ನವದೆಹಲಿ : Kisan Credit Card Scheme/ Budget 2022 KCC: ರೈತರಿಗೆ ಸಾಲದಿಂದ ಮುಕ್ತಿ ನೀಡಲು ಮತ್ತು ರೈತರ ಆದಾಯವನ್ನು ಹೆಚ್ಚಿಡುವ ಉದ್ದೇಶದಿಂದ ಸರ್ಕಾರವು ರೈತರಿಗೆ ಕೈಗೆಟುಕುವ ದರದಲ್ಲಿ ಸಾಲವನ್ನು ನೀಡುತ್ತದೆ. ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ರೈತರಿಗಾಗಿ ಸರ್ಕಾರ ಜಾರಿಗೆ ತಂದಿರುವ ಅಂತಹ ಒಂದು ಯೋಜನೆಯಾಗಿದೆ. ಈ ಯೋಜನೆಯಲ್ಲಿ ರೈತರಿಗೆ 3 ಲಕ್ಷ ರೂ.ವರೆಗೆ ಸಾಲವನ್ನು ನೀಡಲಾಗುತ್ತದೆ. ಈ ಬಜೆಟ್‌ನಲ್ಲಿ ( Budget 2022), ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ (KCC Loan) ಸಾಲದ ಮಿತಿಯನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ನಿರೀಕ್ಷಿಸಲಾಗಿದೆ. 


COMMERCIAL BREAK
SCROLL TO CONTINUE READING

ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚುವ ನಿರೀಕ್ಷೆ : 
ಫೆಬ್ರವರಿ 1 ರಂದು ಅಂದರೆ ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Niramala Sitharaman), ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ (Budget 2022) ರೈತರಿಗಾಗಿ ಹಲವು ಮಹತ್ತರ ನಿರ್ಧಾರಗಳನ್ನು ಕೈಗೊಳ್ಳಬಹುದು ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ದೇಶದಲ್ಲಿ ರೈತರೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮತ್ತೊಂದೆಡೆ ಪಂಚ ರಾಜ್ಯಗಳಲ್ಲಿ ಚುನಾವಣೆ (Five state election) ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೈತರಿಗಾಗಿ  ಕೆಲವು ಘೋಷಣೆ ಮಾಡಬಹುದು ಎನ್ನಲಾಗಿದೆ. 


ಇದನ್ನೂ ಓದಿ : Buying House : ಈ ವಯಸ್ಸಿನಲ್ಲಿ ಮನೆ ಖರೀದಿಸಿದರೆ 1 ಕೋಟಿ ಉಳಿತಾಯ! ಈ ಬಂಪರ್ ಲಾಭ ಪಡೆಯುವುದು ಹೇಗೆ?


ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಬಡ್ಡಿ ದರ :
ಕಿಸಾನ್ ಕ್ರೆಡಿಟ್ ಕಾರ್ಡ್ (KCC Budget 2022) ಅಡಿಯಲ್ಲಿ ರೈತರು ಅಗ್ಗದ ದರದಲ್ಲಿ ಸಾಲವನ್ನು ಪಡೆಯುತ್ತಾರೆ. ಇದರಲ್ಲಿ ಕೇವಲ ಶೇಕಡಾ 7ರ ದರದಲ್ಲಿ ಬಡ್ಡಿ ವಿಧಿಸಲಾಗುತ್ತದೆ.  ಒಂದು ವೇಳೆ ರೈತರು ಒಂದು ವರ್ಷದೊಳಗೆ ಸಾಲ ಮರುಪಾವತಿಸಿದರೆ, ಕೇವಲ  ಶೇ.4ರಷ್ಟು ಬಡ್ಡಿ ಮಾತ್ರ ಪಾವತಿಸಬೇಕಾಗುತ್ತದೆ (Kisan credit card loan interest rate).


ಬಡ್ಡಿ ದರ ತುಂಬಾ ಕಡಿಮೆ  :
ರೈತರು ಬಿತ್ತನೆ ಬೆಳೆಗಳಿಗೆ ಬ್ಯಾಂಕ್‌ಗಳಿಂದ (Bank) ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಬಹುದು.  ಈ ಸಾಲವನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಮಾತ್ರ ನೀಡಲಾಗುತ್ತದೆ. ಈ ಯೋಜನೆಯಡಿ ರೈತರಿಗೆ ಯಾವುದೇ ಗ್ಯಾರಂಟಿ ಇಲ್ಲದೆ, 3 ಲಕ್ಷ ರೂ.ವರೆಗೆ ಸಾಲ ನೀಡಲಾಗುತ್ತದೆ. 3 ರಿಂದ 5 ಲಕ್ಷ ರೂಪಾಯಿಗಳ ಅಲ್ಪಾವಧಿ ಸಾಲವನ್ನು ಕೇವಲ 4 ಶೇಕಡಾ ಬಡ್ಡಿದರದಲ್ಲಿ ನೀಡಲಾಗುತ್ತದೆ. ಈ ಸಾಲಕ್ಕೆ ಸರಕಾರ ಶೇ.2ರಷ್ಟು ಸಹಾಯಧನ ನೀಡುತ್ತದೆ. ಸಾಲವನ್ನು ಸಮಯಕ್ಕೆ ಮರುಪಾವತಿಸಿದರೆ 3 ಪ್ರತಿಶತದಷ್ಟು ರಿಯಾಯಿತಿಯನ್ನು ನೀಡಲಾಗುತ್ತದೆ. ಈ ರೀತಿಯಾಗಿ, ಈ ಸಾಲವು ಕೇವಲ 4 ಪ್ರತಿಶತಕ್ಕೆ ಸಿಕ್ಕಿದಂತಾಗುತ್ತದೆ. ಆದರೆ ಸಾಲದ ಮರುಪಾವತಿಯಲ್ಲಿ ವಿಳಂಬವಾದರೆ, ಈ ಸಾಲದ ಬಡ್ಡಿದರವು (Interest rate) ಶೇಕಡಾ 7 ರಷ್ಟಿರುತ್ತದೆ.


ಇದನ್ನೂ ಓದಿ :  SBI Woman Recruitment: ಪ್ರತಿಭಟನೆಯ ನಂತರ ಮಹಿಳಾ ನೇಮಕಾತಿ ನೀತಿಯನ್ನು ಬದಲಾಯಿಸಿದ ಎಸ್‌ಬಿಐ!


ಬೆಳೆ ವಿಮೆ (Crop Insurance):
ಸರ್ಕಾರವು ರೈತರಿಗಾಗಿ ಜಾರಿಗೆ ತಂದಿರುವ ಉತ್ತಮ ಯೋಜನೆಯಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್‌ (KCC) ಮೂಲಕ ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು (Crop Insurance) ಪಡೆಯಬಹುದು. ಬೆಲೆ ನಾಶವಾದರೆ, ಬೆಲೆ ವಿಮೆ ಮೂಲಕ ಪರಿಹಾರವನ್ನು ನೀಡಲಾಗುತ್ತದೆ. ಪ್ರವಾಹದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಬೆಳೆ ಹಾನಿಯಾದರೆ ಅಥವಾ ಬರಗಾಲದ ಸಂದರ್ಭದಲ್ಲಿ ಬೆಳೆ ಒಣಗಿ ಹೋದರೆ  ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಪರಿಹಾರ ಸಿಗಲಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ  ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.