ಬೆಂಗಳೂರು : ಮಗಳಿಗೆ ಭವಿಷ್ಯದಲ್ಲಿ ಹಣಕಾಸಿನ ತೊಂದರೆ ಎದುರಾಗಬಾರದು, ಆಕೆಯ ಭವಿಷ್ಯ ಸಮೃದ್ದವಾಗಿರಬೇಕು ಎಂದಾದರೆ, ಸರ್ಕಾರದ ಈ ಅದ್ಭುತ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಈ ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ನಿಮ್ಮ ಮಗಳು 21 ವರ್ಷಗಳಲ್ಲಿ ಮಿಲಿಯನೇರ್ ಆಗುತ್ತಾಳೆ. ಈ ಯೋಜನೆಯಲ್ಲಿ ದಿನಕ್ಕೆ 416 ರೂಪಾಯಿಗಳನ್ನು ಹೂಡಿಕೆ ಮಾಡಬೇಕು. ನೀವು ಹೂಡಿಕೆ ಮಾಡುವ 416 ರೂ ಮುಂದೆ ನಿಮ್ಮ ಮಗಳಿಗೆ 65 ಲಕ್ಷ ರೂ. ಆಗಿ ಸಿಗಲಿದೆ. ಇದರೊಂದಿಗೆ ನಿಮ್ಮ ಮಗಳ ವಿದ್ಯಾಭ್ಯಾಸದ ವೆಚ್ಚವೂ ಸುಲಭವಾಗಲಿದೆ.
ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು? :
ಸುಕನ್ಯಾ ಸಮೃದ್ಧಿ ಯೋಜನೆಯು ದೀರ್ಘಾವಧಿಯ ಯೋಜನೆಯಾಗಿದ್ದು, ಇದರಲ್ಲಿ ಹೂಡಿಕೆ ಮಾಡುವ ಮೂಲಕ ಮಗಳ ಶಿಕ್ಷಣ ಮತ್ತು ಭವಿಷ್ಯವನ್ನು ಭದ್ರ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ದೊಡ್ಡ ಮೊತ್ತವನ್ನು ಹೂಡಿಕೆ ಮಾಡುವ ಅಗತ್ಯವಿಲ್ಲ. ಈ ಯೋಜನೆಯಲ್ಲಿ ಹಲವು ಪ್ರಮುಖ ಬದಲಾವಣೆಗಳು ನಡೆಯುತ್ತಿವೆ. ಹೊಸ ನಿಯಮಗಳ ಅಡಿಯಲ್ಲಿ, ತಪ್ಪಾಗಿ ಖಾತೆಗೆ ಬಂದಿರುವ ಬಡ್ಡಿಯನ್ನು ಹಿಂತಿರುಗಿಸುವ ನಿಬಂಧನೆಯನ್ನು ತೆಗೆದುಹಾಕಲಾಗಿದೆ. ಇದಲ್ಲದೆ, ಪ್ರತಿ ಹಣಕಾಸು ವರ್ಷದ ಕೊನೆಯಲ್ಲಿ ಖಾತೆಗೆ ವಾರ್ಷಿಕ ಬಡ್ಡಿಯನ್ನು ಜಮಾ ಮಾಡಲಾಗುತ್ತದೆ. ಈ ಮೊದಲು ಹೆಣ್ಣು ಮಗಳಿಗೆ 10 ವರ್ಷವಾಗುತ್ತಿದ್ದಂತೆಯೇ ಖಾತೆಯನ್ನು ಆಪರೇಟ್ ಮಾಡಬಹುದು ಎಂಬ ನಿಯಮವಿತ್ತು. ಆದರೆ ಈಗ ಅದನ್ನು ಬದಲಾಯಿಸಲಾಗಿದೆ. ಹೊಸ ನಿಯಮಗಳ ಪ್ರಕಾರ, 18 ವರ್ಷವಾದ ನಂತರವಷ್ಟೇ ಹೆಣ್ಣು ಮಗಳು ಖಾತೆಯನ್ನು ಅಪರೇಟ್ ಮಾಡುವುದು ಸಾಧ್ಯವಾಗುತ್ತದೆ.
