ಬೆಂಗಳೂರು : ಆಸ್ತಿ ದರಗಳು ನಿರಂತರವಾಗಿ ಹೆಚ್ಚುತ್ತಿವೆ. ಇದರಿಂದಾಗಿ ಸ್ವಂತ ಮನೆ ಹೊಂದಬೇಕು ಎನ್ನುವ ಮಧ್ಯಮ ವರ್ಗದವರ ಕನಸು ಕನಸಾಗಿಯೇ ಉಳಿಯುತ್ತಿದೆ. ದಿನೇ ದಿನೇ ಆಸ್ತಿ ದರ ಹೆಚ್ಚಾಗುತ್ತಿರುವ ಕಾರಣ, ಜನರಿಗೆ ಮನೆ ಖರೀದಿಸಲು ತುಂಬಾ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಧ್ಯಮ ವರ್ಗದವರಿಗಾಗಿ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡುತ್ತಿದೆ. ಗೃಹ ಸಾಲದ ಮೇಲಿನ ಬಡ್ಡಿ ಸಬ್ಸಿಡಿ ಯೋಜನೆಯನ್ನು ಸರ್ಕಾರ ಪ್ರಾರಂಭಿಸಲಿದೆ. 


COMMERCIAL BREAK
SCROLL TO CONTINUE READING

ಸಣ್ಣ ನಗರ ವಸತಿ ವಲಯಕ್ಕೆ ಅಗ್ಗದ ದರದಲ್ಲಿ ಸಾಲ ನೀಡಲು 600 ಮಿಲಿಯನ್ (60,000 ಕೋಟಿ) ಖರ್ಚು ಮಾಡುವ ಯೋಜನೆಯಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. 


ಇದನ್ನೂ ಓದಿ : Gold And Silver Price: ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹೆಚ್ಚಳ!


ಸರ್ಕಾರದ ಯೋಜನೆ :
ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ಮಾಡಿರುವ ಭಾಷಣದಲ್ಲಿ ಈ ಯೋಜನೆಯನ್ನು ಘೋಷಿಸಿದ್ದರು. ಆದರೆ, ನಂತರ ಈ ಯೋಜನೆಯ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಇದೀಗ ಸುದ್ದಿ ಸಂಸ್ಥೆಯೊಂದರ ವರದಿಯ ಪ್ರಕಾರ, ಈ ಯೋಜನೆಯಡಿಯಲ್ಲಿ, 9 ಲಕ್ಷದವರೆಗಿನ ಸಾಲದ ಮೇಲಿನ ಬಡ್ಡಿಯು 3 - 6.5% ಕಡಿಮೆ ದರದಲ್ಲಿ ಲಭ್ಯವಿರಲಿದೆ ಎಂದು ಹೇಳಲಾಗಿದೆ.  


ಈ ಯೋಜನೆಯ ವ್ಯಾಪ್ತಿಯಲ್ಲಿ 20 ವರ್ಷಗಳವರೆಗೆ 50 ಲಕ್ಷ ರೂ.ಗಿಂತ ಕಡಿಮೆ ಗೃಹ ಸಾಲವನ್ನು ನೀಡಲು ಉದ್ದೇಶಿಸಲಾಗಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಬ್ಯಾಂಕ್ ಈ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಈ ವರದಿಯಲ್ಲಿ ಹೇಳಲಾಗಿದೆ. 


ಇದನ್ನೂ ಓದಿ : Anant Ambani Net Worth : ಶೀಘ್ರದಲ್ಲಿಯೇ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಅನಂತ್ ಅಂಬಾನಿ ಎಷ್ಟು ಕೋಟಿ ಆಸ್ತಿಯ ಒಡೆಯ ಗೊತ್ತಾ ?


25 ಲಕ್ಷ ಜನರಿಗೆ ಲಾಭ :
ಬಡ್ಡಿ ರಿಯಾಯಿತಿಯ ಲಾಭವನ್ನು  ಫಲಾನುಭವಿಯ ಸಾಲ ಖಾತೆಗೆ ಜಮಾ ಮಾಡಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆ ಜಾರಿಯಾದರೆ ನಗರ ಪ್ರದೇಶದಲ್ಲಿ ಕಡಿಮೆ ಆದಾಯ ಹೊಂದಿರುವ 25 ಲಕ್ಷ ಜನರಿಗೆ ಮನೆ ಖರೀದಿಸಲು ಅನುಕೂಲವಾಗಲಿದೆ. 


ಪ್ರಧಾನಿ ಮೋದಿ ಘೋಷಿಸಿದ್ದ ಯೋಜನೆ  : 
ಪ್ರಧಾನಿ ಮೋದಿ ಅವರು ಆಗಸ್ಟ್‌ನಲ್ಲಿ ತಮ್ಮ ಭಾಷಣದಲ್ಲಿ, 'ಮುಂಬರುವ ವರ್ಷಗಳಲ್ಲಿ ನಾವು ಹೊಸ ಯೋಜನೆಯನ್ನು ತರಲಿದ್ದೇವೆ, ಇದು ಬಾಡಿಗೆ ಮನೆಗಳು, ಕೊಳೆಗೇರಿಗಳು, ಚಾಲ್‌ಗಳು ಅಥವಾ ಅನಧಿಕೃತ ಕಾಲೋನಿಗಳಲ್ಲಿ ವಾಸಿಸುವ ನಗರಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪ್ರಯೋಜನ ನೀಡಲಿದೆ ಎಂದು ಹೇಳಿದ್ದರು. 


ಇದನ್ನೂ ಓದಿ : Stock Market Updates: ಹೂಡಿಕೆದಾರರಿಗೆ ಜಾಕ್‌ಪಾಟ್; 6 ಗಂಟೆಗಳಲ್ಲಿ ₹ 4.16 ಲಕ್ಷ ಕೋಟಿ ಗಳಿಕೆ!


ಅವರ ಭಾಷಣದ ನಂತರ, ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಮತ್ತು ಹಣಕಾಸು ಸಚಿವಾಲಯದಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. 


ಇನ್ನೇನು ಲೋಕಸಭೆ ಚುನಾವಣೆ ಹತ್ತಿರದಲ್ಲಿದೆ. ಈ ಕಾರಣದಿಂದಾಗಿ ಸರ್ಕಾರವು ದೇಶವಾಸಿಗಳಿಗೆ ಅನೇಕ ಉಡುಗೊರೆಗಳನ್ನು ನೀಡುತ್ತಿದೆ. ಇತ್ತೀಚೆಗೆ, ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರವು ದೇಶೀಯ ಎಲ್ಪಿಜಿ ಬೆಲೆಯನ್ನು ಸುಮಾರು 18 ಪ್ರತಿಶತದಷ್ಟು ಕಡಿಮೆ ಮಾಡಿದೆ.


ಕಡಿಮೆ ಆದಾಯದ ನಗರ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಗೃಹ ಸಾಲದ ಮೇಲಿನ ಬಡ್ಡಿಯಲ್ಲಿ ರಿಯಾಯಿತಿ ನೀಡುವ ಯೋಜನೆಯನ್ನು ಸರ್ಕಾರ ತರುತ್ತಿರುವುದು ಇದೇ ಮೊದಲಲ್ಲ. 2017 ಮತ್ತು 2002ರ ನಡುವೆ ಇದೇ ಯೋಜನೆಯ ಮೂಲಕ 1.227 ಕೋಟಿ ಜನರಿಗೆ ಸಾಲ ನೀಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.