Budget 2022 Latest Update: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಇಂದು ಸಂಸತ್ತಿನಲ್ಲಿ ವರ್ಷ 2022-23ರ ಸಾಮಾನ್ಯ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ತಮ್ಮ ಬಜೆಟ್ (Budget 2022) ಭಾಷಣ ಆರಂಭಿಸಿದ ವಿತ್ತ ಸಚಿವರು ದೇಶದ ಆರ್ಥಿಕ ಬೆಳವಣಿಗೆ ದರ ಶೇ.9.2 ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ ಎಂದಿದ್ದಾರೆ. ಈ ಬಾರಿಯ ಬಜೆಟ್ ಮುಂದಿನ 25 ವರ್ಷಗಳಿಗೆ ಬ್ಲೂ ಪ್ರಿಂಟ್ ರೀತಿ ಕಾರ್ಯನಿರ್ವಹಿಸಲಿದೆ ಎಂದು ಸೀತಾರಾಮನ್ ಹೇಳಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಯುವಕರಿಗೆ ನೆಮ್ಮದಿಯ ಸುದ್ದಿಯೊಂದನ್ನು ಪ್ರಕಟಿಸಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಯುವಕರಿಗಾಗಿ 60 ಲಕ್ಷ ಹೊಸ ಉದ್ಯೋಗಗಳನ್ನು ಘೋಷಿಸಿದ್ದಾರೆ. 30 ಲಕ್ಷ ಹೆಚ್ಚುವರಿ ಉದ್ಯೋಗಗಳನ್ನು ಒದಗಿಸುವ ಸಾಮರ್ಥ್ಯವಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ-Budget 2022: 49 ವರ್ಷಗಳ ಹಿಂದೆ Black Budget ಮಂಡನೆಯಾಗಿತ್ತು, ಕಾರಣ ಏನು ಗೊತ್ತಾ?
आत्मनिर्भर भारत के अंतर्गत 16 लाख नौकरियां दी जाएंगी।
मेक इन इंडिया के तहत 60 लाख नौकरियां आएंगी।#AatmanirbharBharatKaBudget pic.twitter.com/UeoSMHwSlD
— BJP (@BJP4India) February 1, 2022
ಆತ್ಮ ನಿರ್ಭರ್ ಭಾರತ್ ಯೋಜನೆಯ ಅಡಿಯಲ್ಲಿ 16 ಲಕ್ಷ ಉದ್ಯೋಗಗಳನ್ನು ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮೇಕ್ ಇನ್ ಇಂಡಿಯಾ ಅಡಿಯಲ್ಲಿ 60 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ಹೇಳಿದ್ದಾರೆ. ಮೋದಿ ಸರ್ಕಾರವು ಉದ್ಯೋಗದ ವಿಷಯದಲ್ಲಿ ಪ್ರತಿಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದೆ ಎಂಬುದು ಇಲ್ಲಿ ಗಮನಾರ್ಹ. ಈ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಹೇಳುತ್ತಲೇ ಬಂದಿವೆ. ಆದರೆ ಇದೀಗ ಸರ್ಕಾರ 60 ಲಕ್ಷ ಉದ್ಯೋಗ ಘೋಷಣೆ ಮಾಡುವ ಮೂಲಕ ಪ್ರತಿಪಕ್ಷಗಳಿಗೆ ತಕ್ಕ ಉತ್ತರವನ್ನೇ ನೀಡಿದೆ ಎಂದರೆ ತಪ್ಪಾಗಲಾರದು.
ಇದನ್ನೂ ಓದಿ-ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.