾರಿಯಾಗಲಿದೆ!
Petrol-Diesel Price : ವಾಹನ ಸವಾರರೆ ಗಮನಿಸಿ : ಪೆಟ್ರೋಲ್ - ಡೀಸೆಲ್ ಬೆಲೆಯಲ್ಲಿ ₹15 ಏರಿಕೆ ಸಾಧ್ಯೆತೆ! title=

ನವದೆಹಲಿ : ಉಕ್ರೇನ್ ಮೇಲೆ ರಷ್ಯಾ ದಾಳಿಯ ನಂತರ, ಜಾಗತಿಕ ಮಟ್ಟದಲ್ಲಿ ವಿಭಿನ್ನ ಪರಿಣಾಮಗಳನ್ನು ಬೀರುತ್ತಿವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲವು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿ ಅಂದರೆ, $103.78 (Crude Oil Price) ತಲುಪಿದೆ. ಇದಕ್ಕೂ ಮುನ್ನ ಆಗಸ್ಟ್ 2014ರಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 105 ಡಾಲರ್‌ಗೆ ಏರಿತ್ತು. ತೈಲ ಬೆಲೆ ಏರಿಕೆಯ ಪರಿಣಾಮ ಮುಂದಿನ ದಿನಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ಕಂಡುಬರಲಿದೆ.

ಹೆಚ್ಚಳ ಎರಡರಿಂದ ಮೂರು ಹಂತಗಳಲ್ಲಿ ಜಾರಿಗೆ ಬರಲಿದೆ!

ಮಾಧ್ಯಮ ವರದಿಗಳ ಪ್ರಕಾರ, 5 ರಾಜ್ಯಗಳ ವಿಧಾನಸಭಾ ಚುನಾವಣೆ(Five State Assembly Election 2022)ಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15 ರೂ.ವರೆಗೆ ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ಆದರೆ, ಬೆಲೆ ಏರಿಕೆಯನ್ನು ತೈಲ ಕಂಪನಿಗಳು ಎರಡ್ಮೂರು ಹಂತಗಳಲ್ಲಿ ಜಾರಿಗೆ ತರುವುದು ಸಮಾಧಾನದ ಸಂಗತಿ. ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಲು ಮೂರು ಪ್ರಮುಖ ಕಾರಣಗಳನ್ನು ನೋಡೋಣ.

ಇದನ್ನೂ ಓದಿ : Indian Railway Confirm Ticket App: ತತ್ಕಾಲ್ ಟಿಕೆಟ್‌ ಬುಕ್ ಮಾಡಲು ಸುಲಭ ಮಾರ್ಗ

ಕಾರಣ 1

ಕಳೆದ ಎರಡೂವರೆ ತಿಂಗಳಿನಿಂದ ಕಚ್ಚಾ ತೈಲ ಬೆಲೆ(Crude Oil Price) ಶೇ.27ರಷ್ಟು ಏರಿಕೆಯಾಗಿದೆ. ಕಚ್ಚಾ ತೈಲದ ಬೆಲೆ $ 103 ಕ್ಕಿಂತ ಹೆಚ್ಚಾಗಿದೆ. ಭಾರತ ತನ್ನ ತೈಲ ಅಗತ್ಯದ ಶೇಕಡಾ 85 ರಷ್ಟು ಆಮದು ಮಾಡಿಕೊಳ್ಳುತ್ತದೆ. ಕಚ್ಚಾ ತೈಲ ದಾಖಲೆ ಮಟ್ಟ ತಲುಪಿದ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಚಿತ ಎಂಬ ನಂಬಿಕೆ ಇದೆ.

