Air India: ಸಿಬ್ಬಂದಿ ಕೊರತೆಯಿಂದ ಏರ್ ಇಂಡಿಯಾದ 75 ವಿಮಾನಗಳ ಹಾರಾಟ ಬಂದ್!
Air India Express employees strike: ಇಂದು ಸಹ 45-50 ವಿಮಾನಗಳ ಹಾರಾಟ ನಡೆಸುವುದು ಬಹುತೇಕ ಅನುಮಾನವೆಂದು ಹೇಳಲಾಗಿದೆ. ಸಿಬ್ಬಂದಿ ವಿಷಯದಲ್ಲಿ ತಾರತಮ್ಯ ಹಾಗೂ ಸಂಸ್ಥೆಯ ನಿರ್ವಹಣೆಯಲ್ಲಿನ ಸಮಸ್ಯೆಯಿಂದ ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ ಕೈಗೊಂಡಿದ್ದರು.
ನವದೆಹಲಿ: ಸಿಬ್ಬಂದಿ ಕೊರತೆಯಿಂದ ಏರ್ ಇಂಡಿಯಾದ 75 ವಿಮಾನಗಳ ಹಾರಾಟ ಶುಕ್ರವಾರ ಬಂದ್ ಆಗಿದೆ. ಸಂಸ್ಥೆ ಮತ್ತು ಸಿಬ್ಬಂದಿ ನಡುವಿನ ಜಟಾಪಟಿಯಿಂದ ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ಶೀಘ್ರವೇ ಈ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಹೇಳಲಾಗಿದೆ.
ಇನ್ನೂ 75 ವಿಮಾನಗಳ ಹಾರಾಟ ಬಂದ್ ಆಗಿದ್ದರಿಂದ ಟಿಕೆಟ್ ಶುಲ್ಕದ ಜೊತೆಗೆ ಪ್ರಯಾಣಿಕರಿಗೆ ಪರಿಹಾರ ರೂಪದಲ್ಲಿ ನೀಡಲಾಗುತ್ತಿರುವ ಹಣದಿಂದ ಏರ್ ಇಂಡಿಯಾಗೆ ಬರೋಬ್ಬರಿ 30 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್
ಸಂಸ್ಥೆಯ ಕೆಲ ಸಿಬ್ಬಂದಿ ದಿಢೀರ್ ಪ್ರತಿಭಟನೆಗೆ ಮುಂದಾಗಿದ್ದರಿಂದ ಮಂಗಳವಾರದಿಂದ 170ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ. ಇದರ ಬೆನ್ನಲ್ಲೇ 25ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿಯ ವಜಾ ಆದೇಶವನ್ನು ಸಂಸ್ಥೆ ಹಿಂಪಡೆದುಕೊಂಡಿದೆ.
ಶನಿವಾರ ಅಂದರೆ ಇಂದು ಸಹ 45-50 ವಿಮಾನಗಳ ಹಾರಾಟ ನಡೆಸುವುದು ಬಹುತೇಕ ಅನುಮಾನವೆಂದು ಹೇಳಲಾಗಿದೆ. ಸಿಬ್ಬಂದಿ ವಿಷಯದಲ್ಲಿ ತಾರತಮ್ಯ ಹಾಗೂ ಸಂಸ್ಥೆಯ ನಿರ್ವಹಣೆಯಲ್ಲಿನ ಸಮಸ್ಯೆಯಿಂದ ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ ಕೈಗೊಂಡಿದ್ದರು.
ಇದನ್ನೂ ಓದಿ: Loksabha Election 2024: ಭಾರತದ ಯಾವ ರಾಜ್ಯವು ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿದೆ?
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಬಳಿ 6 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ಈ ಪೈಕಿ 2 ಸಾವಿರ ಸಿಬ್ಬಂದಿ ಕ್ಯಾಬಿನ್ ಒಳಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಂಸ್ಥೆ ಮತ್ತು ಸಿಬ್ಬಂದಿ ನಡುವಿನ ಜಟಾಪಟಿಯಿಂದ ಸಾವಿರಾರು ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.