Lakhpati Didi Yojana: ಏನಿದು ಲಖ್ಪತಿ ದೀದಿ ಯೋಜನೆ? ಇದರಿಂದ ಯಾರಿಗೆ ಲಾಭ?
Lakhpati Didi Yojana: 2024ರ ಮಧ್ಯಂತರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ದೇಶದ ಕೋಟ್ಯಾಂತರ ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಘೋಷಿಸಲಾಗಿದ್ದು, ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದವರು ಭರವಸೆ ನೀಡಿದ್ದಾರೆ.
Lakhpati Didi Yojana: ಇಂದು (ಫೆಬ್ರವರಿ 01, 2024) ಕೇಂದ್ರ ಮಧ್ಯಂತರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಈ ಬಾರಿಯ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ಹಲವು ದೊಡ್ಡ ಘೋಷಣೆಗಳನ್ನು ಮಾಡಿದ್ದಾರೆ. ಬಜೆಟ್ ಮಂಡನೆ ವೇಳೆ ವಿತ್ತ ಸಚಿವರು ಪ್ರಸ್ತಾಪಿಸಿದ 'ಲಖ್ಪತಿ ದೀದಿ ಯೋಜನೆ' ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.
ಲಖ್ಪತಿ ದೀದಿ ಯೋಜನೆ:
ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು, ಕೇಂದ್ರ ಸರ್ಕಾರವು ಒಂದು ಪ್ರಮುಖ ಉಪಕ್ರಮವನ್ನು ಪ್ರಾರಂಭಿಸಿದೆ. ಆಗಸ್ಟ್ 15, 2023 ರಂದು ಕೆಂಪು ಕೋಟೆಯಲ್ಲಿ ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡುವಾಗ, ಪ್ರಧಾನಿ ನರೇಂದ್ರ ಮೋದಿ ಅವರು ಈ ಲಖ್ಪತಿ ದೀದಿ ಯೋಜನೆಯನ್ನು ಪ್ರಸ್ತಾಪಿಸಿದ್ದರು. ಲಖ್ಪತಿ ಯೋಜನೆ ಎಂದರೇನು, ಅದರ ಉದ್ದೇಶಗಳು ಮತ್ತು ಪ್ರಯೋಜನಗಳೇನು? ಎಂದು ತಿಳಿಯೋಣ...
ಇದನ್ನೂ ಓದಿ- Union Budget 2024: ಚಿಕ್ಕ ನಗರಗಳನ್ನು ಸಂಪರ್ಕಿಸಲು 517 ರೂಟ್ ಗಳಲ್ಲಿ ಉಡಾನ್ ಯೋಜನೆ!
ಏನಿದು ಲಖ್ಪತಿ ದೀದಿ ಯೋಜನೆ?
ಇದು ಮಹಿಳೆಯರನ್ನು ಸಬಲೀಕರಣಗೊಳಿಸಲು ಸರ್ಕಾರ ಜಾರಿಗೊಳಿಸಿರುವ ಅತ್ಯುತ್ತಮ ಯೋಜನೆಗಳಲ್ಲಿ ಒಂದು. ಈ ಯೋಜನೆಯಡಿ, ಮಹಿಳೆಯರು ತಮ್ಮ ಜೀವನೋಪಾಯದ ಉದ್ದೇಶಗಳನ್ನು ಪೂರೈಸಿಕೊಳ್ಳಲು ಸರ್ಕಾರದಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ದೇಶಾದ್ಯಂತ 23 ಡಿಸೆಂಬರ್ 2023ರಂದು ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು ಇದು ಮಹಿಳೆಯರನ್ನು ಆರ್ಥಿಕವಾಗಿ ಸಾಕ್ಷರರಾಗಲು ಸಹಾಯಕವಾಗಿದೆ. ಮಹಿಳೆಯರ ಸಬಲೀಕರಣ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಯೋಜನೆಯ ಅನುಷ್ಠಾನದಿಂದ ಸ್ವ-ಸಹಾಯ ಗುಂಪುಗಳಿಗೆ ಸಂಬಂಧಿಸಿದ ಕೋಟ್ಯಂತರ ಮಹಿಳೆಯರು ಪ್ರಯೋಜನ ಪಡೆಯುತ್ತಾರೆ ಎಂದು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ- 300 Unit Free Electricity : ಜನಸಾಮಾನ್ಯರಿಗೆ ಬಂಪರ್ ! ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್
ಲಖ್ಪತಿ ದೀದಿ ಯೋಜನೆಯ ಪ್ರಯೋಜನಗಳು:
* ಲಖ್ಪತಿ ಯೋಜನೆಯು ಆರ್ಥಿಕವಾಗಿ ಹಿಂದುಳಿದ ಮಹಿಳೆಯರನ್ನು ಸಮಾಜದಲ್ಲಿ ಸ್ವಾವಲಂಬಿಗಳನ್ನಾಗಿ ಮಾಡಲು ಕಾರ್ಯನಿರ್ವಹಿಸುತ್ತದೆ.
