Bank Strike 2023: ಬ್ಯಾಂಕ್ ಗ್ರಾಹಕರ ಪಾಲಿಗೆ ಒಂದು ಮಹತ್ವದ ಸುದ್ದಿ ಪ್ರಕಟವಾಗಿದೆ. ನೀವೂ ಒಂದು ವೇಳೆ ಈ ತಿಂಗಳ ಕೊನೆಯಲ್ಲಿ ಬ್ಯಾಂಕ್‌ಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಹೊಂದಿದ್ದರೆ, ಅದನ್ನು ಸಮಯ ಇರುವಾಗಲೇ ಇತ್ಯರ್ಥಪಡಿಸಿಕೊಳ್ಳಿ. ಏಕೆಂದರೆ, ಜನವರಿ 28 ರಿಂದ ಜನವರಿ 31 ರವರೆಗೆ, ಬ್ಯಾಂಕಿಂಗ್ ಕೆಲಸವನ್ನು ನಿಭಾಯಿಸುವಲ್ಲಿ ನಿಮಗೆ ಅಡಚಣೆಗಳು ಎದುರಾಗುವ ಸಾಧ್ಯತೆ ಇದೆ. ಬ್ಯಾಂಕ್ ಯೂನಿಯನ್ 2 ದಿನಗಳ ಕಾಲ ಮುಷ್ಕರ ನಡೆಸಲು ನಿರ್ಧರಿಸಿದೆ.


COMMERCIAL BREAK
SCROLL TO CONTINUE READING

4 ದಿನಗಳವರೆಗೆ ಏಕೆ ತೊಂದರೆ ?
ಜನವರಿ 28 ರಂದು ತಿಂಗಳ ನಾಲ್ಕನೇ ಶನಿವಾರ, ಈ ಕಾರಣದಿಂದಾಗಿ ಬ್ಯಾಂಕ್ ಗಳಿಗೆ ರಜೆ ಇರುತ್ತದೆ. ಇದರ ಬೆನ್ನಲ್ಲೇ ಭಾನುವಾರದ ಕಾರಣ ಜನವರಿ 29 ರಂದು ದೇಶಾದ್ಯಂತ ಬ್ಯಾಂಕುಗಳಿಗೆ ಸಾರ್ವಜನಿಕ ರಜಾದಿನ ಇರಲಿದೆ. ಇದೆಲ್ಲದರ ಹೊರತಾಗಿ ಬ್ಯಾಂಕ್ ಯೂನಿಯನ್ ಜನವರಿ 30 ಮತ್ತು 31 ರಂದು ಮುಷ್ಕರವನ್ನು ಘೋಷಿಸಿದ್ದು, ಇದರಿಂದಾಗಿ ಗ್ರಾಹಕರು 4 ದಿನಗಳ ಕಾಲ ತೊಂದರೆ ಅನುಭವಿಸಬೇಕಾಗಬಹುದು.


ತಮ್ಮ ಬೇಡಿಕೆ ಈಡೇರಿಕೆಗೆ ಮುಷ್ಕರ
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್‌ಬಿಯು) ಸಭೆ ಮುಂಬೈನಲ್ಲಿ ನಡೆದಿದ್ದು, ಎರಡು ದಿನಗಳ ಕಾಲ ಮುಷ್ಕರ ನಡೆಸಲು ಬ್ಯಾಂಕ್ ಒಕ್ಕೂಟಗಳು ನಿರ್ಧರಿಸಿವೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಬ್ಯಾಂಕ್ ಒಕ್ಕೂಟಗಳು ಮುಷ್ಕರ ನಡೆಸುತ್ತಿವೆ.


5 ದಿನಗಳಲ್ಲಿ ಬ್ಯಾಂಕಿಂಗ್ ಕೆಲಸ ಮಾಡಬೇಕು
ಈ ಕುರಿತು ಮಾಹಿತಿ ನೀಡಿದ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ, ಯುನೈಟೆಡ್ ಫೋರಂನ ಸಭೆ ನಡೆಸಲಾಗಿದ್ದು, 2 ದಿನಗಳ ಕಾಲ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 5 ದಿನಗಳ ಕಾಲ ಬ್ಯಾಂಕಿಂಗ್ ಕೆಲಸ ಮಾಡಬೇಕು ಎಂಬುದು ಬ್ಯಾಂಕ್ ಒಕ್ಕೂಟಗಳ ಬೇಡಿಕೆಯಾಗಿದೆ ಎಂದು ತಿಳಿಸಿದರು. ಇದರೊಂದಿಗೆ ಪಿಂಚಣಿಯನ್ನೂ ಸಹ ನವೀಕರಿಸಬೇಕು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ-CPI Inflation: ಜನಸಾಮಾನ್ಯರಿಗೊಂದು ಸಂತಸದ ಸುದ್ದಿ


ಜೊತೆಗೆ ಈ ಬೇಡಿಕೆಗಳು ಕೂಡ ಈಡೇರಬೇಕು
ಇದರೊಂದಿಗೆ ಎನ್ ಪಿಎಸ್ ರದ್ದುಪಡಿಸಿ ವೇತನ ಹೆಚ್ಚಳಕ್ಕೆ ಮಾತುಕತೆ ನಡೆಸಬೇಕು ಎಂಬುದು ನೌಕರರ ಆಗ್ರಹವಾಗಿದೆ. ಇದೆಲ್ಲದರ ಹೊರತಾಗಿ ಎಲ್ಲ ಕೇಡರ್ ಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕೆಂಬ ಆಗ್ರಹ ಕೇಳಿ ಬಂದಿದೆ. ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸಲು ಸಂಘ ನಿರ್ಧರಿಸಿದೆ.


ಇದನ್ನೂ ಓದಿ-Bank Facility: ಉಳಿತಾಯ ಖಾತೆಯ ಮೇಲೂ FD ಬಡ್ಡಿ ಪಡೆಯಬೇಕೆ? ಈ ಒಂದು ಕೆಲಸ ಮಾಡಿ ಸಾಕು


ಗ್ರಾಹಕರು ಸತತ 4 ದಿನಗಳವರೆಗೆ ತೊಂದರೆ ಎದುರಿಸಬೇಕಾಗಲಿದೆ
ಶನಿವಾರ ಮತ್ತು ಭಾನುವಾರ ಬ್ಯಾಂಕ್ ರಜೆ ಇದೆ . ಇದಾದ ನಂತರ ಸೋಮವಾರ ಮತ್ತು ಮಂಗಳವಾರ ಬ್ಯಾಂಕ್ ಮುಷ್ಕರ ನಡೆಯುತ್ತಿದ್ದು, ಗ್ರಾಹಕರು ಸಮಸ್ಯೆ ಎದುರಿಸಬೇಕಾಗಬಹುದು. ಎಟಿಎಂನಲ್ಲಿ ಹಣ ಖಾಲಿಯಾಗುವ ಸಮಸ್ಯೆ ತಲೆದೋರಬಹುದು. ಇದರೊಂದಿಗೆ, ಚೆಕ್ ಕ್ಲಿಯರೆನ್ಸ್ ಬಗ್ಗೆಯೂ ಸಮಸ್ಯೆಗಳಿರಬಹುದು ಎಂಬುದು ಇಲ್ಲಿ ಉಲ್ಲೇಖನೀಯ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.