Fuel Price Increase: ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯನ್ನು ನಾವು ಕೇವಲ ಮೂರು ರೂ. ಏರಿಸಿದ್ದೇವೆ ಅಷ್ಟೇ.‌ ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್‌ ‌ಬೆಲೆಗಳು ಕ್ರಮವಾಗಿ 400, 38 ಮತ್ತು 35 ರೂ. ದುಬಾರಿ ಆಗಿದೆ. ಆಗ ತೆಪ್ಪಗಿದ್ದ ಬಿಜೆಪಿಯ ಆರ್ ಅಶೋಕ್ ಮತ್ತು ಬಿ.ವೈ.  ವಿಜಯೇಂದ್ರ ಗ್ಯಾಂಗ್ ಈಗ  ಪ್ರತಿಭಟಿಸುತ್ತಿರುವುದು ಬರೀ ನಾಟಕ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎದಿರೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಮಂಗಳವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (Heavy and Medium Industries Minister MB Patil) ಅವರು, 'ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಗಳು ನಮಗಿಂತ ಜಾಸ್ತಿ ಇದೆ. ಬಿಜೆಪಿ ಅಲ್ಲೇಕೆ ಪ್ರತಿಭಟಿಸುತ್ತಿಲ್ಲ ಎಂದು ಪ್ರಶ್ನಿಸಿದರು.


ಇದನ್ನೂ ಓದಿ- ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರೇ ದಂಗೆ ಏಳಬೇಕು: ಬೆಲೆ ಏರಿಕೆ ವಿರುದ್ಧ ಎಚ್‌ಡಿಕೆ ಕಿಡಿ


ಲೋಕಸಭಾ ಚುನಾವಣೆ ಫಲಿತಾಂಶಕ್ಕೂ (Lok Sabha Election Results) ಈಗಿನ ಬೆಲೆ ಏರಿಕೆಗೂ ಸಂಬಂಧ ಇಲ್ಲ. ಜೊತೆಗೆ ನಾವು ಕೊಟ್ಟಿರುವ ಗ್ಯಾರಂಟಿ ಗಳು ಕೂಡ ನಿಲ್ಲುವುದಿಲ್ಲ. ಅವುಗಳ ಜತೆಯಲ್ಲೇ ನಾವು ಅಭಿವೃದ್ಧಿ ಕೂಡ ಸಾಧಿಸುತ್ತೇವೆ ಎಂದು ಅವರು ಪ್ರತಿಪಾದಿಸಿದರು.


ಕಳೆದ ಹತ್ತು ವರ್ಷಗಳಲ್ಲಿ ಕಚ್ಚಾ ತೈಲದ ‌ಬೆಲೆ (Crude oil price) ಸಾಕಷ್ಟು ಇಳಿದಿದೆ. ಆದರೆ ಮೋದಿ ಸರಕಾರ ಮಾತ್ರ ತೈಲೋತ್ಪನ್ನಗಳ ಬೆಲೆಯನ್ನು ಒಮ್ಮೆ ಕೂಡ ಇಳಿಸಿಲ್ಲ. ಆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಪೆಟ್ರೋಲ್ , ಡೀಸೆಲ್‌ ಮತ್ತು ಎಲ್ ಪಿಜಿ‌ ಬೆಲೆ ಜನರ ಕೈಗೆ ಎಟುಕುವಂತಿತ್ತು ಎಂದು ಅವರು ಹೇಳಿದ್ದಾರೆ.


ನಾವೀಗ ಕೇವಲ ಮೂರು ರೂಪಾಯಿ ಮಾತ್ರ ಏರಿಸಿದ್ದೇವೆ. ಆದರೆ ಮೋದಿ ಮತ್ತು ಬಿಜೆಪಿ ನೀತಿಗಳಿಂದ ಜನರ ಜೀವನ ದುಬಾರಿಯಾಗಿದೆ. ಇದು ವಾಸ್ತವ ಸಂಗತಿ. ಬಿಜೆಪಿ ನಾಯಕರು ಮೊದಲು ಇದರ ವಿರುದ್ಧ ದನಿ ಎತ್ತುವ ಕರ್ತವ್ಯ ಮಾಡಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ- ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶ


ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ಹದಿನೈದು ಸಲ ಬಜೆಟ್ ಮಂಡಿಸಿದ್ದಾರೆ. ಅವರ ಅರ್ಥಿಕ ಜ್ಞಾನದ ಬಗ್ಗೆ ಜನರಿಗೆ ಚೆನ್ನಾಗಿ ತಿಳಿದಿದೆ. ರಾಜ್ಯದ ಬೊಕ್ಕಸವನ್ನು ಹೇಗೆ ತುಂಬಬೇಕು ಎಂಬುದನ್ನು ಅವರು ಬಲ್ಲರು ಎಂದು ಪಾಟೀಲ ನುಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.