Budget 2024: ಬಜೆಟ್ ಮಂಡಿಸಿದ ಕೂಡಲೇ ಇತಿಹಾಸ ಸೃಷ್ಟಿಸಲಿದ್ದಾರೆ ನಿರ್ಮಲಾ ಸೀತಾರಾಮನ್, ಈ ಬಾರಿಯ ಬಜೆಟ್‌ ವಿಶೇಷ ಏನು ಗೊತ್ತಾ?

Budget 2024 Expectations: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಅಂದರೆ ಮಂಗಳವಾರದಂದು ಬಜೆಟ್ ಮಂಡಿಸಿದ ಕೂಡಲೇ ಇತಿಹಾಸ ಸೃಷ್ಟಿಸಲಿದ್ದಾರೆ. ಈ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತವಿಲ್ಲ. ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಎರಡು ಪ್ರಮುಖ ಮಿತ್ರಪಕ್ಷಗಳಾದ ಜೆಡಿ (U) ಮತ್ತು ಟಿಡಿಪಿಯ ಪಾತ್ರವು ಪ್ರಮುಖವಾಗಿರುತ್ತದೆ. 

Written by - Puttaraj K Alur | Last Updated : Jul 22, 2024, 08:18 AM IST
  • ನಾಳೆ ಪ್ರಧಾನಿ ಮೋದಿ ಸರ್ಕಾರದ 3ನೇ ಅವಧಿಯ ಮೊದಲ ಬಜೆಟ್‌ ಮಂಡನೆ
  • ಸತತ 7 ಬಜೆಟ್‌ಗಳನ್ನು ಮಂಡಿಸುವ ಮೂಲಕ ನಿರ್ಮಲಾ ಸೀತಾರಾಮನ್‌ ದಾಖಲೆ
  • ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಏನೆಲ್ಲಾ ವಿಶೇಷತೆ ಇರಲಿದೆ ಗೊತ್ತಾ..?
Budget 2024: ಬಜೆಟ್ ಮಂಡಿಸಿದ ಕೂಡಲೇ ಇತಿಹಾಸ ಸೃಷ್ಟಿಸಲಿದ್ದಾರೆ ನಿರ್ಮಲಾ ಸೀತಾರಾಮನ್, ಈ ಬಾರಿಯ ಬಜೆಟ್‌ ವಿಶೇಷ ಏನು ಗೊತ್ತಾ? title=
ಬಜೆಟ್ 2024 ನಿರೀಕ್ಷೆಗಳು

Budget 2024 Expectations: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಮಂಗಳವಾರ ಅಂದರೆ ಜುಲೈ 23ರಂದು ಮಂಡಿಸಲಾಗುವುದು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಅವರ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ಅವರು ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಮುರಿಯಲಿದ್ದಾರೆ.

ಆದರೆ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಇಂದಿಗೂ ದೇಸಾಯಿಯವರ ಹೆಸರಿನಲ್ಲಿದೆ. ಮೊರಾರ್ಜಿ ದೇಸಾಯಿ ಅವರು 1959 ಮತ್ತು 1964ರ ನಡುವೆ ಸತತ 5 ಪೂರ್ಣ ಬಜೆಟ್ ಮತ್ತು 1 ಮಧ್ಯಂತರ ಬಜೆಟ್ ಮಂಡಿಸಿದ್ದರು. ಅದೇ ಸಮಯದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 1991 ಮತ್ತು 1995ರ ನಡುವೆ ಸತತ 5 ಬಾರಿ ಬಜೆಟ್ ಮಂಡಿಸಿದ್ದರು. ಪಿವಿ ನರಸಿಂಹರಾವ್ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. 

ನಿರ್ಮಲಾ ಸೀತಾರಾಮನ್ 2019ರಲ್ಲಿ ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಸಚಿವರಾದರು. ಇದೀಗ ಪ್ರಧಾನಿ ಮೋದಿಯವರು ಸತತ 3ನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿದ್ದಾರೆ. ಸೀತಾರಾಮನ್ ಈ ವರ್ಷದ ಫೆಬ್ರವರಿಯ ಮಧ್ಯಂತರ ಸೇರಿದಂತೆ ಸತತ 6 ಬಜೆಟ್‌ಗಳನ್ನು ಮಂಡಿಸಿದ್ದಾರೆ. ನಾಳೆ ಮಂಡಿಸಲಿರುವ 2024-25 ಹಣಕಾಸು ವರ್ಷದ ಪೂರ್ಣ ಬಜೆಟ್ (ಏಪ್ರಿಲ್ 2024ರಿಂದ ಮಾರ್ಚ್ 2025) ಅವರ ಸತತ 7ನೇ ಬಜೆಟ್ ಆಗಿರುತ್ತದೆ. 

