Big Update: ರೈಲು ಪ್ರಯಾಣಿರಿಗೊಂದು ಭಾರಿ ಸಂತಸದ ಸುದ್ದಿ ಪ್ರಕಟಿಸಿದ ರೇಲ್ವೆ ಸಚಿವರು

Indian Railways Big Update: ರೈಲಿನಲ್ಲಿ ಪ್ರಯಾಣ ಬೆಳೆಸುವವರ ಪಾಲಿಗೊಂದು ಭಾರಿ ಸಂತಸದ ಸುದ್ದಿ ಪ್ರಕಟವಾಗಿದೆ. ಹಿರಿಯ ನಾಗರಿಕರಿಗೆ ಸಿಗುವ ರಿಯಾಯಿತಿಯ ಕುರಿತು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಒಂದು ಮಹತ್ವದ ಮಾಹಿತಿ ನೀಡಿದ್ದಾರೆ.  

Written by - Nitin Tabib | Last Updated : Dec 10, 2022, 07:55 PM IST
  • 2019-20ರಲ್ಲಿ ರೈಲ್ವೆ ವಿಭಾಗ ಪ್ರಯಾಣಿಕರ ಟಿಕೆಟ್‌ಗೆ 59,837 ಕೋಟಿ ರೂ.ಗಳ ಸಬ್ಸಿಡಿ ನೀಡಿದೆ.
  • ಇದಲ್ಲದೆ, ಸಂಸತ್ತಿನ ಸ್ಥಾಯಿ ಸಮಿತಿಯು ಸ್ಲೀಪರ್ ಮತ್ತು ಥರ್ಡ್ ಕ್ಲಾಸ್ ಎಸಿಯಲ್ಲಿ
  • ಪ್ರಯಾಣಿಸುವ ಹಿರಿಯ ನಾಗರಿಕರಿಗೆ ರೈಲು ಟಿಕೆಟ್‌ ದರದಲ್ಲಿ ರಿಯಾಯಿತಿ ನೀಡಲು ಸೂಚಿಸಿದೆ
Big Update: ರೈಲು ಪ್ರಯಾಣಿರಿಗೊಂದು ಭಾರಿ ಸಂತಸದ ಸುದ್ದಿ ಪ್ರಕಟಿಸಿದ ರೇಲ್ವೆ ಸಚಿವರು title=
Indian Railways Latest Update

Indian Railway Concession For Senior Citizen: ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದು ಪ್ರಕಟವಾಗಿದೆ. ಹಿರಿಯ ನಾಗರಿಕರಿಗೆ ವಿನಾಯಿತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಲವು ಮಾಹಿತಿಗಳನ್ನು ನೀಡಿದ್ದಾರೆ. ಭಾರತೀಯ ರೈಲ್ವೆ ಹಿರಿಯ ನಾಗರಿಕರಿಗೆ ಕೊರೊನಾ ಕಾಲಕ್ಕೂ ಮುಂಚಿತವಾಗಿ ನೀಡಲಾಗುತ್ತಿದ್ದ ರಿಯಾಯಿತಿಯನ್ನು ಮರುಸ್ಥಾಪಿಸಲು ಹೊರಟಿದೆ. ಇದರ ಜೊತೆಗೆ ಅರ್ಹತಾ ಮಾನದಂಡದಲ್ಲೂ ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ.

ವಯಸ್ಸಿನ ಮಿತಿ ಬದಲಾಗುತ್ತದೆ
ಮಾಧ್ಯಮ ವರದಿಗಳ ಪ್ರಕಾರ, ರೈಲ್ವೆ ಮಂಡಳಿಯು ಹಿರಿಯ ನಾಗರಿಕರ ವಯಸ್ಸಿನ ಮಿತಿಯನ್ನು ಬದಲಾಯಿಸಲು ಚಿಂತನೆ ನಡೆಸುತ್ತಿದೆ. ಇದಲ್ಲದೇ, ಟಿಕೆಟ್‌ಗಳ ಮೇಲಿನ ರಿಯಾಯಿತಿಗಳು ಕೆಲವೇ ವರ್ಗಗಳಿಗೆ ಸೀಮಿತವಾಗಿರಲಿವೆ ಎನ್ನಲಾಗಿದೆ. ಮತ್ತೊಂದೆಡೆ, ಇದಕ್ಕೂ ಮೊದಲು, ಎಲ್ಲಾ ವರ್ಗದ ಜನರು ರಿಯಾಯಿತಿಗಳನ್ನು ಪಡೆಯುತ್ತಿದ್ದರು.

