ನವದೆಹಲಿ: India Post Payments Bank - ವರ್ಷದ ಕೊನೆಯ ತಿಂಗಳು ನಡೆಯುತ್ತಿದೆ. ಕೆಲವು ದಿನಗಳ ನಂತರ, ಹೊಸ ವರ್ಷ 2022 ಪ್ರಾರಂಭವಾಗುತ್ತದೆ. ಇದರೊಂದಿಗೆ ದೊಡ್ಡ ನಿಯಮಗಳೂ ಬದಲಾಗಲಿವೆ. ಈ ಅನುಕ್ರಮದಲ್ಲಿ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಗ್ರಾಹಕರಿಗೂ ಶಾಕ್ ಕಾದಿದೆ. ಈ ಬ್ಯಾಂಕಿನ ಖಾತೆದಾರರು ಮಿತಿಯಿಂದ ಹಣವನ್ನು ಹಿಂಪಡೆಯಲು (ATM Cash Withdrawal) ಮತ್ತು ಠೇವಣಿ (Atm Cash Deposit) ಮಾಡಲು ಶುಲ್ಕವನ್ನು ಪಾವತಿಸಬೇಕಾಗಳಿದೆ. ಈ ನಿಯಮವು ಜನವರಿ 1 ರಿಂದ ಜಾರಿಗೆ ಬರಲಿದೆ.


COMMERCIAL BREAK
SCROLL TO CONTINUE READING

ಈ ಕುರಿತು ಮಾಹಿತಿ ನೀಡಿದ ಬ್ಯಾಂಕ್ 
IPPBಯಲ್ಲಿ ಮೂರು ರೀತಿಯ ಉಳಿತಾಯ ಖಾತೆಗಳನ್ನು ತೆರೆಯಲಾಗುತ್ತದೆ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ. ಈ ಬ್ಯಾಂಕಿನಲ್ಲಿ ಇನ್ನೂ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೀಡಿದ ಮಾಹಿತಿಯ ಪ್ರಕಾರ, ಮೂಲ ಉಳಿತಾಯ ಖಾತೆಯಿಂದ ಪ್ರತಿ ತಿಂಗಳು ನಾಲ್ಕು ಬಾರಿ ನಗದು ಹಿಂಪಡೆಯುವಿಕೆ ಉಚಿತವಾಗಿದೆ. ಆದರೆ ಇದರ ನಂತರ, ಗ್ರಾಹಕರು ಪ್ರತಿ ಹಿಂಪಡೆಯುವಿಕೆಯ ಮೇಲೆ ಕನಿಷ್ಠ 25 ರೂ. ಪಾವತಿಸಬೇಕು. ಬೇಸಿಕ್ ಉಳಿತಾಯ ಖಾತೆಯಲ್ಲಿ ಹಣವನ್ನು ಠೇವಣಿ ಮಾಡಲು ಯಾವುದೇ ಶುಲ್ಕವಿರುವುದಿಲ್ಲ.


ಇದನ್ನೂ ಓದಿ-Post Office ಬ್ಯಾಂಕ್ ಬಡ್ಡಿ ದರ ಇಳಿಕೆ, ಉಳಿದ ಶುಲ್ಕ ಹೆಚ್ಚಳ; ಯಾವಾಗ ಜಾರಿಗೆ ಬರಲಿದೆ


ಎಷ್ಟು ಶುಲ್ಕ ವಿಧಿಸಲಾಗುತ್ತದೆ?
ಈ ಬ್ಯಾಂಕ್‌ನಲ್ಲಿ ಉಳಿತಾಯ ಮತ್ತು ಚಾಲ್ತಿ ಖಾತೆಗಳಲ್ಲಿ ಒಂದು ತಿಂಗಳಲ್ಲಿ 10,000 ರೂ.ಗಳನ್ನು ಠೇವಣಿ ಮಾಡಲು ಯಾವುದೇ ಶುಲ್ಕವಿರುವುದಿಲ್ಲ. ಈ ಮಿತಿಗಿಂತ ಹೆಚ್ಚು ಠೇವಣಿ ಇಟ್ಟರೆ ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸಲಾಗುವುದು ಎಂದು ಬ್ಯಾಂಕ್ ತಿಳಿಸಿದೆ. ಮೂಲ ಉಳಿತಾಯ ಖಾತೆಯನ್ನು ಹೊರತುಪಡಿಸಿ ಇತರ ಉಳಿತಾಯ ಖಾತೆ ಮತ್ತು ಚಾಲ್ತಿ ಖಾತೆಯಿಂದ ಪ್ರತಿ ತಿಂಗಳು 25,000 ರೂ.ಗಳನ್ನು ಹಿಂಪಡೆಯಲು ಯಾವುದೇ ಶುಲ್ಕವಿರುವುದಿಲ್ಲ. ಇದೇ ವೇಳೆ  ಉಚಿತ ಮಿತಿಯ ನಂತರ ನೀವು ಪ್ರತಿ ಬಾರಿ ಹಣವನ್ನು ಹಿಂಪಡೆಯಲು ಕನಿಷ್ಠ 25 ರೂಪಾಯಿಗಳನ್ನು ಶುಲ್ಕದ ರೂಪದಲ್ಲಿ ಪಾವತಿಸಬೇಕು.


ಇದನ್ನೂ ಓದಿ-Post Office: ಪೋಸ್ಟ್ ಆಫೀಸ್ ಗ್ರಾಹಕರೇ ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ ಈ ಎಲ್ಲ ನಿಯಮಗಳು!


IPPB ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಈ ಎಲ್ಲಾ ನಿಯಮಗಳು ಜನವರಿ 1, 2022 ರಿಂದಅನ್ವಯಿಸಲಿವೆ.  ಅಂದರೆ ಜನವರಿ 1ರಿಂದ ಗ್ರಾಹಕರು ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ. GST/CESS ಅನ್ನು ಪ್ರತ್ಯೇಕವಾಗಿ ವಿಧಿಸಲಾಗುವುದು. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಈ ಹಿಂದೆ ಆಗಸ್ಟ್ 1, 2021 ರಂದು ಮನೆ ಬಾಗಿಲಿನ ಬ್ಯಾಂಕಿಂಗ್ ಶುಲ್ಕಗಳ ಹೊಸ ದರಗಳನ್ನು ಜಾರಿಗೆ ತಂದಿತ್ತು ಎಂಬುದು ಇಲ್ಲಿ ಗಮನಾರ್ಹ.


ಇದನ್ನೂ ಓದಿ-Post Office ಖಾತೆಗೆ ಸಂಬಂಧಿಸಿದಂತೆ ತಪ್ಪದೇ ತಿಳಿಯಿರಿ ಈ ಮಾಹಿತಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.