ನವದೆಹಲಿ : ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರವು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಪ್ರಮುಖವಾಗಿದೆ. ಈ ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ವರ್ಷ 6000 ರೂ. ನೀಡಲಾಗುತ್ತದೆ. ಇದೀಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕ್‌ಗಳಿಗೆ ಮತ್ತೊಂದು ಸೂಚನೆ ನೀಡಿದ್ದಾರೆ. ಗ್ರಾಮಗಳಲ್ಲಿನ ಜನರ ಆದಾಯವನ್ನು ಹೆಚ್ಚಿಸಲು ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಸುಲಭ ರೀತಿಯಲ್ಲಿ ಸಾಲವನ್ನು ನೀಡುವಂತೆ ಹಣಕಾಸು ಸಚಿವರು ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಸೂಚಿಸಿದ್ದಾರೆ. 


COMMERCIAL BREAK
SCROLL TO CONTINUE READING

ಸುಧಾರಿತ ತಂತ್ರಜ್ಞಾನಕ್ಕಾಗಿ ನೆರವು ನೀಡಲು ಗ್ರಾಮೀಣ ಬ್ಯಾಂಕ್‌ಗಳಿಗೆ ಮನವಿ : 
ಹಣಕಾಸು ಸಚಿವರು ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಒಂದು ಗಂಟೆ ಕಾಲ ಸಭೆ ನಡೆಸಿದರು. ಸಭೆಯಲ್ಲಿ ಅವರು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಿಗೆ ತಂತ್ರಜ್ಞಾನವನ್ನು ನವೀಕರಿಸಲು ಸಹಾಯ ಮಾಡುವಂತೆ  ಮನವಿ ಮಾಡಿದ್ದಾರೆ. ಸಭೆಯ ನಂತರ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರುಷೋತ್ತಮ ರೂಪಾಲಾ ಮಾತನಾಡಿ, ಹಣಕಾಸು ಸಚಿವರು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪರಿಶೀಲಿಸಿದ್ದಾರೆ ಮತ್ತು ಈ ಕ್ಷೇತ್ರಕ್ಕೆ ಸಾಂಸ್ಥಿಕ ಸಾಲವನ್ನು ಹೇಗೆ ಒದಗಿಸಬಹುದು ಎನ್ನುವುದರ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಿದ್ದಾರೆ.  


ಇದನ್ನೂ ಓದಿ : Arecanut Price: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆಗೆ ಬಂಪರ್ ಧಾರಣೆ


ಕೃಷಿ ಸಾಲದಲ್ಲಿ ಗ್ರಾಮೀಣ ಬ್ಯಾಂಕ್ ಪ್ರಮುಖ ಪಾತ್ರ:
ಆರ್ಥಿಕ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೀನುಗಾರಿಕೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿರುವ ಎಲ್ಲರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವ ಕುರಿತು ಚರ್ಚಿಸಲಾಯಿತು ಎಂದು ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ ಕೆ.ಕರದ್ ತಿಳಿಸಿದ್ದಾರೆ.  ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕುರಿತು ನಡೆದ ಮತ್ತೊಂದು ಅಧಿವೇಶನದಲ್ಲಿ ಪ್ರಾಯೋಜಕ ಬ್ಯಾಂಕ್‌ಗಳು ಡಿಜಿಟಲೀಕರಣ ಮತ್ತು ತಂತ್ರಜ್ಞಾನ ಸುಧಾರಣೆಗೆ ನೆರವಾಗಬೇಕು ಎಂದು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಕೃಷಿ ಸಾಲದಲ್ಲಿ ಪ್ರಮುಖ ಪಾತ್ರವನ್ನು ಹೊಂದಿವೆ. 


ಇದನ್ನೂ ಓದಿ : ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ರೈಲ್ವೇ ಸಚಿವರು


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.