ನವದೆಹಲಿ : ಬೆಲೆ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬು ಸುಡುತ್ತಿದೆ. ಇದೀಗ ದೀಪಾವಳಿಗೂ ಮುನ್ನ ಮತ್ತೆ ಬೆಲೆ ಏರಿಕೆ ಶಾಕ್ (LPG Price Hike) ಗ್ರಾಹಕರಿಗೆ ಎದುರಾಗಿದೆ. ನವೆಂಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಗ್ಯಾಸ್ ಬೆಲೆಯನ್ನು ಏರಿಸಿದೆ. ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 265 ರೂ.ಯಷ್ಟು ಹೆಚ್ಚಾಗಿದೆ. ಈ ಹೆಚ್ಚಳವು ಕಮರ್ಷಿಯಲ್ ಸಿಲಿಂಡರ್‌ಗಳ (Commercial gas cylinder price) ಮೇಲೆ ಅನ್ವಯವಾಗಲಿದೆ. 


COMMERCIAL BREAK
SCROLL TO CONTINUE READING

ದೆಹಲಿಯಲ್ಲಿ ಸಿಲಿಂಡರ್ ಬೆಲೆ 1998 ರೂ. ಏರಿಕೆ :
265 ರೂಪಾಯಿ ಹೆಚ್ಚಳದ ನಂತರ ದೆಹಲಿಯಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ (Commercial gas cylinder price) 1998 ರೂ.ಗೆ ಏರಿದೆ. ಇದಕ್ಕೂ ಮೊದಲು ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ (LPG Price) 1733 ರೂಪಾಯಿ ಇತ್ತು.  ಮುಂಬೈನಲ್ಲಿ 19 ಕೆ.ಜಿ ಕಮರ್ಷಿಯಲ್  ಗ್ಯಾಸ್ ಸಿಲಿಂಡರ್ ಬೆಲೆ 1950 ರೂ.ಆಗಿದೆ. ಕೋಲ್ಕತ್ತಾದಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್ 2073.50 ರೂ ಆಗಿದ್ದರೆ, ಚೆನ್ನೈನಲ್ಲಿ 19 ಕೆಜಿ ಸಿಲಿಂಡರ್ 2133 ರೂ.ಗೆ ಲಭ್ಯವಾಗಲಿದೆ.


ಇದನ್ನೂ ಓದಿ : Changes From November 1st: LPG ಬೆಲೆಗಳಿಂದ ರೈಲ್ವೆ ವೇಳಾಪಟ್ಟಿಯವರೆಗೆ ಇಂದಿನಿಂದ ಬದಲಾಗಲಿವೆ ಈ ನಿಯಮಗಳು


ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿಯೂ ಬೆಲೆ ಏರಿಕೆ :
ಈ ಹಿಂದೆ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಕೂಡ ಪೆಟ್ರೋಲಿಯಂ ಕಂಪನಿಗಳು ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿದ್ದವು. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಂದು 43 ರೂ ಮತ್ತು ಅಕ್ಟೋಬರ್ 1 ರಂದು 75 ರೂ ಹೆಚ್ಚಿಸಲಾಗಿತ್ತು. ಕಳೆದ ತಿಂಗಳು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ (LPG Price Hike) ಬೆಲೆಯಲ್ಲಿ ಹೆಚ್ಚಳವಾಗಿತ್ತು


ಪೆಟ್ರೋಲ್, ಡೀಸೆಲ್ ಬೆಲೆಯೂ ಏರಿಕೆ : 
ಈ ಮಧ್ಯೆ, ಪೆಟ್ರೋಲಿಯಂ ಕಂಪನಿಗಳು ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು (Petrol diesel price) 35-35 ಪೈಸೆಗಳಷ್ಟು ಹೆಚ್ಚಿಸಿವೆ. ಈ ಹೆಚ್ಚಳದ ನಂತರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 109.69 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ 98.42 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 115.5 ರೂ ಮತ್ತು ಡೀಸೆಲ್ ಬೆಲೆ 106.62 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 110.15 ರೂ  ಮತ್ತು ಡೀಸೆಲ್  101.56 ರೂ. ಗೆ ಮಾರಾಟವಾಗುತ್ತಿದ್ದರೆ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 106.35 ಮತ್ತು ಡೀಸೆಲ್ ಬೆಲೆ  102.59 ಯಷ್ಟಾಗಿದೆ. 


ಇದನ್ನೂ ಓದಿ : ಧನತ್ರಯೋದಶಿ 2021: ಕೇವಲ 1 ರೂ.ಗೆ ಚಿನ್ನದ ನಾಣ್ಯ ಖರೀದಿಸಿ, ಹೇಗೆಂದು ತಿಳಿಯಿರಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