ರಾಜ್ಯದಲ್ಲಿ ಹೂಡಿಕೆಗೆ ಬೆಸ್ಟೆಕ್ ಸಮೂಹದ ಆಸಕ್ತಿ: ಸಚಿವ ಎಂ ಬಿ ಪಾಟೀಲ ಹೇಳಿಕೆ

ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ.  

Written by - Prashobh Devanahalli | Last Updated : Aug 20, 2024, 06:18 PM IST
    • ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ಬೆಸ್ಟೆಕ್ ಕಂಪನಿ ಆಸಕ್ತಿ
    • ರಾಜ್ಯ ಸರಕಾರವು ಸಂಪೂರ್ಣ ಸಹಕಾರ ನೀಡಲಿದೆ
    • ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ರಾಜ್ಯದಲ್ಲಿ ಹೂಡಿಕೆಗೆ ಬೆಸ್ಟೆಕ್ ಸಮೂಹದ ಆಸಕ್ತಿ: ಸಚಿವ ಎಂ ಬಿ ಪಾಟೀಲ ಹೇಳಿಕೆ title=
File Photo

ಬೆಂಗಳೂರು: ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ತೈವಾನ್ ನ ಬೆಸ್ಟೆಕ್ ಪವರ್‌ ಎಲೆಕ್ಟ್ರಾನಿಕ್ಸ್ ಕಂಪನಿ ಆಸಕ್ತಿ ತಾಳಿದ್ದು, ಬೆಂಗಳೂರಿನ ಸುತ್ತಮುತ್ತ  ಕಾರ್ಖಾನೆ ಸ್ಥಾಪಿಸಲು ಆಸಕ್ತಿ ತೋರಿದ್ದು ಅದಕ್ಕೆ ರಾಜ್ಯ ಸರಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಇದನ್ನೂ ಓದಿ: 2011ರ ವಿಶ್ವಕಪ್ ಗೆಲುವಿನ ಹೀರೋ ಯುವರಾಜ್ ಸಿಂಗ್ ಬಯೋಪಿಕ್:‌ ಯುವಿಯಾಗಿ ಅಭಿನಯಿಸಲಿರುವ ನಟ ಯಾರು?

ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ.

ತೈವಾನ್ ಮೂಲದ ಕಂಪನಿಯ ಈ ಯೋಜನೆಯಿಂದ 5,000 ಉದ್ಯೋಗಗಳು ಸೃಷ್ಟಿಯಾಗಲಿವೆ. ಮೂಲಸೌಕರ್ಯ ಅಭಿವೃದ್ಧಿ ಬಳಿಕ ಮೂರು ವರ್ಷಗಳಲ್ಲಿ ಕಂಪನಿಯು ಯೋಜನೆಗೆ ಹಂತಹಂತವಾಗಿ ಬಂಡವಾಳ ಹೂಡಲಿದೆ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: 1 ಓವರ್‌ʼನಲ್ಲಿ 39 ರನ್‌ ಚಚ್ಚಿ ಅಬ್ಬರಿಸಿದ ಸ್ಟಾರ್ ದಾಂಡಿಗ! 17 ವರ್ಷ ಹಳೆಯ ಯುವಿ ದಾಖಲೆ ಉಡೀಸ್

ಬೆಸ್ಟೆಕ್ ಕಂಪನಿಯು ಅಡಾಪ್ಟರ್, ಸಿ-ಪಿನ್, ಇ.ವಿ. ಮತ್ತು ಲ್ಯಾಪ್‌ಟಾಪ್ ಚಾರ್ಜರ್, ಕೇಬಲ್ ಇತ್ಯಾದಿಗಳನ್ನು ಉತ್ಕೃಷ್ಟ ಗುಣಮಟ್ಟದೊಂದಿಗೆ ತಯಾರಿಸಲಿದೆ. ಈ ಮೂಲಕ ಕಂಪನಿಯು ವಾರ್ಷಿಕವಾಗಿ 2,500 ಕೋಟಿ ರೂಪಾಯಿ ವಹಿವಾಟು ನಡೆಸಲಿದೆ ಎಂದು ಅವರು ವಿವರಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News