ಕಾರಣ 2

ದೀಪಾವಳಿ ನಂತರ ದೇಶದ ಬೃಹತ್ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರ(Petrol-Diesel Price)ದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆ ಸಮಯದಿಂದ, ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ $ 20 ಕ್ಕಿಂತ ಹೆಚ್ಚು ದುಬಾರಿಯಾಗಿದೆ. ಬೆಲೆ ಸ್ಥಿರವಾಗಿರುವುದು ಕಂಪನಿಗಳ ಲಾಭದ ಮೇಲೆ ಪರಿಣಾಮ ಬೀರುತ್ತಿದೆ. ಪ್ರಸ್ತುತ, ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 95.41 ರೂ ಮತ್ತು ಡೀಸೆಲ್ 86.67 ರೂ. ಈ ಕಾರಣದಿಂದಾಗಿ ತೈಲ ಕಂಪನಿಗಳು ಬೆಲೆಗಳನ್ನು ಹೆಚ್ಚಿಸಬಹುದು.

ಕಾರಣ 3

ರಷ್ಯಾ-ಉಕ್ರೇನ್ ಯುದ್ಧವು(Russia Ukraine War) ಕಚ್ಚಾ ತೈಲ ಉತ್ಪಾದನೆ ಮತ್ತು ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ. ರಷ್ಯಾ ವಿಶ್ವದ ಅತಿದೊಡ್ಡ ತೈಲ ಉತ್ಪಾದಕ ಮತ್ತು ನೈಸರ್ಗಿಕ ಅನಿಲದ ರಫ್ತುದಾರ. ಭಾರತ ಈ ಎರಡೂ ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮುಂದಿನ ದಿನಗಳಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ದೀರ್ಘಕಾಲದವರೆಗೆ ಯುದ್ಧ ಮುಂದುವರಿದರೆ, ಕಚ್ಚಾ ತೈಲದ ಬೆಲೆ $ 120 ತಲುಪಬಹುದು ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ : 25-02-2022 Today Gold Price: ಚಿನ್ನದ ಬೆಲೆಯಲ್ಲಿ ಏರಿಕೆ!

CNG ಮತ್ತು LPG ಕೂಡ ದುಬಾರಿಯಾಗಲಿದೆ!

ನೈಸರ್ಗಿಕ ಅನಿಲ ಪೂರೈಕೆಯಲ್ಲಿನ ಅಡಚಣೆಯಿಂದಾಗಿ, ಮುಂಬರುವ ಸಮಯದಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ಮತ್ತು ಸಿಎನ್‌ಜಿ ಬೆಲೆ(LPG and CNG)ಯೂ ಏರಿಕೆಯಾಗುವ ನಿರೀಕ್ಷೆಯಿದೆ. ನೈಸರ್ಗಿಕ ಅನಿಲ ಮತ್ತು ಸಿಎನ್‌ಜಿ ದರಗಳು ಸಹ 10 ರಿಂದ 15 ರೂಪಾಯಿಗಳಷ್ಟು ಹೆಚ್ಚಾಗಬಹುದು ಎಂದು ತಜ್ಞರು ನಂಬಿದ್ದಾರೆ.

ತೈಲ ಪೂರೈಕೆಗೆ ಅಡ್ಡಿಯಾಗುವುದಿಲ್ಲ

ಮಾಧ್ಯಮ ವರದಿಗಳ ಪ್ರಕಾರ, ರಷ್ಯಾ ಮತ್ತು ಉಕ್ರೇನ್(Russia Ukraine War) ನಡುವಿನ ಯುದ್ಧದ ನಡುವೆ ಭಾರತದ ತೈಲ ಪೂರೈಕೆ ವ್ಯವಸ್ಥೆಗೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಹೋರಾಟ ತೀವ್ರಗೊಂಡರೂ ಸರಬರಾಜಿಗೆ ಧಕ್ಕೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡರು. ನಮ್ಮ ಪೂರೈಕೆದಾರರು ಪಶ್ಚಿಮ ಏಷ್ಯಾ, ಆಫ್ರಿಕಾ ಮತ್ತು ಉತ್ತರ ಅಮೇರಿಕಾದಲ್ಲಿದ್ದಾರೆ. ಈ ದಾಳಿಯಿಂದ ಅವರ ಮೇಲೆ ಯಾವುದೇ ಪರಿಣಾಮವಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News