Budget 2023: ಪಿಎಂ ಆವಾಸ್ ಯೋಜನೆಯ ಫಲಾನುಭವಿಗಳಿಗೆ ಸಿಗುತ್ತಾ ಈ ಸಂತಸದ ಸುದ್ದಿ!

Union Budget 2023: ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಬಜೆಟ್‌ನಲ್ಲಿ ದೊಡ್ಡ ಪ್ರಮಾಣದ ಹಂಚಿಕೆಯನ್ನು ಕಾಣಬಹುದು. ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ 40 ಸಾವಿರ ಕೋಟಿಗೂ ಹೆಚ್ಚು ಬಜೆಟ್ ಅನ್ನು ಇದಕ್ಕಾಗಿ ಇಡಬಹುದು.  

Written by - Nitin Tabib | Last Updated : Jan 28, 2023, 01:02 PM IST
  • ಈ ಬಾರಿ ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31, 2023 ರಿಂದ ಪ್ರಾರಂಭವಾಗಲಿದ್ದು,
  • ಆ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ ಮತ್ತು
  • ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Budget 2023: ಪಿಎಂ ಆವಾಸ್ ಯೋಜನೆಯ ಫಲಾನುಭವಿಗಳಿಗೆ ಸಿಗುತ್ತಾ ಈ ಸಂತಸದ ಸುದ್ದಿ! title=
ಬಜೆಟ್ 2023

Budget 2023 Expectations: ಕೇಂದ್ರ ಬಜೆಟ್ (ಬಜೆಟ್ 2023) ಮಂಡನೆಗೆ ಕೆಲವೇ ದಿನಗಳು ಉಳಿದಿವೆ  ಉಳಿದಿವೆ. ಎಲ್ಲ ಕ್ಷೇತ್ರಗಳ ಜನರು ಬಜೆಟ್‌ನಿಂದ ಸಾಕಷ್ಟು ನಿರೀಕ್ಷೆಯನ್ನು ಹೊಂದಿದ್ದಾರೆ. ಇದೇ ವೇಳೆ ಈ ಬಾರಿಯ ಬಜೆಟ್ನಲ್ಲಿ, ವಸತಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರವು ಕೆಲ ಮಹತ್ವದ ಘೋಷಣೆಗಳನ್ನು ಮಾಡಬಹುದು. ಪ್ರಧಾನ ಮಂತ್ರಿ ಆವಾಸ್ ಯೋಜನೆ (PM Awas Yojana) ನಗರ ಮತ್ತು ಗ್ರಾಮಾಂತರವು  ಈ ಬಾರಿ ಬೃಹತ್ ಬಜೆಟ್ ಹಂಚಿಕೆಯನ್ನು ಪಡೆಯಬಹುದು ಎಂದು ಹೇಳಲಾಗುತ್ತಿದೆ. .

ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳ ಪ್ರಕಾರ, ಸರ್ಕಾರವು ಎರಡೂ ವಸತಿ ಯೋಜನೆಗಳಲ್ಲಿ ಭಾರಿ ಹಂಚಿಕೆ ಮಾಡಬಹುದು. ಮಾಧ್ಯಮ ಮೂಲಗಳಿಂದ ತಿಳಿದು ಬಂದ ಮಾಹಿತಿಯ ಪ್ರಕಾರ, ಸರ್ಕಾರವು 2024 ರ ವೇಳೆಗೆ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 84 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದು. ಇದಕ್ಕಾಗಿ 40 ಸಾವಿರ ಕೋಟಿಗೂ ಹೆಚ್ಚು ಬಜೆಟ್ ಮೀಸಲಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮೂಲಗಳಿಂದ ಬಂದಿರುವ ವಿಶೇಷ ಮಾಹಿತಿಯ ಪ್ರಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಬಜೆಟ್‌ನಲ್ಲಿ ಹೆಚ್ಚಿನ ಉತ್ತೇಜನ ಸಿಗಬಹುದು.  ಕಳೆದ ಸಾಲಿನ ಬಜೆಟ್‌ನಲ್ಲಿ ಸರ್ಕಾರದ ವತಿಯಿಂದ ಈ ಯೋಜನೆಗೆ 48 ಸಾವಿರ ಕೋಟಿ ರೂ.ಮೀಸಲು ಇರಿಸಲಾಗಿತ್ತು 

ಇದನ್ನೂ ಓದಿ-ಮಾರುಕಟ್ಟೆಯ ಭಾರಿ ಕುಸಿತಕ್ಕೆ ಕಾರಣವಾದ ಅಡಾನಿ ಗ್ರೂಪ್, ಒಂದೇ ದಿನದಲ್ಲಿ ಹೂಡಿಕೆದಾರರ 8 ಲಕ್ಷ ಕೋಟಿ ರೂ. ಗುಳುಂ

ಏನಿದು ಪ್ರಧಾನಮಂತ್ರಿ ಆವಾಸ್ ಯೋಜನೆ (PMAY)
ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜೂನ್ 25, 2015 ರಂದು ಪ್ರಾರಂಭಿಸಲಾಗಿದೆ ಎಂಬುದು ಇಲ್ಲಿ ಉಲ್ಲೇಖನೀಯ. ಇದು ಭಾರತ ಸರ್ಕಾರದ ಯೋಜನೆಯಾಗಿದ್ದು, ದೇಶದ ಪ್ರತಿಯೊಬ್ಬ ಬಡ ನಾಗರಿಕರಿಗೆ ಕಡಿಮೆ ವೆಚ್ಚದಲ್ಲಿ ಮನೆಗಳನ್ನು ಒದಗಿಸುವ ಗುರಿಯನ್ನು ಇದು ಹೊಂದಿದೆ. 2024 ರ ವೇಳೆಗೆ ದೇಶದ ಎಲ್ಲಾ ಬಡವರಿಗೆ ಪಕ್ಕಾ ಮನೆಗಳನ್ನು ಒದಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ಇದನ್ನೂ ಓದಿ-Gratuity-Pension Rule: ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಿದೆ ಸರ್ಕಾರ!

ಜನವರಿ 31 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ
ಈ ಬಾರಿ ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31, 2023 ರಿಂದ ಪ್ರಾರಂಭವಾಗಲಿದ್ದು, ಆ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಧಿವೇಶನವು 27 ಸೆಷನ್ಸ್ ಹೊಂದಿದ್ದು, ಏಪ್ರಿಲ್ 6 ರವರೆಗೆ ಮುಂದುವರಿಯುತ್ತದೆ. ಮೊದಲ ಹಂತದ ಅಧಿವೇಶನ ಜನವರಿ 31 ರಿಂದ ಫೆಬ್ರವರಿ 14 ರವರೆಗೆ ನಡೆಯಲಿದೆ. ಸುಮಾರು ಒಂದು ತಿಂಗಳ ವಿರಾಮದ ಬಳಿಕ ಎರಡನೇ ಹಂತದ ಬಜೆಟ್ ಅಧಿವೇಶನ ಮಾರ್ಚ್ 12ರಂದು ಆರಂಭವಾಗಲಿದ್ದು, ಏಪ್ರಿಲ್ 6ರವರೆಗೆ ನಡೆಯಲಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News