ಇದನ್ನೂ ಓದಿ: Gruha Lakshmi Scheme: ಹಂತ ಹಂತವಾಗಿ ಖಾತೆಗೆ ʻಗೃಹಲಕ್ಷ್ಮಿʼ ಹಣ ಜಮಾ!

ಈ ಬಾರಿಯ ಬಜೆಟ್‌ನಲ್ಲಿ ಏನೆಲ್ಲಾ ವಿಶೇಷತೆ ಇರಲಿದೆ?

2024ರ ಲೋಕಸಭೆ ಚುನಾವಣೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಮತ್ತು ಕೃಷಿ ಕ್ಷೇತ್ರಗಳಿಗೆ ವಿಶೇಷ ಗಮನ ಹರಿಸಬಹುದು. ಕಿಸಾನ್ ಸಮ್ಮಾನ್ ನಿಧಿ, ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರವು ಈ ಬಜೆಟ್‌ನಲ್ಲಿ ಕೆಲವು ದೊಡ್ಡ ಘೋಷಣೆಗಳನ್ನು ಮಾಡಬಹುದು ಎಂದು ತಜ್ಞರು ಹೇಳಿದ್ದಾರೆ. ಅದೇ ರೀತಿ ಕೃಷಿ ಕ್ಷೇತ್ರದ ಬೆಳವಣಿಗೆಯ ದರವನ್ನು ವೇಗಗೊಳಿಸಲು ಕ್ರಮಗಳನ್ನು ಘೋಷಿಸಬಹುದು. ಇದಲ್ಲದೇ ಲೋಕಸಭೆ ಚುನಾವಣೆಯಲ್ಲಿ ಯುವಕರಿಗೆ ಉದ್ಯೋಗವೂ ದೊಡ್ಡ ಸಮಸ್ಯೆಯಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಯುವಕರ ಬಗ್ಗೆ ವಿಶೇಷ ಗಮನ ಹರಿಸಬಹುದು. ಸರ್ಕಾರವು ಸೇವಾ ವಲಯದಲ್ಲಿ ಉದ್ಯೋಗ ಆಧಾರಿತ ಪ್ರೋತ್ಸಾಹ ಯೋಜನೆಯನ್ನು ಪ್ರಾರಂಭಿಸಬಹುದು. ಸರ್ಕಾರದ ಕಾರ್ಯಸೂಚಿಯಲ್ಲಿ ಕೌಶಲ ಅಭಿವೃದ್ಧಿಯೂ ಸೇರುವ ಸಾಧ್ಯತೆ ಇದೆ.

ಈ ಬಾರಿ NDA ಸರ್ಕಾರದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತವಿಲ್ಲ. ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ೨ ಪ್ರಮುಖ ಮಿತ್ರಪಕ್ಷಗಳಾದ ಜೆಡಿ(U) ಮತ್ತು ಟಿಡಿಪಿಯ ಪಾತ್ರವು ಪ್ರಮುಖವಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮಿತ್ರ ಪಕ್ಷಕ್ಕೆ ಸೇರಿದ ರಾಜ್ಯಗಳ ಮೇಲೆ ಸರ್ಕಾರ ಗಮನ ಹರಿಸಬಹುದು. ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ವಿಶೇಷ ಒತ್ತು ನೀಡಿ ಈ ಬಜೆಟ್‌ನಲ್ಲಿ ವಿಶೇಷ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು. ಈ ಬಜೆಟ್‌ನ ಬಗ್ಗೆ ಜನರ ನಿರೀಕ್ಷೆಗಳು ಹೆಚ್ಚಿವೆ. ಏಕೆಂದರೆ ಕಳೆದ ತಿಂಗಳು ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಬಜೆಟ್ ದೂರಗಾಮಿ ನೀತಿಗಳ ದಾಖಲೆಯಾಗಲಿದೆ ಮತ್ತು ಅದರಲ್ಲಿ ಪ್ರಮುಖ ಸಾಮಾಜಿಕ ಮತ್ತು ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.

