Best Mileage Bike in 2024: ಹೆಚ್ಚುತ್ತಿರುವ ಪೆಟ್ರೋಲ್ ಬೆಲೆಗಳನ್ನು ಗಮನದಲ್ಲಿಟ್ಟುಕೊಂಡು, ಅನೇಕ ಜನರು ಹೆಚ್ಚಿನ ಮೈಲೇಜ್ ಬೈಕ್‌ಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಅಲ್ಲದೆ, ಬಜೆಟ್‌ನಲ್ಲಿ ಕೈಗೆಟುಕುವ ಬೈಕ್‌ಗಳನ್ನು ಖರೀದಿಸಲು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅಂತವರಿಗಾಗಿಯೇ ಆಟೋ ಕಂಪನಿಗಳು ರೂ.80,000ಕ್ಕಿಂತ ಕಡಿಮೆ ಬೆಲೆಯ ಮೋಟಾರ್ ಸೈಕಲ್ ಗಳನ್ನು ತಯಾರಿಸುತ್ತಿವೆ. ಇದಲ್ಲದೇ ಕೆಲವು ಕಂಪನಿಗಳು ಈ ಹಿಂದೆ ಬಿಡುಗಡೆ ಮಾಡಿರುವ ಮಾಡಿಫೈ ಬೈಕ್ ಗಳನ್ನೂ ಮಾರಾಟ ಮಾಡುತ್ತಿವೆ. ನೀವು ಸಹ ನಿಮ್ಮ ಬಜೆಟ್‌ನಲ್ಲಿ ಹೆಚ್ಚಿನ ಮೈಲೇಜ್ ಬೈಕ್ ಖರೀದಿಸಲು ಬಯಸುವುದಾದರೆ ಖಂಡಿತ ಈ ಮಾಹಿತಿ ನಿಮಗೆ ಸಹಾಯವಾಗಲಿದೆ.
ಬಜಾಜ್ ಪ್ಲಾಟಿನಾ 110 (Bajaj Platina 110 Bike)
ಈ ಬಜಾಜ್ ಪ್ಲಾಟಿನಾ 110 ಬೈಕ್ ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 100 ಕಿಲೋ ಮೀಟರ್ ಮೈಲೇಜ್ ನೀಡುತ್ತದೆ. ಈ ಬೈಕ್‌ಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಇದು 115.5 ಸಿಸಿ ಎಂಜಿನ್ ಹೊಂದಿದ್ದು, 8.7 PS ಪವರ್ ಮತ್ತು 9.81 Nm ಟಾರ್ಕ್ ಅನ್ನು ಸಹ ಉತ್ಪಾದಿಸುತ್ತದೆ. ಇದಲ್ಲದೆ, ಈ ಬೈಕ್ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇದು ನಿಮ್ಮ ಬಜೆಟ್‌ಗೆ ತಕ್ಕವಾದ ಬೈಕ್‌ಗಳಲ್ಲಿ ಒಂದಾಗಿದೆ.
ಇದನ್ನೂ ಓದಿ: ಪ್ರತಿ 5 ನಿಮಿಷಕ್ಕೆ 1 ಹುಂಡೈ ಕ್ರೆಟಾ ಮಾರಾಟ! ಒಟ್ಟು 10 ಲಕ್ಷ ಯೂನಿಟ್‌ಗಳ ಮಾರಾಟದ ದಾಖಲೆ!
ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್
ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಇದು ಅತ್ಯಂತ ಕಡಿಮೆ ಬೆಲೆಯಲ್ಲಿ ಪ್ರೀಮಿಯಂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ, ಅನೇಕ ಯುವಕರು ಇದನ್ನು ಖರೀದಿಸುವಲ್ಲಿ ಆಸಕ್ತಿ ತೋರುತ್ತಿದ್ದಾರೆ. ಅಲ್ಲದೇ, ಪ್ರತಿ ಲೀಟರ್ ಪೆಟ್ರೋಲ್ ಗೆ ಗರಿಷ್ಠ 80 ಕಿಮೀ ಮೈಲೇಜ್ ನೀಡುವುದರೊಂದಿಗೆ ಈ ಬೈಕ್ 125 ಸಿಸಿ ಎಂಜಿನ್ ಹೊಂದಿದೆ. ಇದಲ್ಲದೆ, ಈ ಎಂಜಿನ್ 9.1 ಪಿಎಸ್ ಪವರ್ ಮತ್ತು 9.8 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಟಿವಿಎಸ್ ಸ್ಟಾರ್ ಸಿಟಿ ಪ್ಲಸ್
ಈ ಬೈಕ್‌ಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದ್ದು, ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್ ಆಕರ್ಷಣೀಯ ವಿನ್ಯಾಸ ಮತ್ತು ಹೆಚ್ಚಿನ ಮೈಲೇಜ್ ಹೊಂದಿದೆ. ಇದರೊಂದಿಗೆ ಪ್ರತಿ ಲೀಟರ್ ಪೆಟ್ರೋಲ್ ಗೆ 75 ಕಿಲೋ ಮೀಟರ್ ವರೆಗೆ ಮೈಲೇಜ್ ನೀಡುತ್ತದೆ. ಇದು 110cc ಎಂಜಿನ್‌ನೊಂದಿಗೆ 8.4 PS ಪವರ್ ಮತ್ತು 8.7 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಹೋಂಡಾ ಸಿಡಿ 110 ಡ್ರೀಮ್ ಡಿಎಕ್ಸ್ (Honda CD 110 Dream DX)
ಹೋಂಡಾ ಸಿಡಿ 110 ಡ್ರೀಮ್ ಡಿಎಕ್ಸ್ ಬೈಕ್ ಅತ್ಯಂತ ಶಕ್ತಿಶಾಲಿ ಎಂಜಿನ್‌ನೊಂದಿಗೆ ಸಿಗುತ್ತದೆ. ಇದು ಪ್ರತಿ ಲೀಟರ್‌ಗೆ ಗರಿಷ್ಠ 74 ಮೈಲೇಜ್ ನೀಡುವುದರ ಜೊತೆಗೆ 110 ಸಿಸಿ ಎಂಜಿನ್ ಇದ್ದು, ಮಾರುಕಟ್ಟೆಯಲ್ಲಿ ಈ ಬೈಕ್ ಲಭ್ಯವಿದೆ. ಇದಲ್ಲದೆ, ಈ ಎಂಜಿನ್ 8.6 ಪಿಎಸ್ ಪವರ್ ಮತ್ತು 9.0 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ ಮತ್ತು ಅನೇಕ ಶಕ್ತಿಶಾಲಿ ವೈಶಿಷ್ಟ್ಯಗಳನ್ನು ಹೊಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.