Old Pension Scheme : ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಬೇಡಿಕೆ ಹೆಚ್ಚುತ್ತಿದೆ. ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಸರ್ಕಾರಿ ನೌಕರರು ಬಹುದಿನಗಳಿಂದ ಆಗ್ರಹಿಸುತ್ತಿದ್ದಾರೆ. ಈ ಮಧ್ಯೆ ನೌಕರರಿಗೆ ಬಿಗ್ ನ್ಯೂಸ್ ಒಂದು ಹೊರಬಿದ್ದಿದೆ. ಇತ್ತೀಚೆಗಷ್ಟೇ ಹಲವು ರಾಜ್ಯಗಳಲ್ಲಿ ನಡೆದ ಚುನಾವಣೆ ಬಳಿಕ ಹಳೆಯ ಪಿಂಚಣಿ ಯೋಜನೆ ಬಗ್ಗೆ ಚರ್ಚೆ ಆರಂಭವಾಗಿದೆ.
ಹಳೆ ಪಿಂಚಣಿ ಯೋಜನೆಗೆ ಆಗ್ರಹ
ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ನಡೆದ ಚುನಾವಣೆ ಬಳಿಕ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವಂತೆ ನೌಕರರು ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಯೋಜನೆ ಪ್ರಮುಖ ವಿಷಯವಾಗಿದೆ. ರಾಜಸ್ಥಾನ, ಛತ್ತೀಸ್‌ಗಢ ಮತ್ತು ಪಂಜಾಬ್‌ನಲ್ಲಿ ಸರ್ಕಾರವು ಮತ್ತೊಮ್ಮೆ ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸುತ್ತಿದೆ.
ಇದನ್ನೂ ಓದಿ : PAN ಕಾರ್ಡ್ ಬಳಕೆದಾರರ ಗಮನಕ್ಕೆ! ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ದಂಡ
ಒಪಿಎಸ್ ಲಾಭ ಯಾರಿಗೆ?
ಹಳೆಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಯಾವುದೇ ನಿರ್ದಿಷ್ಟ ಉತ್ತರವನ್ನು ನೀಡಲಾಗುತ್ತಿಲ್ಲ, ಆದರೆ ಪ್ರತಿಪಕ್ಷಗಳು ಚುನಾವಣೆಯಲ್ಲಿ ಈ ವಿಷಯವನ್ನು ಲಾಭ ಮಾಡಿಕೊಳ್ಳುತ್ತಿವೆ. ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿಯೂ ಕಾಣಬಹುದು. ಪ್ರಸ್ತುತ, ಡಿಸೆಂಬರ್ 31, 2003 ರಂದು ಅಥವಾ ಅದಕ್ಕಿಂತ ಮೊದಲು ನೇಮಕಾತಿ ಜಾಹೀರಾತುಗಳನ್ನು ಹೊರಡಿಸಿದ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ನೀಡಲು ಕೇಂದ್ರ ಸರ್ಕಾರವು ಪರಿಗಣಿಸಬಹುದು ಎಂದು ಹೇಳಲಾಗುತ್ತದೆ.
ಹಳೆಯ ಪಿಂಚಣಿ ಯೋಜನೆಯ ಪ್ರಯೋಜನಗಳು
ಹಳೆಯ ಪಿಂಚಣಿ ಯೋಜನೆಯ ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ಅದರ ದೊಡ್ಡ ಪ್ರಯೋಜನವೆಂದರೆ ಅದು ಕೊನೆಯದಾಗಿ ಪಡೆದ ಸಂಬಳದ ಆಧಾರದ ಮೇಲೆ ರಚನೆ ಮಾಡಲಾಗಿದೆ. ಇದಲ್ಲದೇ ಹಣದುಬ್ಬರ ದರ ಹೆಚ್ಚಾದಂತೆ ಡಿಎ ಕೂಡ ಹೆಚ್ಚಾಗುತ್ತದೆ. ಸರ್ಕಾರ ಹೊಸ ವೇತನ ಆಯೋಗವನ್ನು ಜಾರಿಗೆ ತಂದರೂ ಪಿಂಚಣಿಯನ್ನು ಹೆಚ್ಚಿಸುತ್ತದೆ.
ಇದನ್ನೂ ಓದಿ : Online Gas Booking : ಆನ್‌ಲೈನ್ ಸಿಲಿಂಡರ್ ಬುಕಿಂಗ್ ಮಾಡುವುದರಿಂದ ಎಷ್ಟು ಲಾಭ ಗೊತ್ತಾ? ಇಲ್ಲಿದೆ ನೋಡಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.