ಶೀಘ್ರದಲ್ಲೇ ನಿಯಮಗಳನ್ನು ರೂಪಿಸಲಾಗುವುದು
ಹಿರಿಯ ನಾಗರಿಕರಿಗೆ ರಿಯಾಯ್ತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ, ಇದರಲ್ಲಿ ಹಿರಿಯ ನಾಗರಿಕರಿಗೆ ಸಬ್ಸಿಡಿಯನ್ನು ಉಳಿಸಿಕೊಂಡು ಈ ರಿಯಾಯಿತಿಗಳ ವೆಚ್ಚವನ್ನು ಕಡಿಮೆ ಮಾಡುವ ಆಲೋಚನೆ ಇದೆ ಎಂದು ರೈಲ್ವೆ ಮಂಡಳಿ ತಿಳಿಸಿದೆ. ಸದ್ಯಕ್ಕೆ, ಯಾವುದೇ ನಿಯಮಗಳು ಮತ್ತು ಷರತ್ತುಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ.

ಇದನ್ನೂ ಓದಿ-Saving Account Interest: ಈ ಬ್ಯಾಂಕ್ ಗಳು ಉಳಿತಾಯ ಖಾತೆಯ ಮೇಲೆ ಗ್ರಾಹಕರಿಗೆ ಶೇ.7.5 ರಷ್ಟು ಬಡ್ಡಿ ಪಾವತಿಸುತ್ತಿವೆ

53% ರಿಯಾಯಿತಿ ಪಡೆಯಬಹುದು
ರೈಲ್ವೇ ಸಚಿವಾಲಯದಿಂದ ದೊರೆತ ಮಾಹಿತಿಯ ಪ್ರಕಾರ, ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ನಾಗರಿಕರು ಪ್ರಯಾಣ ದರದಲ್ಲಿ ಸರಾಸರಿ ಶೇ.53 ರಷ್ಟು ರಿಯಾಯಿತಿಯನ್ನು ಪಡೆಯಲಿದ್ದಾರೆ ಎನ್ನಲಾಗಿದೆ. ಇದರೊಂದಿಗೆ, ದಿವ್ಯಾಂಗರು, ವಿದ್ಯಾರ್ಥಿಗಳು ಮತ್ತು ರೋಗಿಗಳು ಈ ವಿನಾಯಿತಿಯನ್ನು ಹೊರತುಪಡಿಸಿ ಅನೇಕ ರೀತಿಯ ರಿಯಾಯಿತಿಗಳನ್ನು ಸಹ ಪಡೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ-Free ಮನೆಗೆ ತನ್ನಿ ಈ ಎಲೆಕ್ಟ್ರಿಕ್ ಸ್ಕೂಟರ್! ಜೊತೆಗೆ 10000 ಡಿಸ್ಕೌಂಟ್ ಪಡೆಯಿರಿ.. ಏನಿದು ಸ್ಕ್ಕೀಮ್?

ಯಾವ ವರ್ಗದಲ್ಲಿ ರಿಯಾಯಿತಿ ನೀಡಲಾಗುತ್ತಿದೆ?
ಈ ಕುರಿತು ಲೋಕಸಭೆಯಲ್ಲಿ ರೈಲ್ವೆ ಸಚಿವರಿಗೆ ರೈಲ್ವೇ ರಿಯಾಯತಿ ಬಗ್ಗೆ ಪ್ರಶ್ನಿಸಲಾಗಿದ್ದು, ಭಾರತೀಯ ರೇಲ್ವೆ ಟಿಕೆಟ್‌ ದರದಲ್ಲಿ ರಿಯಾಯಿತಿ ಸೌಲಭ್ಯವನ್ನು ಮತ್ತೆ ಮರುಸ್ಥಾಪಿಸಲಿದೆಯೇ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು.  ಈ ಕುರಿತು ಮಾತನಾಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, 2019-20ರಲ್ಲಿ ರೈಲ್ವೆ ವಿಭಾಗ ಪ್ರಯಾಣಿಕರ ಟಿಕೆಟ್‌ಗೆ 59,837 ಕೋಟಿ ರೂ.ಗಳ ಸಬ್ಸಿಡಿ ನೀಡಿದೆ. ಇದಲ್ಲದೆ, ಸಂಸತ್ತಿನ ಸ್ಥಾಯಿ ಸಮಿತಿಯು ಸ್ಲೀಪರ್ ಮತ್ತು ಥರ್ಡ್ ಕ್ಲಾಸ್ ಎಸಿಯಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ರೈಲು ಟಿಕೆಟ್‌ ದರದಲ್ಲಿ ರಿಯಾಯಿತಿ ನೀಡಲು ಸೂಚಿಸಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News