ಎರಡು ದಿನಗಳಲ್ಲಿ 1000 ರೂಪಾಯಿಗಳಷ್ಟು ಅಗ್ಗವಾಯಿತು ಚಿನ್ನ !

Gold Price Today : ಜಾಗತಿಕ ಮಾರುಕಟ್ಟೆಯಲ್ಲೂ ಬೆಲೆಬಾಳುವ ಲೋಹಗಳ ಬೆಲೆಯಲ್ಲಿ ಇಳಿಕೆಯಾಗಿದ್ದು, ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಕಂಡುಬರುತ್ತಿದೆ. ಕಳೆದ ಎರಡು ದಿನದಲ್ಲಿ ಚಿನ್ನದ ಬೆಲೆ ಸುಮಾರು 1000 ರೂಪಾಯಿವರೆಗೆ ಕುಸಿದಿದೆ.

Written by - Ranjitha R K | Last Updated : May 19, 2023, 10:09 AM IST
  • ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಂಡುಬಂದಿದೆ.
  • ಚಿನ್ನ ಮತ್ತು ಬೆಳ್ಳಿ ಅಬೆಲೆ ಗ್ಗವಾಗಿದೆ.
  • ಇಂದು ಎಷ್ಟಿದೆ ತಿಳಿಯಿರಿ ಚಿನ್ನದ ಬೆಲೆ
ಎರಡು ದಿನಗಳಲ್ಲಿ 1000 ರೂಪಾಯಿಗಳಷ್ಟು ಅಗ್ಗವಾಯಿತು ಚಿನ್ನ !  title=

Gold Price Today : ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಂಡುಬಂದಿದೆ. ಚಿನ್ನ ಮತ್ತು ಬೆಳ್ಳಿ ಬೆಲೆ ಅಗ್ಗವಾಗಿದೆ. ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿಯುತ್ತಿದೆ. ನಿನ್ನೆ ಸಂಜೆ ವೇಳೆಗೆ ಚಿನ್ನದ ಬೆಲೆ 60,000 ರೂಪಾಯಿ ಮಟ್ಟದಲ್ಲಿ ಮುಕ್ತಾಯವಾಗಿದೆ. ಇದಲ್ಲದೇ ಬೆಳ್ಳಿ ಬೆಲೆಯಲ್ಲಿಯೂ ಇಳಿಕೆಯಾಗಿದೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಈ ಬಗ್ಗೆ ಮಾಹಿತಿ ನೀಡಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಬೆಲೆಬಾಳುವ ಲೋಹಗಳ ಬೆಲೆಯಲ್ಲಿ ಇಳಿಕೆಯಾಗಿದ್ದು, ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಕಂಡುಬರುತ್ತಿದೆ. ಕಳೆದ ಎರಡು ದಿನದಲ್ಲಿ ಚಿನ್ನದ ಬೆಲೆ ಸುಮಾರು 1000 ರೂಪಾಯಿವರೆಗೆ ಕುಸಿದಿದೆ.

ಅಗ್ಗವಾಯಿತು ಚಿನ್ನ ಮತ್ತು ಬೆಳ್ಳಿ  :
ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಗುರುವಾರ ಪ್ರತಿ 10 ಗ್ರಾಂ ಚಿನ್ನದ ಬೆಲೆ 480 ರೂಪಾಯಿ ಇಳಿಕೆಯಾಗಿ 60,070 ರೂಪಾಯಿಗಳಿಗೆ ತಲುಪಿದೆ. ಅದೇ ಸಮಯದಲ್ಲಿ, ಕಳೆದ ವಹಿವಾಟಿನಲ್ಲಿ, ಚಿನ್ನದ ಬೆಲೆ 10 ಗ್ರಾಂಗೆ 60,550 ರೂ. ಆಗಿತ್ತು. ಇದಲ್ಲದೇ ಬೆಳ್ಳಿಯ ಬೆಲೆಯೂ 530 ರೂಪಾಯಿ ಇಳಿಕೆಯಾಗಿ ಪ್ರತಿ ಕೆಜಿಗೆ 72,750 ರೂಪಾಯಿಗಳಿಗೆ ತಲುಪಿದೆ. 

