ಮನೆಯಲ್ಲಿ ಇಷ್ಟೇ ಚಿನ್ನಾಭರಣ ಇಟ್ಟುಕೊಳ್ಳಬಹುದು !ಇದಕ್ಕಿಂತ ಹೆಚ್ಚು ಬಂಗಾರ ಇಟ್ಟುಕೊಂಡಿದ್ದರೆ ಖಂಡಿತಾ ಮನೆ ತಲುಪುವುದು ಆದಾಯ ತೆರಿಗೆ ಇಲಾಖೆ ನೋಟೀಸ್

ಆದಾಯ ತೆರಿಗೆ ನಿಯಮಗಳ ಪ್ರಕಾರ, ಮನೆಯಲ್ಲಿ ಚಿನ್ನಾಭರಣಗಳನ್ನು ಇಟ್ಟುಕೊಳ್ಳುವ ಮಿತಿಯ ಬಗ್ಗೆ ತಿಳಿದುಕೊಂಡಿರುವುದು ಬಹಳ ಮುಖ್ಯ. ಮನೆಯಲ್ಲಿ ಚಿನ್ನಾಭರಣಗಳನ್ನು ಮಿತಿಯೊಳಗೆ ಇಡುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ.  

Written by - Ranjitha R K | Last Updated : Mar 17, 2025, 05:05 PM IST
  • ಮನೆಯಲ್ಲಿ ಚಿನ್ನಾಭರಣ ಇಟ್ಟುಕೊಳ್ಳುವುದಕ್ಕೆ ಮಿತಿ
  • ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಸಹ ಅತ್ಯಂತ ಸುರಕ್ಷಿತ ಹೂಡಿಕೆ
  • ಮನೆಯಲ್ಲಿ ಚಿನ್ನಾಭರಣಗಳನ್ನು ಮಿತಿಯೊಳಗೆ ಇಡುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ
ಮನೆಯಲ್ಲಿ ಇಷ್ಟೇ ಚಿನ್ನಾಭರಣ ಇಟ್ಟುಕೊಳ್ಳಬಹುದು !ಇದಕ್ಕಿಂತ ಹೆಚ್ಚು ಬಂಗಾರ  ಇಟ್ಟುಕೊಂಡಿದ್ದರೆ ಖಂಡಿತಾ ಮನೆ ತಲುಪುವುದು ಆದಾಯ ತೆರಿಗೆ ಇಲಾಖೆ ನೋಟೀಸ್

ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದಲ್ಲಿ, ಚಿನ್ನ ಮತ್ತು ಚಿನ್ನದ ಆಭರಣಗಳಿಗೆ ಹೆಚ್ಚಿನ ಮಹತ್ವ ಇದೆ. ಮನೆಯಲ್ಲಿ ಯಾವುದೇ ಹಬ್ಬ ಅಥವಾ ಆಚರಣೆ ಇದ್ದರೂ ಅಲ್ಲಿ ಚಿನ್ನ ಖರೀದಿ ಇದ್ದೇ ಇರುತ್ತದೆ. ಮದುವೆ, ಮಗುವಿನ ಜನನ ಸೇರಿದಂತೆ ಎಲ್ಲಾ ರೀತಿಯ ಆಚರಣೆಗಳಲ್ಲಿ ಚಿನ್ನಾಭರಣಗಳನ್ನು ನೀಡುವ ಸಂಪ್ರದಾಯವಿದೆ.

Add Zee News as a Preferred Source

ಮನೆಯಲ್ಲಿ ಚಿನ್ನಾಭರಣ ಇಟ್ಟುಕೊಳ್ಳುವುದಕ್ಕೆ ಮಿತಿ : 
ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಸಹ ಅತ್ಯಂತ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುತ್ತದೆ. ಹಬ್ಬದ ಋತುಗಳಲ್ಲಿ ಚಿನ್ನ ಖರೀದಿಸುವುದನ್ನು ಶುಭ ಘಟನೆ ಎಂದು ಹೇಳಲಾಗುತ್ತದೆ. ಭದ್ರತಾ ಕಾರಣಗಳಿಗಾಗಿ, ಚಿನ್ನಾಭರಣಗಳನ್ನು ಸಾಮಾನ್ಯವಾಗಿ ಬ್ಯಾಂಕ್ ಲಾಕರ್‌ನಲ್ಲಿ ಇಡಲಾಗುತ್ತದೆ. ಇದಲ್ಲದೆ, ಮನೆಯಲ್ಲಿ ಒಂದು ನಿರ್ದಿಷ್ಟ ಪ್ರಮಾಣದ ಆಭರಣಗಳಿರುತ್ತವೆ. ಈ ಸಂದರ್ಭದಲ್ಲಿ, ಆದಾಯ ತೆರಿಗೆ ನಿಯಮಗಳ ಪ್ರಕಾರ, ಮನೆಯಲ್ಲಿ ಚಿನ್ನಾಭರಣಗಳನ್ನು ಇಟ್ಟುಕೊಳ್ಳುವ ಮಿತಿಯ ಬಗ್ಗೆ ತಿಳಿದುಕೊಂಡಿರುವುದು ಬಹಳ ಮುಖ್ಯ. ಮನೆಯಲ್ಲಿ ಚಿನ್ನಾಭರಣಗಳನ್ನು ಮಿತಿಯೊಳಗೆ ಇಡುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ.

