Indian Railways: ಬದಲಾಗಲಿದೆ ರೈಲ್ವೆ ವರ್ಕ್ ಕಲ್ಚರ್ , ಪ್ರಯಾಣಿಕರಿಗೆ ಸಿಗಲಿದೆ ಈ ಲಾಭ ..!
ಸಮಾನತೆಯ ಆಧಾರದ ಮೇಲೆ ಪ್ರತಿಯೊಬ್ಬ ವ್ಯಕ್ತಿಗೂ ರೈಲು ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ರೈಲ್ವೆ ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ನವದೆಹಲಿ: ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini vaishnav) ಕೊನೆಗೂ ರೈಲ್ವೇಯ ಕೆಲಸದ ರೀತಿ ನೀತಿಗಳಲ್ಲಿ ಬದಲಾವಣೆ ತರಲು ಹೊರಟಿದ್ದಾರೆ. ದೇಶಾದ್ಯಂತ ಜನರಲ್ ಮ್ಯಾನೇಜರ್ ಮತ್ತು ವಿಭಾಗೀಯ ರೈಲ್ವೇ ಮ್ಯಾನೇಜರ್ ಗಳ ಸಭೆಯಲ್ಲಿ ರೈಲ್ವೆ ಸಚಿವರು (Railway Minister), ಅಧಿಕಾರಿಗಳಿಗೆ ಕೆಲವು ಖಡಕ್ ಸೂಚನೆಗಳನ್ನು ನೀಡಿದ್ದಾರೆ. ಯಾರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೋ ಅವರನ್ನು ಪ್ರೋತ್ಸಾಹಿಸಲಾಗುವುದು. ಯಾವುದೇ ಕಾರಣಕ್ಕೂ ಅಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ, ಝೀರೋ ಟಾಲೆರೆನ್ಸ್ ನೀತಿಯೂ ಅನ್ವಯವಾಗುತ್ತದೆ ಎಂದಿದ್ದಾರೆ. ಇನ್ನು ಬೇಜವಾಬ್ದಾರಿ ನಡವಳಿಕೆ ಮಾಡುವವರು, ಮುಂದಿನ 3 ವರ್ಷಗಳವರೆಗೆ ತಮ್ಮ ಈ ಅಭ್ಯಾಸದಿಂದ ದೂರ ಉಳಿಯುವಂತೆ ಎಚ್ಚರಿಕೆ ನೀಡಿದ್ದಾರೆ.
ಜನರಲ್ ಕೋಚ್ ಪ್ರಯಾಣಿಕರಿಗೂ ಸಿಗಲಿದೆ ಸೌಲಭ್ಯ :
ಸಮಾನತೆಯ ಆಧಾರದ ಮೇಲೆ ಪ್ರತಿಯೊಬ್ಬ ವ್ಯಕ್ತಿಗೂ ರೈಲು ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ರೈಲ್ವೆ ಸಚಿವರು (Railway minister) ಅಧಿಕಾರಿಗಳಿಗೆ ತಿಳಿಸಿದ್ದಾರೆ. ಜನರಲ್ ಕೋಚ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೂ ಉತ್ತಮ ಮತ್ತು ವಿಶ್ವ ದರ್ಜೆಯ ಸೌಲಭ್ಯಗಳನ್ನು ಪಡೆಯಲು ಅರ್ಹತೆ ಇದೆ ಎಂದು ರೈಲ್ವೇ ಸಚಿವರು ಇದೆ ವೇಳೆ ಹೇಳಿದ್ದಾರೆ. ಸಾಮಾನ್ಯ ದರ್ಜೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೂ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವುದು ರೈಲ್ವೇಯ (Indian Railway) ಪ್ರಯತ್ನವಾಗಿದೆ ಮತ್ತು ಈ ದಿಕ್ಕಿನಲ್ಲಿ ರೈಲ್ವೇ ಈಗ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : Kingfisher House Sold: ಕೊನೆಗೂ ಹರಾಜಾದ ವಿಜಯ್ ಮಲ್ಯಗೆ ಸೇರಿದ Kingfisher House, ಎಷ್ಟು ಬೆಲೆ ಬಂತು ಗೊತ್ತಾ?
ರೈಲ್ವೆ ಪ್ರಯಾಣಿಕರ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ :
ರೈಲ್ವೆ ಪ್ರಯಾಣಿಕರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳಲಾಗುವುದಿಲ್ಲ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಸಾಮಾನ್ಯ ವ್ಯವಸ್ಥಾಪಕರು ಮತ್ತು ಡಿಆರ್‌ಎಮ್‌ಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಯಿತು. ಅಚಾತುರ್ಯದಿಂದ ಯಾವುದೇ ತಪ್ಪುಗಳಾದರೆ ಅದನ್ನು ಒಪ್ಪಿಕೊಳ್ಳಬಹುದು ಆದರೆ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ತೋರುವ ರೈಲ್ವೆ ನೌಕರರ (Railway employee) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ಬದಲಾಗಲಿದೆ ವರ್ಕ್ ಕಲ್ಚರ್ :
ಪ್ರಸ್ತುತ ರೈಲ್ವೆಯಲ್ಲಿ 18 ಲಕ್ಷ ಪಿಂಚಣಿದಾರರಿದ್ದಾರೆ. ರೈಲ್ವೇ ತನ್ನ ಆದಾಯವನ್ನು ಹೆಚ್ಚಿಸಲು ಮತ್ತು ಕಾರ್ಪೊರೇಟ್ ಕಂಪನಿಯ ರೀತಿಯಲ್ಲಿ ಕೆಲಸ ಮಾಡುವ ವಿಧಾನವನ್ನು ಬದಲಾಯಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ, ರೈಲ್ವೆ ತನ್ನ ಆದಾಯವನ್ನು ಹೆಚ್ಚಿಸಲು ದೇಶದ ಪ್ರತಿಯೊಂದು ಜಿಲ್ಲೆಯಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಸಮೀಕ್ಷೆ ನಡೆಸುವ ಮೂಲಕ ಸರಕು ಸಾಗಣೆಯನ್ನು ಹೆಚ್ಚಿಸಬೇಕೆಂದು ಸಭೆಯಲ್ಲಿ ನಿರ್ಧರಿಸಲಾಯಿತು.
ಇದನ್ನೂ ಓದಿ : ಸ್ವಾತಂತ್ರ್ಯ ದಿನದಂದು SBI ಗ್ರಾಹಕರಿಗೆ ಸಿಹಿ ಸುದ್ದಿ : Home Lone ಗೆ ಭರ್ಜರಿ ಆಫರ್, ಹೇಗೆ ಅರ್ಜಿ ಸಲ್ಲಿಸಬೇಕು?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.