Card Control System: ಡಿಜಿಟಲ್ ಯುಗದಲ್ಲಿ ಪ್ರತಿ ಕೆಲಸವನ್ನೂ ನಾವು ಬಹಳ ಸುಲಭವಾಗಿ  ಮಾಡಬಹುದು. ಹೀಗಾಗಿಯೇ ಭಾರತ ಸರ್ಕಾರವು ಸಹ ಡಿಜಿಟಲ್ ಇಂಡಿಯಾದತ್ತ ಮುಖ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಹಲವು ಅಭಿಯಾನಗಳನ್ನು ಕೈಗೊಂಡಿದೆ. ಇದು ಡಿಜಿಟಲ್ ವಹಿವಾಟುಗಳಲ್ಲಿ ತ್ವರಿತ ಹೆಚ್ಚಳಕ್ಕೆ ಕಾರಣವಾಗಿದೆ.  ಭಾರತದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಆನ್‌ಲೈನ್ ವಹಿವಾಟುಗಳ ಸಂಖ್ಯೆ ವೇಗವಾಗಿ ಹೆಚ್ಚಾಗಿದೆ. ಆದರೆ, ನೆನಪಿರಲಿ ಕಾರ್ಡ್ ನಿಯಂತ್ರಣಗಳನ್ನು ಸಕ್ರಿಯಗೊಳಿಸದಿದ್ದರೆ ಯಾವುದೇ ಆನ್‌ಲೈನ್ ಅಥವಾ ಆಫ್‌ಲೈನ್ ವಹಿವಾಟುಗಳಿಗೆ ಸಂಬಂಧಿತ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಅನ್ನು ಬಳಸಲಾಗುವುದಿಲ್ಲ.  


COMMERCIAL BREAK
SCROLL TO CONTINUE READING

ವಾಸ್ತವವಾಗಿ, ಹೊಸ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಗಳನ್ನು ನೀಡಿದಾಗ ಕಾರ್ಡ್ ನಿಯಂತ್ರಣ ಕಾರ್ಯವಿಧಾನವನ್ನು ಡಿಫಾಲ್ಟ್ ಆಗಿ ಸ್ವಿಚ್ ಆಫ್ ಮಾಡಲಾಗಿರುತ್ತದೆ. ಇದನ್ನು ಆನ್ ಮಾಡದೆ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಅನ್ನು ಆನ್‌ಲೈನ್ ಅಥವಾ ಆಫ್‌ಲೈನ್ ವಹಿವಾಟುಗಳಿಗೆ ಬಳಸಲು ಸಾಧ್ಯವಾಗುವುದಿಲ್ಲ.  ಅರ್ಥಾತ್,  ನೆಟ್ ಬ್ಯಾಂಕಿಂಗ್, ಮೊಬೈಲ್ ಅಪ್ಲಿಕೇಶನ್ ಅಥವಾ ಬ್ಯಾಂಕ್‌ನ ಶಾಖೆಯಲ್ಲಿ ಕಾರ್ಡ್ ನಿಯಂತ್ರಣಗಳನ್ನು ಸಕ್ರಿಯಗೊಳಿಸದೆ ನೀವು ಯಾವುದೇ ಆನ್‌ಲೈನ್ ಅಥವಾ ಆಫ್‌ಲೈನ್ ವಹಿವಾಟಿಗೆ ನಿಮ್ಮ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಅನ್ನು ಬಳಸಲಾಗುವುದಿಲ್ಲ. ಕಾರ್ಡ್ ವಹಿವಾಟುಗಳ ಸುರಕ್ಷತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಬದಲಾವಣೆಗಳನ್ನು (ಕಾರ್ಡ್ ನಿಯಂತ್ರಣಗಳು) ವಿನ್ಯಾಸಗೊಳಿಸಲಾಗಿದೆ. 


ಇದನ್ನೂ ಓದಿ- ಭರ್ಜರಿ ಇಳಿಕೆ ಕಂಡ ಬಂಗಾರದ ಬೆಲೆ! ನಿರಂತರ ಕುಸಿತದ ಬಳಿಕ ಇವತ್ತೆಷ್ಟಿದೆ ತಿಳಿಯಿರಿ 10 ಗ್ರಾಂ ಚಿನ್ನದ ರೇಟ್


ಆನ್‌ಲೈನ್ ಬಳಕೆಗಾಗಿ ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ಅನ್ನು ಹೇಗೆ ಸಕ್ರಿಯಗೊಳಿಸುವುದು?
* ನಿಮ್ಮ ಡೆಬಿಟ್/ಕ್ರೆಡಿಟ್ ಕಾರ್ಡುಗಳ ವಹಿವಾಟು ಮಿತಿಗಳ ಕಾರ್ಯವಿಧಾನವನ್ನು ಸಕ್ರಿಯಗೊಳಿಸಲು ತಮ್ಮ ಬ್ಯಾಂಕ್‌ನ ಮೊಬೈಲ್ ಅಪ್ಲಿಕೇಶನ್/ನೆಟ್ ಬ್ಯಾಂಕಿಂಗ್/ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಸಕ್ರಿಯಗೊಳಿಸಬಹುದು. 
* ಕಾರ್ಡ್ ನಿಯಂತ್ರಣ ಕಾರ್ಯವಿಧಾನದ ಮೂಲಕ, ನಿಮ್ಮ ಕಾರ್ಡ್‌ನ ಕಾರ್ಯಗಳನ್ನು ನೀವು ನಿಷ್ಕ್ರಿಯಗೊಳಿಸಬಹುದು ಅಥವಾ ಸಕ್ರಿಯಗೊಳಿಸಬಹುದು. 
* ಈ ಮೂಲಕ ನೀವು ಕಾರ್ಡ್ ಮೂಲಕ ಆನ್‌ಲೈನ್ ವಹಿವಾಟು ಮಾಡಬಹುದೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಬಹುದು.
* ನಿಮ್ಮ ಬ್ಯಾಂಕಿಂಗ್ ಅಪ್ಲಿಕೇಶನ್‌ನಿಂದ ನೀವು ಈ ಕೆಲಸವನ್ನು ಸುಲಭವಾಗಿ ಮಾಡಬಹುದು.


ಇದನ್ನೂ ಓದಿ- ವ್ಯವಸ್ಥಿತ ಹೂಡಿಕೆಯ ಯೋಜನೆಗಳಲ್ಲಿ ಎಷ್ಟು ವಿಧಗಳಿವೆ ನಿಮಗೆ ಗೊತ್ತಾ !


ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ಹೊಸ ಮಾರ್ಗಸೂಚಿಗಳ ಪ್ರಕಾರ, ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾದರೂ ಈಗ ಕೆಲವು ರೀತಿಯ ಆಯ್ಕೆಗಳನ್ನು ಸ್ವತಃ ಆಯ್ಕೆ ಮಾಡಬಹುದು. ಇದರ ಅಡಿಯಲ್ಲಿ, ನೀವು ಅಂತರರಾಷ್ಟ್ರೀಯ ವಹಿವಾಟು, ಆನ್‌ಲೈನ್ ಶಾಪಿಂಗ್ ಮತ್ತು ಸಂಪರ್ಕರಹಿತ ಪಾವತಿಯಂತಹ ಮೋಡ್‌ಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=q9auZ2eqeZo
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.