Budget 2023: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಮಹಿಳಾ ಹಣಕಾಸು ಸಚಿವರೊಬ್ಬರು ಐದನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿರುವುದು ಇದೇ ಮೊದಲು. ಆದರೆ, ಸ್ವತಂತ್ರ ಭಾರತದಲ್ಲಿ ಇದುವರೆಗೆ ಗರಿಷ್ಠ ಬಜೆಟ್ ಮಂಡಿಸಿದ ದಾಖಲೆ ಹೊಂದಿರುವವರು ಯಾರು ಎಂದು ನಿಮಗೆ ತಿಳಿದಿದೆಯೇ?  ವಾಸ್ತವವಾಗಿ, ಸ್ವಾತಂತ್ಯದ ನಂತರ ಹಲವು ವಿತ್ತ ಸಚಿವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಅದರಲ್ಲಿ ಒಬ್ಬರು ಬರೋಬ್ಬರಿ ಹತ್ತು ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. ಅವರೇ ನಮ್ಮ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ.


COMMERCIAL BREAK
SCROLL TO CONTINUE READING

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಸ್ವಾತಂತ್ರ್ಯ ಭಾರತದಲ್ಲಿ ಹತ್ತು ಬಾರಿ ಬಜೆಟ್ ಮಂಡಿಸುವ ಮೂಲಕ ಗರಿಷ್ಠ ಬಾರಿ ಸಾಮಾನ್ಯ ಬಜೆಟ್ ಮಂಡಿಸಿದ ದಾಖಲೆಯನ್ನು ಹೊಂದಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಹಣಕಾಸು ಸಚಿವರಾಗಿದ್ದಾಗ ಬರೋಬ್ಬರಿ ಹತ್ತು ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. 


ಇದನ್ನೂ ಓದಿ- Budget 2023: 2023 ರ ಬಜೆಟ್‌ನಲ್ಲಿ ಪಿಎಂ ಕಿಸಾನ್ ಯೋಜನೆಯ ಮೊತ್ತ ಹೆಚ್ಚಳ ಸಾಧ್ಯತೆ!


ಮೊರಾರ್ಜಿ ದೇಸಾಯಿ ಅವರು 13 ಮಾರ್ಚ್ 1958 ರಿಂದ 29 ಆಗಸ್ಟ್ 1963 ರವರೆಗೆ ಮತ್ತು ನಂತರ 1967 ರಿಂದ 1969 ರವರೆಗೆ ದೇಶದ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಮೊದಲ ಅವಧಿಯಲ್ಲಿ ಅವರು  ಐದು ವಾರ್ಷಿಕ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು. ಎರಡನೇ ಅವಧಿಯಲ್ಲಿ ಮೂರು ವಾರ್ಷಿಕ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಅನ್ನು ಮಂಡಿಸಿದ್ದಾರೆ.


ತಮ್ಮ ಜನ್ಮ ದಿನದಂದೇ ಎರಡು ಬಾರಿ ಬಜೆಟ್ ಮಂಡಿಸಿರುವ ಮೊರಾರ್ಜಿ ದೇಸಾಯಿ:
ಮೊರಾರ್ಜಿ ದೇಸಾಯಿ ಅವರ ಹೆಸರಿನಲ್ಲಿರುವ ಮತ್ತೊಂದು ವಿಶಿಷ್ಟ ದಾಖಲೆ ಎಂದರೆ ಅವರ ತಮ್ಮ ಜನ್ಮದಿನದಂದು ಎರಡು ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ವಾಸ್ತವವಾಗಿ, ಮೊರಾರ್ಜಿ ದೇಸಾಯಿಯವರ ಜನ್ಮ ದಿನಾಂಕ ಫೆಬ್ರವರಿ 29. ನಾಲ್ಕು ವರ್ಷಗಳಿಗೊಮ್ಮೆ ಫೆಬ್ರವರಿ ತಿಂಗಳಿನಲ್ಲಿ 29 ದಿನಗಳಿರುತ್ತವೆ. ಅವರು 1964 ಮತ್ತು 1968 ರಲ್ಲಿ ಫೆಬ್ರವರಿ 29ರಂದು ತಮ್ಮ ಜನ್ಮ ದಿನದಂದೇ ಬಜೆಟ್ ಮಂಡಿಸಿರುವ ವಿಶೇಷ ದಾಖಲೆಯನ್ನೂ ಹೊಂದಿದ್ದಾರೆ. 


ಇದನ್ನೂ ಓದಿ- Budget 2023: ಬಜೆಟ್ ಮಂಡನೆಗೂ ಮುನ್ನ ಪಿಪಿಎಫ್ ಕುರಿತು ಮಹತ್ವದ ಅಪ್ಡೇಟ್ ಪ್ರಕಟ!


ಮೊರಾರ್ಜಿ ದೇಸಾಯಿ ಅವರಲ್ಲದೆ, ಖ್ಯಾತ ಆರ್ಥಿಕ ತಜ್ಞ ಪಿ. ಚಿದಂಬರಂ ಅವರು ಕೂಡ ಒಂಬತ್ತು ಬಾರಿ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಮೂಲಕ ಅವರು ಗರಿಷ್ಠ ಬಜೆಟ್ ಮಂಡಿಸಿದ ಹಣಕಾಸು ಸಚಿವರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.