* ಲಖ್ಪತಿ ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ನೀಡುತ್ತದೆ.
* ತರಬೇತಿಯ ಮೂಲಕ ಮಹಿಳೆಯರು ಉದ್ಯಮವನ್ನು ಪ್ರಾರಂಭಿಸುವ ಮಾರ್ಗಗಳನ್ನು ಕಲಿಸಲಾಗುತ್ತದೆ. ಈ ಮೂಲಕ ಅವರಿಗೆ ಹಣವನ್ನು ಗಳಿಸಲು ಅನುವು ಮಾಡಿಕೊಡುತ್ತದೆ ಮತ್ತು ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
* ಉದ್ಯಮಿಗಳಾಗಲು ಬಯಸುವ ಮಹಿಳೆಯರು ತಮ್ಮ ವ್ಯಾಪಾರವನ್ನು ಪ್ರಾರಂಭಿಸಲು ಮತ್ತು ಬೆಳೆಯಲು ಈ ಯೋಜನೆಯಡಿ ಮಾರ್ಗದರ್ಶನ/ತರಬೇತಿ ಪಡೆಯಬಹುದಾಗಿದೆ.
* ಆರ್ಥಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಈ ಯೋಜನೆಯು ಮಹಿಳೆಯರಿಗೆ ಕಡಿಮೆ ವೆಚ್ಚದಲ್ಲಿ ವಿಮಾ ರಕ್ಷಣೆಯನ್ನು ಒದಗಿಸುತ್ತದೆ.
* ಈ ಯೋಜನೆಯಡಿಯಲ್ಲಿ, ಡಿಜಿಟಲ್ ಬ್ಯಾಂಕಿಂಗ್ ಸೇವೆಗಳು, ಮೊಬೈಲ್ ವ್ಯಾಲೆಟ್‌ಗಳು ಮತ್ತು ಇತರ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಹೇಗೆ ಬಳಸುವುದು ಎಂಬುದನ್ನು ಕಲಿಯಲು ಮಹಿಳೆಯರನ್ನು ಪ್ರೋತ್ಸಾಹಿಸಲಾಗುತ್ತದೆ.
* ಯೋಜನೆಯು ಅಗತ್ಯ ಹಣಕಾಸಿನ ಮಾಹಿತಿಯೊಂದಿಗೆ ಸಮಗ್ರ ಆರ್ಥಿಕ ಸಾಕ್ಷರತಾ ಕಾರ್ಯಾಗಾರಗಳನ್ನು ಒಳಗೊಂಡಿದೆ.
* ಈ ಕಾರ್ಯಾಗಾರಗಳು ಬಜೆಟ್, ಉಳಿತಾಯ, ಹೂಡಿಕೆ ಮತ್ತು ಹಣಕಾಸಿನ ಆಯ್ಕೆಗಳನ್ನು ಅರ್ಥಮಾಡಿಕೊಳ್ಳುವಂತಹ ವಿಷಯಗಳನ್ನು ಒಳಗೊಂಡಿದೆ.
* ಲಖ್ಪತಿ ದೀದಿ ಯೋಜನೆ ಕಿರುಸಾಲ ಸೌಲಭ್ಯಗಳನ್ನು ಒದಗಿಸುತ್ತದೆ. ಇದರ ಮೂಲಕ ಮಹಿಳೆಯರು ವ್ಯಾಪಾರ, ಶಿಕ್ಷಣ ಅಥವಾ ಇತರ ಅಗತ್ಯಗಳಿಗಾಗಿ ಸಣ್ಣ ಸಾಲವನ್ನು ಪಡೆಯುತ್ತಾರೆ.
ಯೋಜನೆಯ ಲಾಭವನ್ನು ಯಾರು ಪಡೆದುಕೊಳ್ಳುತ್ತಾರೆ?
ಯೋಜನೆಯ ಪ್ರಯೋಜನವನ್ನು ಪಡೆಯಲು, ಮಹಿಳೆಯು ಸಂಬಂಧಪಟ್ಟ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮಹಿಳೆಯರು ಸ್ವಸಹಾಯ ಸಂಘಗಳೊಂದಿಗೆ ಕಡ್ಡಾಯವಾಗಿ ಒಡಂಬಡಿಕೆ ಮಾಡಿಕೊಳ್ಳಬೇಕು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.