ರಾಜ್ಯದಲ್ಲಿ ಹೂಡಿಕೆಗೆ ಬೆಸ್ಟೆಕ್ ಸಮೂಹದ ಆಸಕ್ತಿ: ಸಚಿವ ಎಂ ಬಿ ಪಾಟೀಲ ಹೇಳಿಕೆ
ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ತೈವಾನ್ ನ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ಕಂಪನಿ ಆಸಕ್ತಿ ತಾಳಿದ್ದು, ಬೆಂಗಳೂರಿನ ಸುತ್ತಮುತ್ತ ಕಾರ್ಖಾನೆ ಸ್ಥಾಪಿಸಲು ಆಸಕ್ತಿ ತೋರಿದ್ದು ಅದಕ್ಕೆ ರಾಜ್ಯ ಸರಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಇದನ್ನೂ ಓದಿ: 2011ರ ವಿಶ್ವಕಪ್ ಗೆಲುವಿನ ಹೀರೋ ಯುವರಾಜ್ ಸಿಂಗ್ ಬಯೋಪಿಕ್: ಯುವಿಯಾಗಿ ಅಭಿನಯಿಸಲಿರುವ ನಟ ಯಾರು?
ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ.
ತೈವಾನ್ ಮೂಲದ ಕಂಪನಿಯ ಈ ಯೋಜನೆಯಿಂದ 5,000 ಉದ್ಯೋಗಗಳು ಸೃಷ್ಟಿಯಾಗಲಿವೆ. ಮೂಲಸೌಕರ್ಯ ಅಭಿವೃದ್ಧಿ ಬಳಿಕ ಮೂರು ವರ್ಷಗಳಲ್ಲಿ ಕಂಪನಿಯು ಯೋಜನೆಗೆ ಹಂತಹಂತವಾಗಿ ಬಂಡವಾಳ ಹೂಡಲಿದೆ ಎಂದು ಅವರು ವಿವರಿಸಿದ್ದಾರೆ.
ಇದನ್ನೂ ಓದಿ: 1 ಓವರ್ʼನಲ್ಲಿ 39 ರನ್ ಚಚ್ಚಿ ಅಬ್ಬರಿಸಿದ ಸ್ಟಾರ್ ದಾಂಡಿಗ! 17 ವರ್ಷ ಹಳೆಯ ಯುವಿ ದಾಖಲೆ ಉಡೀಸ್
ಬೆಸ್ಟೆಕ್ ಕಂಪನಿಯು ಅಡಾಪ್ಟರ್, ಸಿ-ಪಿನ್, ಇ.ವಿ. ಮತ್ತು ಲ್ಯಾಪ್‌ಟಾಪ್ ಚಾರ್ಜರ್, ಕೇಬಲ್ ಇತ್ಯಾದಿಗಳನ್ನು ಉತ್ಕೃಷ್ಟ ಗುಣಮಟ್ಟದೊಂದಿಗೆ ತಯಾರಿಸಲಿದೆ. ಈ ಮೂಲಕ ಕಂಪನಿಯು ವಾರ್ಷಿಕವಾಗಿ 2,500 ಕೋಟಿ ರೂಪಾಯಿ ವಹಿವಾಟು ನಡೆಸಲಿದೆ ಎಂದು ಅವರು ವಿವರಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