ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ 368 ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ: ಬಿ.ಇ/ಬಿ.ಟೆಕ್, ಬಿ.ಎಸ್ಸಿ/ಪದವಿ, ಗ್ರಾಜುಯೇಶನ್ ಮತ್ತು ಎಂಬಿಎ(MBA) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಸೆಕೆಂಡ್ ಹ್ಯಾಂಡ್ Car ಖರೀದಿಗೂ ಸಿಗುತ್ತೆ ಸಾಲ, ಈ 7 ಬ್ಯಾಂಕ್ ಗಳಲ್ಲಿ ಅಂತ್ಯಂತ ಕಡಿಮೆ ಬಡ್ಡಿದರ
ವಯೋಮಿತಿ: ನವೆಂಬರ್ 30, 2020ರ ಅನ್ವಯ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 32 ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ಅಗ್ಗವಾಗಲಿದೆಯೇ ಚಿನ್ನ? 2021ರ ಆರಂಭಕ್ಕೆ ರೂ.42,000 ಕ್ಕೆ ಇಳಿಯಲಿದೆಯಂತೆ Gold Rate
ವೇತನ: ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,80,000/-ರೂ ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.
Post Office ಉಳಿತಾಯ ಖಾತೆಯ ನಿಯಮದಲ್ಲಿ ಬದಲಾವಣೆ
ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 1000/-ರೂ, ಪ.ಜಾ/ಪ.ಪಂ ಅಭ್ಯರ್ಥಿಗಳು 170/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Adani Loan Issue: SBI ಗೆ ಎಚ್ಚರಿಕೆ ನೀಡ ಫ್ರಾನ್ಸ್ ಕಂಪನಿ, ಅಡಾಣಿ ಕಂಪನಿಗೆ ಸಾಲ ನೀಡಿದರೆ?
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಶೀಘ್ರವೇ ಸರ್ಕಾರ ಜಾರಿಗೆ ತರಲಿದೆ ದೇಸಿ ಇ-ಕಾಮರ್ಸ್ ಪ್ಲಾಟ್ಫಾರ್ಮ್, Amazon ಹಾಗೂ Flipkartಗೆ ಭಾರಿ ಪೈಪೋಟಿ
ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://www.aai.aero/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15.2020 ರಿಂದ ಜನವರಿ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.