Bank Strike in India: ಮುಂಬರುವ ದಿನಗಳಲ್ಲಿ ಬ್ಯಾಂಕ್ ಗೆ ಸಂಬಂದಿಸಿದ ಯಾವುದೇ ಕೆಲಸವಿದ್ದಲ್ಲಿ ಈ ಸುದ್ದಿಯನ್ನು ತಪ್ಪದೆ ಓದಿ. ಏಕೆಂದರೆ, ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆ ಗ್ರಾಹಕರು ಸಮಸ್ಯೆ ಎದುರಿಸಬೇಕಾಗಬಹುದು. ಈ ಅವಧಿಯಲ್ಲಿ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಗ್ರಾಹಕರು ತಮ್ಮ ಎಲ್ಲಾ ಪ್ರಮುಖ ಕೆಲಸಗಳನ್ನು ನಾಳೆಯೇ ಪೂರ್ಣಗೊಳಿಸಬೇಕು, ಇದರಿಂದ ಯಾವುದೇ ರೀತಿಯ ಸಮಸ್ಯೆ ಇರುವುದಿಲ್ಲ.


COMMERCIAL BREAK
SCROLL TO CONTINUE READING

ನವೆಂಬರ್ 19 ರಂದು ಮುಷ್ಕರ 
ಎಐಬಿಇಎಯಿಂದ ಪಡೆದ ಮಾಹಿತಿಯ ಪ್ರಕಾರ, ನವೆಂಬರ್ 19 ರಂದು ದೇಶವ್ಯಾಪಿ ಮುಷ್ಕರವನ್ನು ಆಯೋಜಿಸಲಾಗುವುದು. ಇದರೊಂದಿಗೆ ತಿಂಗಳ ಮೂರನೇ ಶನಿವಾರದ ಕಾರಣ ಗ್ರಾಹಕರು ಸಮಸ್ಯೆ ಎದುರಿಸಬೇಕಾಗಬಹುದು. ಬ್ಯಾಂಕ್ ಆಫ್ ಬರೋಡಾ ಹೊರಡಿಸಿರುವ ಪ್ರಕಟಣೆಯಲ್ಲಿ, ಮುಷ್ಕರಕ್ಕೆ ಸಂಬಂಧಿಸಿದಂತೆ ನೋಟಿಸ್ ಕಳುಹಿಸುವ ಮೂಲಕ ಮಾಹಿತಿ ನೀಡಲಾಗಿದೆ.


ಬ್ಯಾಂಕ್ ಈಗಾಗಲೇ ಮಾಹಿತಿ ನೀಡಿದೆ
ಇದಲ್ಲದೆ ಬ್ಯಾಂಕ್ ಆಫ್ ಬರೋಡಾ ಮತ್ತು ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ಗಳು ಮುಷ್ಕರದ ಬಗ್ಗೆ ಈಗಾಗಲೇ ಗ್ರಾಹಕರಿಗೆ ಮಾಹಿತಿಯನ್ನು ನೀಡಿವೆ. ಮುಷ್ಕರದ ಸಂದರ್ಭದಲ್ಲಿ ಸೇವೆಗಳ ಮೇಲೆ ಪರಿಣಾಮ ಉಂಟಾಗಬಹುದು ಎಂದು ಈಗಾಗಲೇ ಬ್ಯಾಂಕ್‌ ವತಿಯಿಂದ ತಿಳಿಯಪಡಿಸಲಾಗಿದೆ.


ಇದನ್ನೂ ಓದಿ-Toll Tax: ಈ ಜನರು ಹೆದ್ದಾರಿಗಳಲ್ಲಿ ಸಂಚರಿಸುವಾಗ ಟೋಲ್ ಟ್ಯಾಕ್ಸ್ ಪಾವತಿಸಬೇಕಾಗಿಲ್ಲ!


ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಕೂಡ ಮಾಹಿತಿ ನೀಡಿದೆ
ಈ ಕುರಿತು ಮಾಹಿತಿ ನೀಡಿರುವ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಕೂಡ ದೇಶದ ಹಲವು ಉದ್ಯೋಗಿಗಳು ಮುಷ್ಕರದಲ್ಲಿ ಭಾಗವಹಿಸಬಹುದು ಎಂದು ಹೇಳಿದೆ. ಇಂತಹ ಪರಿಸ್ಥಿತಿಯಲ್ಲಿ, ಬ್ಯಾಂಕಿನ ಅನೇಕ ಶಾಖೆಗಳ ಕೆಲಸದ ಮೇಲೆ ಪರಿಣಾಮ ಉಂಟಾಗಬಹುದು ಎಂದು ಹೇಳಿದೆ.


ಇದನ್ನೂ ಓದಿ-Post Officeನಲ್ಲಿರುವ ಈ ಸ್ಕೀಮ್ ನಿಂದ ಯಾವುದೇ ಅಪಾಯವಿಲ್ಲದೆ ಬ್ಯಾಂಕ್ ಗಿಂತ ಹೆಚ್ಚು ಲಾಭ ಪಡೆಯಬಹುದು


ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯಗಳ ಲಾಭ ಪಡೆಯಿರಿ
ಬ್ಯಾಂಕ್‌ನ ಕೆಲಸವನ್ನು ಸರಿಯಾಗಿ ನಡೆಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಿಒಬಿ ಹೆಚ್ಚಿನ ಮಾಹಿತಿಯಲ್ಲಿ ತಿಳಿಸಿದೆ. ಇದರೊಂದಿಗೆ ಗ್ರಾಹಕರು ಆನ್‌ಲೈನ್ ಸೇವೆಗಳ ಲಾಭವನ್ನು ಪಡೆಯಬಹುದು. ಇದಕ್ಕಾಗಿ ನೀವು ಚಿಂತಿಸಬೇಕಾಗಿಲ್ಲ. ನೆಟ್ ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ರೀತಿಯ ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯಗಳ ಲಾಭವನ್ನು ನೀವು ಪಡೆಯಬಹುದು.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