ಬೆಂಗಳೂರು: ಬೆಂಗಳೂರಿನ ಉದ್ದೇಶಿತ 2ನೇ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಸ್ಥಳವನ್ನು ನಿರ್ಧರಿಸಲು ರಾಜ್ಯ ಸರ್ಕಾರವು ಶೀಘ್ರದಲ್ಲೇ ಸಭೆ ನಡೆಸಲಿದೆ ಎಂದು ಮೂಲಸೌಕರ್ಯ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಪ್ರಯಾಣಿಕರ ಹೊರೆ ತಪ್ಪಿಸಲು ಮತ್ತು ಅಸ್ತಿತ್ವದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಸಂಪರ್ಕ ಕಲ್ಪಿಸುವ ಎರಡು ಪ್ರಮುಖ ಅಂಶಗಳನ್ನು ಪರಿಗಣಿಸಿ ಈ ವಿಮಾನ ನಿಲ್ದಾಣ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.   


COMMERCIAL BREAK
SCROLL TO CONTINUE READING

ರಾಜ್ಯ ರಾಜಧಾನಿಯ ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅಗತ್ಯವಾಗಿದ್ದು, ಇದನ್ನು ಎಲ್ಲಿ ನಿರ್ಮಿಸಬೇಕು ಅನ್ನೋದರ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಮತ್ತು ಸಿಎಂ ಸಿದ್ದರಾಮಯ್ಯರ ಜೊತೆಗೆ ವಿಚಾರ ವಿನಿಯಮ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಅಂತಾ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. 


ಇದನ್ನೂ ಓದಿ: ದಿವಾಳಿ ಎಂದು ಘೋಷಿಸಿಕೊಂಡಿರುವ ಅನಿಲ್ ಅಂಬಾನಿ ವಾಸವಿರುವುದು 17 ಅಂತಸ್ತಿನ ಅರಮನೆಯಲ್ಲಿ ! 5000 ಕೋಟಿ ವೆಚ್ಚದ ಈ ಐಶಾರಾಮಿ ಮನೆಯ ಫೋಟೋ ಇಲ್ಲಿವೆ


‘ಪ್ರಯಾಣಿಕರ ಹೊರೆಗೆ ಆದ್ಯತೆ ನೀಡಿದರೆ ಸರ್ಜಾಪುರ, ಕನಕಪುರ ರಸ್ತೆಯಂತಹ ಪ್ರದೇಶಗಳ ಮೇಲೆ ಫೋಕಸ್‌ ಮಾಡಬೇಕಾಗುತ್ತದೆ. ಆದರೆ ಈಗಿರುವ ವಿಮಾನ ನಿಲ್ದಾಣಕ್ಕೆ ಸಂಪರ್ಕವನ್ನು ಕೇಂದ್ರೀಕರಿಸಿದರೆ, ತುಮಕೂರು ಮತ್ತು ದಾಬಸ್‌ ಪೇಟೆಯಂತಹ ಸ್ಥಳಗಳು ಮುನ್ನೆಲೆಗೆ ಬರುತ್ತವೆ. ಈ ವಿಚಾರಗಳನ್ನು ಮುಂಬರುವ ಇಲಾಖಾ ಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳೊಂದಿಗೆ ಪರಿಶೀಲಿಸಲಾಗುವುದು. ಸಚಿವ ಸಂಪುಟ ಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.  


150KM ವ್ಯಾಪ್ತಿಯೊಳಗೆ ಮತ್ತೊಂದು ವಿಮಾನ ನಿಲ್ದಾಣವನ್ನು ಸ್ಥಾಪಿಸುವುದನ್ನು ನಿರ್ಬಂಧಿಸುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ವಿಶೇಷತೆಯ ಷರತ್ತು 2032ರಲ್ಲಿ ಮುಕ್ತಾಯಗೊಳ್ಳುತ್ತದೆ. ಇದು 2033ರ ವೇಳೆಗೆ ಹೊಸ ವಿಮಾನ ನಿಲ್ದಾಣದ ಸಾಧ್ಯತೆಯನ್ನು ತೆರೆಯುತ್ತದೆ. "ಅಗತ್ಯವಿರುವ ಸಮಯವನ್ನು ಪರಿಗಣಿಸಿ ಭೂಸ್ವಾಧೀನ ಮತ್ತು ಭೂಮಾಲೀಕರಿಗೆ ಪರಿಹಾರ, ಸರ್ಕಾರವು ಯೋಜನೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಸಾಮೂಹಿಕ ವಿವಾಹದಲ್ಲಿ ಭಾಗಿಯಾದ ಪ್ರತಿ ಜೋಡಿಗೂ ಅಂಬಾನಿ ಕುಟುಂಬ ನೀಡಿದ ಉಡುಗೊರೆ ಅಷ್ಟಿಷ್ಟಲ್ಲ !ಚಿನ್ನ, ಬೆಳ್ಳಿ, ನಗದು ಎಲ್ಲವೂ ಅಲ್ಲಿತ್ತು !


ನ್ಯೂಯಾರ್ಕ್ ಮತ್ತು ಲಂಡನ್‌ನಂತಹ ಪ್ರಮುಖ ನಗರಗಳು ಬಹು ವಿಮಾನ ನಿಲ್ದಾಣಗಳನ್ನು ಹೊಂದಿವೆ. ಮುಂಬೈನಲ್ಲಿ 2 ವಿಮಾನ ನಿಲ್ದಾಣಗಳ ನಡುವಿನ ಅಂತರವು 36KM ಇದೆ ಎಂದು ಇದೇ ವೇಳೆ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು. ಹೊಸೂರಿನಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸುವ ತಮಿಳುನಾಡು ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಐಎಎಲ್‌ನೊಂದಿಗಿನ ವಿಶೇಷ ಷರತ್ತು ಈ ಪರಿಸ್ಥಿತಿಗೆ ಅನ್ವಯಿಸುತ್ತದೆಯೇ ಎಂದು ಪರಿಶೀಲಿಸಬೇಕಾಗಿದೆ ಎಂದು ಹೇಳಿದರು. ಕರ್ನಾಟಕ ಸರ್ಕಾರವು 2ನೇ ವಿಮಾನ ನಿಲ್ದಾಣಕ್ಕಾಗಿ ಭೂಮಿಗಾಗಿ ಸಕ್ರಿಯವಾಗಿ ಶೋಧಿಸುತ್ತಿದೆ ಮತ್ತು ನಿಗದಿತ ಸಭೆಗಳ ನಂತರ ಹೆಚ್ಚಿನ ಬೆಳವಣಿಗೆಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.