Indian Economy: 'ವರ್ಷ 2040 ರವರೆಗೆ 27-28 ಟ್ರಿಲಿಯನ್ ಡಾಲರ್ ಗೆ ತಲುಪಲಿದೆ ಭಾರತದ ಆರ್ಥಿಕತೆ'

Indian Economy: ಮೋದಿ ಸರ್ಕಾರದ ಒಂಬತ್ತು ವರ್ಷಗಳ ಸಾಧನೆಗಳನ್ನು ಉಲ್ಲೇಖಿಸಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, 2040 ರ ವೇಳೆಗೆ ಭಾರತದ ಆರ್ಥಿಕತೆಯು 27-28 ಟ್ರಿಲಿಯನ್ ಡಾಲರ್ ಆಗಲಿದೆ ಎಂದು ಹೇಳಿದ್ದಾರೆ.  

Written by - Nitin Tabib | Last Updated : Jun 10, 2023, 05:56 PM IST
  • ಶನಿವಾರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪುರಿ,
  • ಯುಪಿಎ ಸರ್ಕಾರ ಮತ್ತು ಮೋದಿ ಸರ್ಕಾರದ ಅವಧಿಯನ್ನು ಹೋಲಿಕೆ ಮಾಡಿದರು, ಯುಪಿಎ ಸರ್ಕಾರದ ಅವಧಿಯಲ್ಲಿ
  • ರಾಜಕೀಯ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯು ನಿಷ್ಕ್ರಿಯತೆ ಮತ್ತು ನೀತಿ ಪಾರ್ಶ್ವವಾಯುವಿಗೆ ಬಲಿಯಾಗಿತ್ತು ಎಂದಿದ್ದಾರೆ.
  • ಆ ಸಮಯದಲ್ಲಿ ದೇಶದಲ್ಲಿ ಅಭಿವೃದ್ಧಿಯ ಬಗ್ಗೆ ಗಮನವಿರಲಿಲ್ಲ ಮತ್ತು ಭಾರತವು 'ಫ್ರೇಜಿಲ್-ಫೈವ್' ಆರ್ಥಿಕತೆಗಳಲ್ಲಿ ಒಂದಾಗಿತ್ತು.
Indian Economy: 'ವರ್ಷ 2040 ರವರೆಗೆ 27-28 ಟ್ರಿಲಿಯನ್ ಡಾಲರ್ ಗೆ ತಲುಪಲಿದೆ ಭಾರತದ ಆರ್ಥಿಕತೆ' title=

Indian Economy: ಮೋದಿ ಸರ್ಕಾರದ ಒಂಬತ್ತು ವರ್ಷಗಳ ಸಾಧನೆಗಳನ್ನು ಉಲ್ಲೇಖಿಸಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, 2040 ರ ವೇಳೆಗೆ ಭಾರತದ ಆರ್ಥಿಕತೆಯು 27-28 ಟ್ರಿಲಿಯನ್ ಡಾಲರ್ ಆಗಲಿದೆ ಎಂದು ಹೇಳಿದ್ದಾರೆ. ಅಂತರಾಷ್ಟ್ರೀಯ ಏಜೆನ್ಸಿಯೊಂದರ ವರದಿಯನ್ನು ಉಲ್ಲೇಖಿಸಿ ಇದನ್ನು ಪ್ರತಿಪಾದಿಸಿದ ಅವರು, ಆ ಸಮಯದಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಮತ್ತು ಎರಡನೇ ಸ್ಥಾನದಲ್ಲಿರುವ ರಾಷ್ಟ್ರದ ಬಹಳ ಹತ್ತಿರದಲ್ಲಿದೆ ಎಂದು ಅವರು ಹೇಳಿದ್ದಾರೆ.

ಶನಿವಾರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪುರಿ, ಯುಪಿಎ ಸರ್ಕಾರ ಮತ್ತು ಮೋದಿ ಸರ್ಕಾರದ ಅವಧಿಯನ್ನು ಹೋಲಿಕೆ ಮಾಡಿದರು, ಯುಪಿಎ ಸರ್ಕಾರದ ಅವಧಿಯಲ್ಲಿ ರಾಜಕೀಯ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯು ನಿಷ್ಕ್ರಿಯತೆ ಮತ್ತು ನೀತಿ ಪಾರ್ಶ್ವವಾಯುವಿಗೆ ಬಲಿಯಾಗಿತ್ತು ಎಂದಿದ್ದಾರೆ. ಆ ಸಮಯದಲ್ಲಿ ದೇಶದಲ್ಲಿ ಅಭಿವೃದ್ಧಿಯ ಬಗ್ಗೆ ಗಮನವಿರಲಿಲ್ಲ ಮತ್ತು ಭಾರತವು 'ಫ್ರೇಜಿಲ್-ಫೈವ್' ಆರ್ಥಿಕತೆಗಳಲ್ಲಿ ಒಂದಾಗಿತ್ತು. ಆದರೆ 2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ, ಅವರ ನಾಯಕತ್ವದಲ್ಲಿ ಭಾರತವು ಅಭೂತಪೂರ್ವ ಬದಲಾವಣೆಯನ್ನು ಕಂಡಿದೆ ಮತ್ತು ಇಂದು ಭಾರತವು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ.

