ಯಾವುದೇ ಶ್ಯುರಿಟಿ, ಗ್ಯಾರಂಟಿ ಇಲ್ಲದೆ ಸಿಗುವುದು 40 ಲಕ್ಷವರೆಗಿನ ಲೋನ್ !ಅದು ಕೂಡಾ ಈ ಸರ್ಕಾರಿ ಬ್ಯಾಂಕ್ ನಲ್ಲಿ

PM-Vidyalaxmi Scheme: ಭಾರತದ ಯುವಜನರು ಗುಣಮಟ್ಟದ ಉನ್ನತ ಶಿಕ್ಷಣವನ್ನು ಪಡೆಯಲು ಯಾವುದೇ ರೀತಿಯ ಆರ್ಥಿಕ ನಿರ್ಬಂಧಗಳು ತೊಡಕಾಗದಂತೆ ನೋಡಿಕೊಳ್ಳುವುದು ಇದರ ಗುರಿಯಾಗಿದೆ. 

Written by - Ranjitha R K | Last Updated : Mar 28, 2025, 09:26 AM IST
  • ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.
  • ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ನೆರವು ಪಡೆಯುವ ವಿದ್ಯಾರ್ಥಿಗಳಿಗಾಗಿ ಈ ಯೋಜನೆ
  • ಅರ್ಹ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಗುರಿ
ಯಾವುದೇ ಶ್ಯುರಿಟಿ, ಗ್ಯಾರಂಟಿ ಇಲ್ಲದೆ ಸಿಗುವುದು 40 ಲಕ್ಷವರೆಗಿನ ಲೋನ್ !ಅದು ಕೂಡಾ ಈ ಸರ್ಕಾರಿ ಬ್ಯಾಂಕ್ ನಲ್ಲಿ

ಬೆಂಗಳೂರು : ದೇಶದ ಪ್ರಮುಖ ಸರ್ಕಾರಿ ಬ್ಯಾಂಕ್ ಆಫ್ ಬರೋಡಾ ಗುರುವಾರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಯು ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ನೆರವು ಪಡೆಯುವ ವಿದ್ಯಾರ್ಥಿಗಳಿಗಾಗಿ ಕೇಂದ್ರ ಸರ್ಕಾರದ ಒಂದು ಉಪಕ್ರಮವಾಗಿದೆ. ಭಾರತದ ಯುವಜನರು ಗುಣಮಟ್ಟದ ಉನ್ನತ ಶಿಕ್ಷಣವನ್ನು ಪಡೆಯಲು ಯಾವುದೇ ರೀತಿಯ ಆರ್ಥಿಕ ನಿರ್ಬಂಧಗಳು ತೊಡಕಾಗದಂತೆ ನೋಡಿಕೊಳ್ಳುವುದು ಇದರ ಗುರಿಯಾಗಿದೆ.  

"ಅರ್ಜಿದಾರರು ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿಯಲ್ಲಿ ಶಿಕ್ಷಣ ಸಾಲಕ್ಕಾಗಿ ಬ್ಯಾಂಕ್ ಆಫ್ ಬರೋಡಾದಿಂದPM-Vidyalaxmi ವೇದಿಕೆಯ ಮೂಲಕ ಡಿಜಿಟಲ್ ರೂಪದಲ್ಲಿ ಅರ್ಜಿ ಸಲ್ಲಿಸಬಹುದು. ದೇಶಾದ್ಯಂತ ವಿದ್ಯಾರ್ಥಿಗಳ ಅಗತ್ಯಗಳನ್ನು ಪೂರೈಸಲು ಬ್ಯಾಂಕ್ 12 dedicated education loan sanctioning cells (ELSC) ಮತ್ತು 119 ರಿಟೇಲ್ ಅಸೆಟ್ ಪ್ರೊಸೆಸಿಂಗ್ ಸೆಲ್ ಗಳನ್ನು (RAPC) ಹೊಂದಿದೆ. 

ಇದನ್ನೂ ಓದಿ : ನೀವು ATM ಮತ್ತು UPI ಮೂಲಕ PF ಹಣವನ್ನು ಹಿಂಪಡೆಯಬಹುದು..! ಹೇಗೆ ಗೊತ್ತೆ..?