ಸ್ವತಂತ್ರ ಭಾರತದ ಮೊದಲ ಬಜೆಟ್

ಸ್ವತಂತ್ರ ಭಾರತದ ಮೊದಲ ಸಾಮಾನ್ಯ ಬಜೆಟ್ ಅನ್ನು 26 ನವೆಂಬರ್ 1947ರಂದು ದೇಶದ ಮೊದಲ ಹಣಕಾಸು ಸಚಿವ ಆರ್.ಕೆ.ಷಣ್ಮುಖಂ ಚೆಟ್ಟಿ ಅವರು ಮಂಡಿಸಿದ್ದರು. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಪ್ರಧಾನಿ ಜವಾಹರಲಾಲ್ ನೆಹರು ಮತ್ತು ನಂತರದ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಅವಧಿಯಲ್ಲಿ ಹಣಕಾಸು ಸಚಿವರಾಗಿ ಒಟ್ಟು 10 ಬಜೆಟ್ ಮಂಡಿಸಿದ್ದರು. ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಒಂಬತ್ತು ಬಾರಿ ಬಜೆಟ್ ಮಂಡಿಸಿದ್ದಾರೆ. ಅದೇ ರೀತಿ ಪ್ರಣಬ್ ಮುಖರ್ಜಿ ಅವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಎಂಟು ಬಜೆಟ್‌ಗಳನ್ನು ಮಂಡಿಸಿದರು. 

ಸುದೀರ್ಘ ಬಜೆಟ್ ಭಾಷಣ ಮಾಡಿದ ದಾಖಲೆಯನ್ನೂ ನಿರ್ಮಲಾ ಸೀತಾರಾಮನ್ ಹೊಂದಿದ್ದಾರೆ. ಫೆಬ್ರವರಿ 1, 2020ರಂದು ಅವರು ೨ ಗಂಟೆ 40 ನಿಮಿಷಗಳ ಕಾಲ ಭಾಷಣ ಮಾಡಿದ್ದರು. 1977ರಲ್ಲಿ ಹಿರೂಭಾಯಿ ಮುಲ್ಜಿಭಾಯಿ ಪಟೇಲ್ ಅವರ ಮಧ್ಯಂತರ ಬಜೆಟ್ ಭಾಷಣವು ಕೇವಲ 800 ಪದಗಳನ್ನು ಒಳಗೊಂಡಿರುವುದು ಅತ್ಯಂತ ಚಿಕ್ಕ ಭಾಷಣವಾಗಿದೆ.

ಇದನ್ನೂ ಓದಿOld Notes: ಗುಲಾಬಿ ಬಣ್ಣದ ಈ ₹20 ನೋಟ್‌ ನಿಮ್ಮ ಬಳಿ ಇದ್ದರೆ ₹5 ಲಕ್ಷ ಸಿಗುತ್ತೆ!

ಸಾಂಪ್ರದಾಯಿಕವಾಗಿ ಫೆಬ್ರವರಿ ಕೊನೆಯ ದಿನದಂದು ಸಂಜೆ 5 ಗಂಟೆಗೆ ಬಜೆಟ್ ಮಂಡಿಸಲಾಗುತ್ತದೆ. 1999ರಲ್ಲಿ ಸಮಯವನ್ನು ಬದಲಾಯಿಸಲಾಯಿತು ಮತ್ತು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಅಂದಿನ ಹಣಕಾಸು ಸಚಿವ ಯಶವಂತ್ ಸಿಂಗ್ ಅವರು ಬೆಳಗ್ಗೆ 11ಗಂಟೆಗೆ ಬಜೆಟ್ ಮಂಡಿಸಿದರು. ಅಂದಿನಿಂದ 11 ಗಂಟೆಗೆ ಬಜೆಟ್ ಮಂಡನೆಯಾಗುತ್ತಿದೆ. ಇದರ ನಂತರ 2017ರಲ್ಲಿ ಬಜೆಟ್ ಮಂಡನೆ ದಿನಾಂಕವನ್ನು ಫೆಬ್ರವರಿ 1ಕ್ಕೆ ಬದಲಾಯಿಸಲಾಯಿತು, ಇದರಿಂದ ಸರ್ಕಾರವು ಮಾರ್ಚ್ ಅಂತ್ಯದೊಳಗೆ ಸಂಸತ್ತಿನ ಅನುಮೋದನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News