ಇದನ್ನೂ ಓದಿ : ಏಪ್ರಿಲ್ 1ರಿಂದ ಮಾರುತಿ ಸುಜುಕಿ ಕಾರುಗಳು ಮತ್ತೆ ದುಬಾರಿ!; ಗ್ರಾಹಕರ ಜೇಬಿಗೆ ಮತ್ತಷ್ಟು ಕತ್ತರಿ!!

ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು? :
ವಿವಾಹಿತ ಮಹಿಳೆಯರು 500 ಗ್ರಾಂ ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಹೊಂದಬಹುದು. ಅವಿವಾಹಿತ ಮಹಿಳೆಯರು 250 ಗ್ರಾಂ ವರೆಗೆ ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಇಟ್ಟುಕೊಳ್ಳಬಹುದು. ಪುರುಷರು ಮನೆಯಲ್ಲಿ 100 ಗ್ರಾಂ ಚಿನ್ನವನ್ನು ಇಟ್ಟುಕೊಳ್ಳಬಹುದು. ಈ ಮಿತಿ ಒಬ್ಬ ವ್ಯಕ್ತಿಗೆ ಎನ್ನುವುದು ಇಲ್ಲಿ ಗಮನಾರ್ಹ.  ಉದಾಹರಣೆಗೆ, ಮನೆಯಲ್ಲಿ ಇಬ್ಬರು ವಿವಾಹಿತ ಮಹಿಳೆಯರಿದ್ದರೆ, ಅವರು ಒಂದು ಕಿಲೋಗ್ರಾಂ ಚಿನ್ನವನ್ನು ಇಟ್ಟುಕೊಳ್ಳಬಹುದು.ಅದೇ ರೀತಿ, ಮನೆಯಲ್ಲಿ ವಿವಾಹಿತ ಮಹಿಳೆ ಮತ್ತು ವಿವಾಹಿತ ಪುರುಷ ಇದ್ದರೆ, ಅವರು 750 ಗ್ರಾಂ ಚಿನ್ನವನ್ನು ಇಟ್ಟುಕೊಳ್ಳಬಹುದು.

ಮನೆಯಲ್ಲಿ ಇರುವ ಚಿನ್ನಾಭರಣಕ್ಕೆ ದಾಖಲೆಗಳು ಅಗತ್ಯ :
ಆದಾಯ ತೆರಿಗೆ ನಿಯಮಗಳ ಪ್ರಕಾರ, ನಿಗದಿತ ಮಿತಿಗಿಂತ ಹೆಚ್ಚಿನ ಚಿನ್ನವನ್ನು ಹೊಂದಿದ್ದರೆ, ಆದಾಯ ತೆರಿಗೆ ಅಧಿಕಾರಿಗಳಿಗೆ ಇದಕ್ಕೆ ಪುರಾವೆಯನ್ನು ಒದಗಿಸಬೇಕು.  ಚಿನ್ನಾಭರಣ ಖರೀದಿಸಿರುವುದಕ್ಕೆ ಸರಿಯಾದ ದಾಖಲೆಗಳಿದ್ದರೆ, ಅದರ ಬಗ್ಗೆ ಚಿಂತಿಸಬೇಕಾಗಿಲ್ಲ. ಆದರೆ ನಿಗದಿತ ಮಿತಿಯನ್ನು ಮೀರಿದ ಆಭರಣ ಖರೀದಿಗೆ ರಶೀದಿಗಳು ಮತ್ತು ಅವುಗಳ ಮೇಲೆ ಪಾವತಿಸಿದ ತೆರಿಗೆಗೆ ಸಂಬಂಧಿಸಿದ ದಾಖಲೆಗಳು ನಿಮ್ಮ ಬಳಿ ಇಲ್ಲದಿದ್ದರೆ, ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. 

ಇದನ್ನೂ ಓದಿ : ಸತತ ಏರಿಕೆಗೆ ಬ್ರೇಕ್..‌ ಏಕಾಏಕಿ ಇಳಿಕೆ ಕಂಡ ಬಂಗಾರ! ಇಂದೆಷ್ಟಿದೆ 10 ಗ್ರಾಂ ಚಿನ್ನದ ಬೆಲೆ?!

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News