ಇದನ್ನೂ ಓದಿ : ಸರ್ಕಾರದ ಈ ಯೋಜನೆಯಿಂದ 24 ಗಂಟೆಯೂ ಸಿಗುತ್ತೆ ಉಚಿತ ವಿದ್ಯುತ್
ಈಗ ‘ಮೂರನೇ ’ಮಗಳ ಹೆಸರಿನಲ್ಲೂ ಖಾತೆ ತೆರೆಯಬಹುದು:
ಈ ಮೊದಲು ಈ ಯೋಜನೆಯಲ್ಲಿ, 80C ಅಡಿಯಲ್ಲಿ ತೆರಿಗೆ ವಿನಾಯಿತಿಯ ಪ್ರಯೋಜನವು ಇಬ್ಬರು ಹೆಣ್ಣುಮಕ್ಕಳ ಖಾತೆಯಲ್ಲಿ ಮಾತ್ರ ಲಭ್ಯವಿತ್ತು. ಈ ಪ್ರಯೋಜನ ಮೂರನೇ ಮಗಳಿಗೆ ಸಿಗುತ್ತಿರಲಿಲ್ಲ. ಹೊಸ ನಿಯಮದ ಪ್ರಕಾರ, ಒಂದು ಹೆಣ್ಣು ಮಗುವಿನ ನಂತರ ಇಬ್ಬರು ಅವಳಿ ಹೆಣ್ಣುಮಕ್ಕಳು ಜನಿಸಿದರೆ, ಇಬ್ಬರ ಹೆಸರಿನಲ್ಲಿಯೂ ಖಾತೆ ತೆರೆಯಲು ಅವಕಾಶವಿದೆ.
ಡೀಫಾಲ್ಟ್ ಖಾತೆಯಲ್ಲಿ ಬಡ್ಡಿ ದರ ಬದಲಾಗುವುದಿಲ್ಲ :
ಇದರ ಅಡಿಯಲ್ಲಿ, ವಾರ್ಷಿಕವಾಗಿ ಖಾತೆಯಲ್ಲಿ ಕನಿಷ್ಠ 250 ರೂ. ಠೇವಣಿ ಮಾಡದಿದ್ದಲ್ಲಿ, ಖಾತೆಯನ್ನು ಡೀಫಾಲ್ಟ್ ಎಂದು ಪರಿಗಣಿಸಲಾಗುತ್ತದೆ. ಆದರೆ ಹೊಸ ನಿಯಮಗಳ ಪ್ರಕಾರ, ಖಾತೆಯನ್ನು ಮತ್ತೆ ಸಕ್ರಿಯಗೊಳಿಸದಿದ್ದರೆ, ಮುಕ್ತಾಯದವರೆಗೆ, ಖಾತೆಯಲ್ಲಿ ಠೇವಣಿ ಮಾಡಿದ ಮೊತ್ತಕ್ಕೆ ಅನ್ವಯವಾಗುವ ದರದಲ್ಲಿ ಬಡ್ಡಿಯನ್ನು ಪಾವತಿಸಲಾಗುತ್ತದೆ. ಹಿಂದೆ, ಡೀಫಾಲ್ಟ್ ಖಾತೆಗಳು ಪೋಸ್ಟ್ ಆಫೀಸ್ ಉಳಿತಾಯ ಖಾತೆಗೆ ಅನ್ವಯವಾಗುವ ದರದಲ್ಲಿ ಬಡ್ಡಿಯನ್ನು ಗಳಿಸುತ್ತಿದ್ದವು.
ಇದನ್ನೂ ಓದಿ : Good News: ಬ್ಯಾಂಕ್ ಗ್ರಾಹಕರಿಗೆ ಖುಷಿ ಸುದ್ದಿ ನೀಡಿದ ಗೃಹ ಸಚಿವ ಅಮಿತ್ ಶಾ
ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಖಾತೆಯನ್ನು ಮುಚ್ಚಬಹುದು :
ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ತೆರೆಯಲಾದ ಖಾತೆಯನ್ನು ಮೊದಲ ಎರಡು ಸಂದರ್ಭಗಳಲ್ಲಿ ಮುಚ್ಚಬಹುದು. ಮೊದಲನೆಯದು ಮಗಳು ಸತ್ತರೆ ಮತ್ತು ಎರಡನೆಯದು ಮಗಳ ವಿಳಾಸ ಬದಲಾದರೆ. ಆದರೆ ಹೊಸ ಬದಲಾವಣೆಯ ನಂತರ ಖಾತೆದಾರರ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದರೂ ಇದನ್ನೂ ಮುಚ್ಚಬಹುದು. ಅಥವಾ ಹೆತ್ತವರ ಮರಣದ ಸಂದರ್ಭದಲ್ಲಿಯೂ ಖಾತೆಯನ್ನು ಅವಧಿಗೆ ಮುನ್ನ ಮುಚ್ಚಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.