ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಕಹಿ ಸುದ್ದಿ ಇದೆ. ಹಾಲಿನ ದರ ಏರಿಕೆ ಬಗ್ಗೆ ಕೆಎಂಎಫ್ ಮನವಿ ಮಾಡಿ ತಿಂಗಳುಗಳೇ ಕಳೆದಿದ್ದರೂ ಈ ಬಗ್ಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಈ ಮಧ್ಯೆ, ಸರ್ಕಾರದ ಒಪ್ಪಿಗೆ ಇಲ್ಲದೆಯೇ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಹಾಲಿನ ದರ ಏರಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ ಇಂದಿನಿಂದ ಹಾಲಿನ ದರ ಮೂರು ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೇ ಎಂದು ವರದಿಯಾಗಿದೆ.
ವಾಸ್ತವವಾಗಿ, ಕರ್ನಾಟಕ ಹಾಲು ಮಹಾಮಂಡಳಿ ಅಂದರೆ ಕೆಎಂಎಫ್ ಕಳೆದ ಎಂಟು ತಿಂಗಳ ಹಿಂದೆಯೇ ಸಂಕಷ್ಟದಲ್ಲಿರುವ ರೈತರಿಗೆ ಸಹಕರಿಸುವ ನಿಟ್ಟಿನಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 5 ರೂಪಾಯಿ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಸರ್ಕಾರದಿಂದ ಈ ಬಗ್ಗೆ ಯಾವುದೇ ನಿರ್ಧಾರ ಇನ್ನೂ ಹೊರಬಿದ್ದಿಲ್ಲ. ಈ ಮಧ್ಯೆಯೇ, ಹಾಲಿನ ದರವನ್ನು ಪ್ರತಿ ಲೀಟರ್ಗೆ 3 ರೂಪಾಯಿ ಹೆಚ್ಚಿಸಲು ಕೆಎಂಎಫ್ ನಿರ್ಧರಿಸಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ- EPFO Update: ಬಿಗ್ ಅಪ್ಡೇಟ್- ಇನ್ಮುಂದೆ ಈ ಜನರಿಗೂ ಕೂಡ ಸಿಗಲಿದೆ ಪೆನ್ಷನ್ ಲಾಭ!
ಹಾಲು ದರ ಏರಿಕೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳದ ಹಿನ್ನಲೆಯಲ್ಲಿ ಹಾಲು ಮಹಾಮಂಡಳಿಯ 14 ಒಕ್ಕೂಟಗಳಿಂದಲೂ ಹಾಲಿನ ದರವನ್ನು ಪ್ರತಿ ಲೀಟರ್ಗೆ 3 ರೂ. ಏರಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ- 7th Pay Commission : ಕೇಂದ್ರ ನೌಕರರಿಗೆ ಸಿಹಿ ಸುದ್ದಿ : ನಿಮ್ಮ ಡಿಎ ಹೆಚ್ಚಳಕ್ಕೆ ಡೇಟ್ ಫಿಕ್ಸ್!
ದೆಹಲಿಯಲ್ಲಿ ಇಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಹಾಲು ಮಹಾಮಂಡಳಿಯಿಂದ ಮಹತ್ವದ ಸಭೆ ನಡೆಯುತ್ತಿದ್ದು, ಸಭೆ ಬಳಿಕ ಈ ಬಗ್ಗೆ ಘೋಷಿಸುವ ಸಾಧ್ಯತೆ ಇದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.