ಪ್ರಸ್ತುತ ನೀತಿ-ಉದ್ದೇಶ ಮತ್ತು ನಾಯಕತ್ವ ಈ ಮೂರೂ ಅಂಶಗಳು ಉತ್ತಮವಾಗಿವೆ ಎಂದು ಹೇಳಿದ ಕೇಂದ್ರ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯಂತೆ 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ ಎಂದು ಹೇಳಿದ್ದಾರೆ. ದೇಶಾದ್ಯಂತ ವಿಮಾನ ನಿಲ್ದಾಣಗಳು, ಮೆಟ್ರೋ ನೆಟ್‌ವರ್ಕ್, ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಯ ವೇಗ ಮತ್ತು ಅಮೃತ್, ಉಜ್ವಲ ಮತ್ತು ಸ್ವಚ್ಛ ಭಾರತ್‌ನಂತಹ ಮೋದಿ ಸರ್ಕಾರದ ಹಲವಾರು ಯೋಜನೆಗಳನ್ನು ಉಲ್ಲೇಖಿಸಿದ ಅವರು, ಕರೋನಾ ಅವಧಿಯಲ್ಲಿ ಭಾರತವು ಕೇವಲ 220 ಕೋಟಿ ಲಸಿಕೆಗಳನ್ನು ಕೇವಲ ತಯಾರಿಸದೆ  ಅವುಗಳನ್ನು ಸರಿಯಾದ ರೀತಿಯಲ್ಲಿ ವಿತರಿಸಿದೆ ಎಂದು ಹೇಳಿದ್ದಾರೆ. ವಿಶ್ವದ 100 ದೇಶಗಳಿಗೆ ಭಾರತ ನೇರವಾಗಿ ಕರೋನಾ ಲಸಿಕೆ ರವಾನಿಸಿದೆ ಎಂದೂ ಕೂಡ ಅವರು ಹೇಳಿದ್ದಾರೆ.

ಇದನ್ನೂ ಓದಿ-Digital Lending ನಲ್ಲಿ ಡಿಫಾಲ್ಟ್ ಲಾಸ್ ಗ್ಯಾರಂಟಿ ಕುರಿತಾದ ಮಾರ್ಗಸೂಚಿಗಳು ಪ್ರಕಟ

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಎಂಬ ವಿರೋಧ ಪಕ್ಷಗಳ ಆರೋಪವನ್ನು ಹಿಮ್ಮೆಟ್ಟಿಸಿದ ಅವರು, ರಾಜ್ಯ ಸರ್ಕಾರಗಳು ತೆರಿಗೆಯನ್ನು ಕಡಿಮೆ ಮಾಡದ ಪಕ್ಷಗಳಿಂದ ಈ ಬೇಡಿಕೆ ಬರುತ್ತದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಲೀಟರ್‌ಗೆ ಸುಮಾರು 10 ರೂ.ಗಳಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ. ವಿರೋಧ ಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ ಅವರು ಉಜ್ವಲ ಯೋಜನೆಯು ಒಂದು ಅತ್ಯಂತ ಯಶಸ್ವಿ ಯೋಜನೆಗಳಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ-Business Concept: ನೌಕರಿಯ ಕಿರಿಕಿರಿಯಿಂದ ಮುಕ್ತಿಪಡೆದು ಸ್ವಂತ ವ್ಯವಹಾರ ಆರಂಭಿಸಬೇಕೆ? ಈ ಲೇಖನ ನಿಮಗಾಗಿ

ದೆಹಲಿಯಲ್ಲಿ ಅಕ್ರಮ ಕಾಲೋನಿಗಳು, ಅಕ್ರಮ ನಿರ್ಮಾಣಗಳು ಮತ್ತು ಅತಿಕ್ರಮಣಗಳ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯನ್ನು ಸರ್ಕಾರ ಮುಂದುವರಿಸಲಿದೆ ಎಂದು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ, ಆದರೆ ಅಕ್ರಮ ಕಾಲೋನಿಗಳ ಬಗ್ಗೆ ಸರ್ಕಾರದ ಬಳಿಯೂ ಯೋಜನೆ ಇದೆ ಎಂದಿದ್ದಾರೆ .

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News