ಅರ್ಹ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಗುರಿ :
ಬ್ಯಾಂಕ್ ಆಫ್ ಬರೋಡಾ ಸರ್ಕಾರಿ ಬ್ಯಾಂಕ್ ಆಗಿದ್ದು, ಭಾರತ ಸರ್ಕಾರದ ಒಡೆತನದಲ್ಲಿದೆ.ಇದರಲ್ಲಿ ಸರ್ಕಾರ ಶೇ. 63.97 ರಷ್ಟು ಪಾಲುದಾರಿಕೆ ಹೊಂದಿದೆ. ಯೋಜನೆ ಬಗ್ಗೆ ಮಾತನಾಡಿದ ಬ್ಯಾಂಕ್ ಆಫ್ ಬರೋಡಾ ಕಾರ್ಯನಿರ್ವಾಹಕ ನಿರ್ದೇಶಕ ಸಂಜಯ್ ಮುದ್ಲಿಯಾರ್, ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮತ್ತು ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಲಭ್ಯವಾಗುವಂತೆ ನೋಡಿಕೊಳ್ಳುವ ಗುರಿಯನ್ನು ಹೊಂದಿದೆ ಎಂದು ಹೇಳಿದರು. ಇದರ ಅಡಿಯಲ್ಲಿ, ಯಾವುದೇ ಭದ್ರತೆ ಮತ್ತು ಖಾತರಿ ಇಲ್ಲದೆ ಶಿಕ್ಷಣ ಸಾಲವನ್ನು ನೀಡಲಾಗುತ್ತದೆ. ಇದನ್ನು ಸಂಪೂರ್ಣವಾಗಿ ಡಿಜಿಟಲ್ ಅಪ್ಲಿಕೇಶನ್ ಪ್ರಕ್ರಿಯೆಯ ಮೂಲಕ ಪಡೆಯಬಹುದಾಗಿದೆ. 

40.00 ಲಕ್ಷದವರೆಗಿನ ಕೊಲೇಟರಲ್ ಫ್ರೀ ಶಿಕ್ಷಣ ಸಾಲ :
ಸರ್ಕಾರ ಗುರುತಿಸಿರುವ 860 ಉನ್ನತ ಗುಣಮಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ (QHEIs) ಪ್ರವೇಶ ಪಡೆಯಲು ಬಯಸುವ ಎಲ್ಲಾ ವಿದ್ಯಾರ್ಥಿಗಳು ಈ ಯೋಜನೆಯಡಿಯಲ್ಲಿ ಶಿಕ್ಷಣ ಸಾಲವನ್ನು ಪಡೆಯಲು ಅರ್ಹರಾಗಿರುತ್ತಾರೆ. ಬ್ಯಾಂಕುಗಳು ವ್ಯಾಪ್ತಿಯನ್ನು ವಿಸ್ತರಿಸಲು ಪ್ರೋತ್ಸಾಹಿಸಲು ಭಾರತ ಸರ್ಕಾರವು 7.5 ಲಕ್ಷ ರೂ.ವರೆಗಿನ ಸಾಲದ ಮೊತ್ತಕ್ಕೆ ಶೇ.75 ರಷ್ಟು ಕ್ರೆಡಿಟ್ ಗ್ಯಾರಂಟಿಯನ್ನು ಒದಗಿಸಲಿದೆ.

ಇದನ್ನೂ ಓದಿ : ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಹೊಸ ಆದಾಯ ತೆರಿಗೆ ನಿಯಮಗಳು!ನೀವು ತಿಳಿದುಕೊಳ್ಳಲೇಬೇಕಾದ 10 ಬದಲಾವಣೆಗಳು !

ಇದಲ್ಲದೆ, ಕುಟುಂಬದ ಆದಾಯ ತುಂಬಾ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲವನ್ನು ಹೆಚ್ಚು ಕೈಗೆಟುಕುವಂತೆ ಮಾಡಲಾಗಿದೆ. ಅಂಥಹ ವಿದ್ಯಾರ್ಥಿಗಳಿಗೆ ಈ ಸಾಲವನ್ನು ಅತ್ಯಂತ ಕಡಿಮೆ ಅಥವಾ ಭಾಗಶಃ ಬಡ್ಡಿದರದಲ್ಲಿ ಪಡೆಯುತ್ತಾರೆ.

ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಯ ಜೊತೆಗೆ, ಬ್ಯಾಂಕ್ ಆಫ್ ಬರೋಡಾ ಭಾರತದ ಎಲ್ಲಾ ಕೋರ್ಸ್‌ಗಳಿಗೆ 7.5 ಲಕ್ಷ ರೂ.ಗಳವರೆಗೆ ಮೇಲಾಧಾರ ರಹಿತ ಶಿಕ್ಷಣ ಸಾಲವನ್ನು ನೀಡುವುದಾಗಿ ಹೇಳಿದೆ. ಇದಲ್ಲದೆ, ಬ್ಯಾಂಕ್ ಭಾರತದ 384 ಗೊತ್ತುಪಡಿಸಿದ ಸಂಸ್ಥೆಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ 40.00 ಲಕ್ಷ ರೂ.ಗಳವರೆಗೆ ಮೇಲಾಧಾರ-ಮುಕ್ತ ಶಿಕ್ಷಣ ಸಾಲವನ್ನು ನೀಡುತ್ತದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News