ಇದನ್ನೂ ಓದಿ : Credit-Debit Card ಗಳಿಂದ ಹಣ ಖರ್ಚು ಮಾಡುವ ನಿಯಮಗಳಲ್ಲಿ ಬದಲಾವಣೆ, ವಿತ್ತ ಸಚಿವಾಲಯದಿಂದ ಹೊಸ ನಿಯಮಗಳು ಜಾರಿ

ತಜ್ಞರ ಅಭಿಪ್ರಾಯವೇನು ? :
ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ  ಪ್ರಕಾರ ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 480 ರೂ. ಇಳಿಕೆಯಾಗಿ  60,070 ರೂ.ಗೆ  ತಲುಪಿದೆ. 

ಜಾಗತಿಕ ಮಾರುಕಟ್ಟೆಯ ಸ್ಥಿತಿ ಹೇಗಿತ್ತು? :
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನ ಪ್ರತಿ ಔನ್ಸ್‌ಗೆ 1,975 ಡಾಲರ್‌ಗೆ ಕುಸಿದರೆ, ಬೆಳ್ಳಿ ಪ್ರತಿ ಔನ್ಸ್‌ಗೆ 23.60 ಡಾಲರ್‌ಗೆ ಇಳಿಕೆಯಾಗಿದೆ. ಏಷ್ಯಾದ ವಹಿವಾಟಿನ ವೇಳೆಯಲ್ಲಿ ಗುರುವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಯುಎಸ್ ಡಾಲರ್ ಏರಿಕೆಯು ಅಮೂಲ್ಯವಾದ ಲೋಹದ ಬೆಲೆಯ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.

ಇದನ್ನೂ ಓದಿ RBI Money: 535 ಕೋಟಿ ಹೊತ್ತೋಯ್ಯುತ್ತಿದ್ದ ಲಾರಿ, ದಾರಿಯಲ್ಲಿ ಇದ್ದಕ್ಕಿದಂತೆ ಇಂಜಿನ್ ನಿಂದ ಹೊಗೆ ಬರಲಾರಂಭಿಸಿತು... ಮುಂದೇನಾಯ್ತು?

ನಿಮ್ಮ ನಗರದ ದರಗಳನ್ನು ಪರಿಶೀಲಿಸಿ : 
ನಿಮ್ಮ ಮನೆಯಲ್ಲಿ ಕುಳಿತುಕೊಂಡೆ  ಚಿನ್ನದ ಬೆಲೆಯನ್ನು ಪರಿಶೀಲಿಸಬಹುದು. ಇಂಡಿಯನ್ ಬುಲಿಯನ್ ಮತ್ತು ಜ್ಯುವೆಲರ್ಸ್ ಅಸೋಸಿಯೇಷನ್ ​​ಪ್ರಕಾರ, 8955664433 ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಬೆಲೆಯನ್ನು ಪರಿಶೀಲಿಸಬಹುದು. ನೀವು ಯಾವ ಸಂಖ್ಯೆಯಿಂದ ಸಂದೇಶವನ್ನು ಕಳುಹಿಸುತ್ತೀರೋ ಅದೇ ಸಂಖ್ಯೆಗೆ ಚಿನ್ನದ ಬೆಲೆ ಎಷ್ಟು ಎನ್ನುವ ಸಂದೇಶ ಬರುತ್ತದೆ. 

ಚಿನ್ನ ಖರೀದಿ ವೇಳೆ ಈ ವಿಚಾರಗಳು ನೆನಪಿರಲಿ :
ನೀವು ಕೂಡಾ ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. 'ಬಿಐಎಸ್ ಕೇರ್ ಆ್ಯಪ್' ಮೂಲಕ ನೀವು ಚಿನ್ನದ ಶುದ್ಧತೆ ನಿಮ್ಮ ಬಾಲಿ ಇರುವ ಚಿನ್ನ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪರಿಶೀಲಿಸಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.

ಇದನ್ನೂ ಓದಿ : Indian Economy: 2024 ರಲ್ಲಿ ಭಾರತದ ಆರ್ಥಿಕ ಅಭಿವೃದ್ಧಿ ದರ ಶೇ.6.7 ರಷ್ಟಿರಲಿದೆ, ಹಣದುಬ್ಬರದಲ್ಲಿಯೂ ಕೂಡ ಇಳಿಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News