Budget 2022: ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು..?

ಒಟ್ಟಾರೆ ಜನಪರವಾದ ಆಯವ್ಯಯ ಮಂಡಿಸಿರುವ ವಿತ್ತ ಸಚಿವರನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಅಂತಾ ಬಿಎಸ್ ವೈ ಹೇಳಿದ್ದಾರೆ.  

Written by - Zee Kannada News Desk | Last Updated : Feb 1, 2022, 01:44 PM IST
  • ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಈ ಬಜೆಟ್ ಪೂರಕವಾಗಿದೆ
  • ಕೇಂದ್ರದ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದ ಬಿಎಸ್ ವೈ
  • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಗೆ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ
Budget 2022: ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು..?  title=
ದೇಶದ ಅರ್ಥವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಬಜೆಟ್

ಬೆಂಗಳೂರು: 2022-23ನೇ ಸಾಲಿನ ಕೇಂದ್ರ ಬಜೆಟ್(Union Budget 2022) ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yediyurappa)ನವರು ಪ್ರತಿಕ್ರಿಯಿಸಿದ್ದಾರೆ. ‘ಕೇಂದ್ರ ಹಣಕಾಸು ಸಚಿವೆ ನಿರ್ಮತಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಆಯವ್ಯಯವು ಕೋವಿಡ್-19ರಿಂದ ಉಂಟಾದ ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ’ ಅಂತಾ ಹೇಳಿದ್ದಾರೆ.

ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಈ ಬಜೆಟ್(Budget 2022) ಪೂರಕವಾಗಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಲಾಗಿದೆ. ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಅಂತಾ ತಿಳಿಸಿದ್ದಾರೆ.  

ಇದನ್ನೂ ಓದಿ: Budget 2022: ಈ ಬಜೆಟ್ ಅಧಿವೇಶನದಲ್ಲಿ ತೆರಿಗೆ ಪಾವತಿದಾರರಿಗೆ ಸಿಗಲಿದೆ ಈ ಸಂತಸದ ಸುದ್ದಿ!

ಪ್ರತಿ ಹಳ್ಳಿ-ಹಳ್ಳಿಗಳಿಗೂ ಆಪ್ಟಿಕಲ್ ಫೈಬರ್ ಒದಗಿಸುವುದು, ನಗರ ಪ್ರದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ಉದ್ದೇಶಿಸಿರುವುದು ಸ್ವಾಗತರ್ಹ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ. ದೇಶದ ಪ್ರಮುಖ ನದಿಗಳ ಜೋಡಣೆ, ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವುದು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆ(Pradhan Mantri Awas Yojana)ಗೆ ಒತ್ತು ನೀಡಿ, 2023ರ ವರ್ಷವನ್ನು ‘ಅಂತಾರಾಷ್ಟ್ರೀಯ ಸಿರಿಧಾನ್ಯ’ ವರ್ಷವೆಂದು ಘೋಷಣೆ ಮಾಡಿದ್ದು ಖುಷಿಯ ಸಂಗತಿ.

ದೇಶದ ಅರ್ಥವ್ಯವಸ್ಥೆಗೆ ಹೊಸ ಚೈತನ್ಯ

ಟ್ವೀಟ್ ಕೂಡ ಮಾಡಿರುವ ಬಿಎಸ್ ವೈ ‘ವಿತ್ತಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಮಂಡಿಸಿರುವ #ಬಜೆಟ್2022 ದೇಶದ ಅರ್ಥವ್ಯವಸ್ಥೆಗೆ ಹೊಸ ಚೈತನ್ಯ ತುಂಬುವ ಜೊತೆಗೆ ಪ್ರಗತಿಗೆ ವೇಗವರ್ಧಕವಾಗಿದ್ದು, ಸಾಂಕ್ರಾಮಿಕದ ಸವಾಲುಗಳನ್ನು ಹಿಮ್ಮೆಟ್ಟಿಸಿ, ಸ್ವಾವಲಂಬಿ ರಾಷ್ಟ್ರನಿರ್ಮಾಣಕ್ಕೆ ಪೂರಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ‘ಸಬ್ ಕಾ ವಿಕಾಸ್’ ಬದ್ಧತೆಗೆ ನಿದರ್ಶನವಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Budget 2022: ಕಾವೇರಿ-ಪೆನ್ನಾರ್ ಸೇರಿ 5 ನದಿ ಜೋಡಣೆ ಯೋಜನೆಗಳ ಘೋಷಣೆ

‘ವಿಶೇಷವಾಗಿ ಕಾವೇರಿ ಸೇರಿದಂತೆ ನದಿಗಳ ಜೋಡಣೆ, ಉದ್ಯೋಗ ಸೃಷ್ಟಿ, 3.8 ಕೋಟಿ ಕುಟುಂಬಗಳಿಗೆ ನಲ್ಲಿನೀರು ಸಂಪರ್ಕ ಕಲ್ಪಿಸಲು 60 ಸಾವಿರ ಕೋಟಿ ರೂ., ಕೃಷಿ, ಪಿಎಂ ಗತಿಶಕ್ತಿ, ಆರೋಗ್ಯ ಸೇವೆ, ಹೂಡಿಕೆ ಉತ್ತೇಜನ ವಲಯಗಳಿಗೆ ಆದ್ಯತೆ ನೀಡಿರುವುದು ರಾಜ್ಯದ ಬೆಳವಣಿಗೆಗೆ ಗಣನೀಯ ನೆರವು ನೀಡಲಿದೆ’ ಅಂತಾ ಹೇಳಿದ್ದಾರೆ.  

ಒಟ್ಟಾರೆ ಜನಪರವಾದ ಆಯವ್ಯಯ ಮಂಡಿಸಿರುವ ವಿತ್ತ ಸಚಿವರನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರನ್ನು ಅಭಿನಂದಿಸುತ್ತೇನೆ’ ಅಂತಾ ಬಿಎಸ್ ವೈ ಹೇಳಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News