7th Pay Commission DA Hike : ದೀಪಾವಳಿಗೆ ಮುನ್ನ ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂತಸದ ಸುದ್ದಿ ಬಂದಿದೆ. ಡಿಎ ಹೆಚ್ಚಳಕ್ಕಾಗಿ ತಿಂಗಳುಗಟ್ಟಲೆಯಿಂದ ಕಾಯುತ್ತಿದ್ದ ನೌಕರರ ನಿರೀಕ್ಷೆ ಕೊನೆಗೊಂಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಎ ಮತ್ತು ಡಿಆರ್ ಅನ್ನು ಶೇ.4ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಜುಲೈ 1, 2023 ರಿಂದ ಉದ್ಯೋಗಿಗಳು ಹೆಚ್ಚಿದ ಡಿಎ ಪ್ರಯೋಜನವನ್ನು ಪಡೆಯುತ್ತಾರೆ. ಪ್ರಸ್ತುತ, ಸರ್ಕಾರವು ನೌಕರರಿಗೆ 42% ದರದಲ್ಲಿ ತುಟ್ಟಿಭತ್ಯೆಯನ್ನು ನೀಡುತ್ತಿದ್ದು, ಇದೀಗ  ಇದು  46% ಕ್ಕೆ ಹೆಚ್ಚಾಗುತ್ತದೆ.


COMMERCIAL BREAK
SCROLL TO CONTINUE READING

48 ಲಕ್ಷಕ್ಕೂ ಹೆಚ್ಚು ಕೇಂದ್ರ ನೌಕರರಿಗೆ ಪ್ರಯೋಜನ : 
ಅಕ್ಟೋಬರ್ ತಿಂಗಳಿನಿಂದ ಹೆಚ್ಚಿಸಿದ ವೇತನದ ಜತೆಗೆ ಮೂರು ತಿಂಗಳ ಬಾಕಿ ವೇತನವನ್ನೂ ನೌಕರರಿಗೆ ನೀಡಲಾಗುವುದು. ಸರ್ಕಾರದ ಈ ನಿರ್ಧಾರದಿಂದ ಕೇಂದ್ರ ನೌಕರರಿಗೆ ನೆಮ್ಮದಿ ಸಿಕ್ಕಿದೆ. ಈ ಬಾರಿ 3 ಪ್ರತಿಶತದಷ್ಟು ಡಿಎ ಹೆಚ್ಚಳ ಎಂದು ಅನೇಕ ಮಾಧ್ಯಮ ವರದಿಗಳಲ್ಲಿ ಹೇಳಲಾಗಿತ್ತು. ಇದಾದ ಬಳಿಕ ನೌಕರರ ಸಂಘಟನೆ ಶೇ.4ರಷ್ಟು ಡಿಎ ಹೆಚ್ಚಳಕ್ಕೆ ಒತ್ತಾಯಿಸಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಲಿದೆ. ಈ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.


ಇದನ್ನೂ ಓದಿ : ಎರಡು ದಿನಗಳ ಇಳಿಕೆಯ ನಂತರ ಇಂದು ಎಷ್ಟಾಗಿದೆ ನೋಡಿ ಬಂಗಾರದ ಬೆಲೆ !


17000 ಕೋಟಿ ಹೆಚ್ಚುವರಿ ಹೊರೆ  : 
ಡಿಎ ಮತ್ತು ಡಿಆರ್ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 17000 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ. ಈ ಬಾರಿಯ ವೇತನದಲ್ಲಿ ಡಿಎ ಬಾಕಿಯಲ್ಲದೆ, ಅಡ್ಹಾಕ್ ಬೋನಸ್ ಸಹ ನೌಕರರಿಗೆ ನೀಡಲಾಗುವುದು. ಇದಲ್ಲದೆ, ರೈಲ್ವೆ ಉದ್ಯೋಗಿಗಳಿಗೆ ವಾರ್ಷಿಕ ಬೋನಸ್ ಅನ್ನು ಸಹ ನೀಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈ ಬಾರಿ ದೊಡ್ಡ ಮೊತ್ತವೇ ನೌಕರರ ಖಾತೆ ಸೇರಲಿದೆ. 


ಇದನ್ನೂ ಓದಿ : ಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್ ಘೋಷಿಸಿದ ಸರ್ಕಾರ ! ಯಾರ ಖಾತೆಗೆ ಎಷ್ಟು ಹಣ ?


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.