ನಿಮ್ಮ ಬಳಿ ಇದೊಂದಿದ್ದರೆ ಸಾಕು, ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು !

Voter ID Latest News :ಮತದಾರರ ಗುರುತಿನ ಚೀಟಿಯನ್ನು ಕಳೆದುಕೊಂಡಿದ್ದರೆ ಅಥವಾ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಕೂಡಾ ಚುನಾವಣೆಯಲ್ಲಿ ನೀವು ಮತ ಚಲಾಯಿಸಬಹುದು. 

Written by - Ranjitha R K | Last Updated : Apr 18, 2024, 12:54 PM IST
  • ಕಳೆದ ತಿಂಗಳು ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆ
  • ನಾಳೆ ಮೊದಲ ಹಂತದ ಮತದಾನ
  • ಈ ಬಾರಿ ದೇಶಾದ್ಯಂತ 7 ಹಂತಗಳಲ್ಲಿ ಲೋಕಸಭೆ ಚುನಾವಣೆ
ನಿಮ್ಮ ಬಳಿ ಇದೊಂದಿದ್ದರೆ ಸಾಕು, ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು !   title=

Voter ID Latest News : ಕಳೆದ ತಿಂಗಳು ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರ ಪ್ರಕಾರ ಈ ಬಾರಿ ಲೋಕಸಭೆ ಚುನಾವಣೆ ದೇಶಾದ್ಯಂತ 7 ಹಂತಗಳಲ್ಲಿ ನಡೆಯಲಿದೆ. ದೇಶಾದ್ಯಂತ 26 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.ಲೋಕಸಭೆ ಚುನಾವಣೆ ಜತೆಗೆ ಈ 26 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ದೇಶಾದ್ಯಂತ ಚುನಾವಣಾ ನೀತಿ ನಿಯಮಗಳು ಜಾರಿಗೆ ಬಂದಿವೆ.ಅದರಂತೆ ಈ ಬಾರಿಯ ಚುನಾವಣೆಯಲ್ಲಿ ಮತದಾನ ಮಾಡಲು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಕಡ್ಡಾಯವಾಗಿ ಸೇರಿಸಿರಲೇಬೇಕು. ಆ ಮೂಲಕ 18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮತದಾರರ ಗುರುತಿನ ಚೀಟಿಯೊಂದಿಗೆ ಮತ ಚಲಾಯಿಸಬಹುದು. 

ಇದನ್ನೂ ಓದಿ : Gold And Silver Price: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಚಿನ್ನ ಹಾಗೂ ಬೆಳ್ಳಿಯ ದರ: ಇಂದಿನ ಬೆಲೆಯೆಷ್ಟು ಗೊತ್ತೇ?

ಯಾವ ರಾಜ್ಯಗಳಲ್ಲಿ ಲೋಕಸಭೆಯ ಮೊದಲ ಹಂತದ ಚುನಾವಣೆ :  
ಅಸ್ಸಾಂ,ಬಿಹಾರ,ಮಧ್ಯಪ್ರದೇಶ,ಮಹಾರಾಷ್ಟ್ರ,ರಾಜಸ್ಥಾನ,ತಮಿಳುನಾಡು ಮತ್ತು ಉತ್ತರಾಖಂಡದಲ್ಲಿ ನಾಳೆ ಲೋಕಸಭೆ ಚುನಾವಣೆ ನಡೆಯಲಿದೆ. 

ದೇಶದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಕೆಲವು ಪ್ರಮುಖ ನಿಯಮಗಳ ಬಗ್ಗೆ ತಿಳಿದುಕೊಳ್ಳೋಣ. 

ಮತದಾರರ ಗುರುತಿನ ಚೀಟಿ ಇಲ್ಲದೆ ಮತ ಚಲಾಯಿಸಬಹುದೇ? : 
ಮತದಾರರ ಗುರುತಿನ ಚೀಟಿಯನ್ನು ಕಳೆದುಕೊಂಡಿದ್ದರೆ ಅಥವಾ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಕೂಡಾ ಚುನಾವಣೆಯಲ್ಲಿ ನೀವು ಮತ ಚಲಾಯಿಸಬಹುದು.ಆದರೆ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು  ಕಡ್ಡಾಯವಾಗಿ ಇರಬೇಕು.

ಇದನ್ನೂ ಓದಿ : ಜಮೀನಿನಲ್ಲಿ ಜಪಾನ್ ಕರೆನ್ಸಿ ಬೆಳೆಯುತ್ತಿದ್ದಾರೆ ರೈತರು !ಕಂತೆ ಕಂತೆ ಹರಿದು ಬರುತ್ತಿದೆ ಹಣ

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ, ವೋಟರ್ ಐಡಿ ಇಲ್ಲದೆಯೂ ನೀವು ಮತ ​​ಚಲಾಯಿಸಬಹುದು. ಅಲ್ಲದೆ, ಚುನಾವಣೆಯಲ್ಲಿ ಮತ ಚಲಾಯಿಸಲು ಬೇರೆ ಯಾವುದೇ ಗುರುತಿನ ಪುರಾವೆಗಳನ್ನು ಬಳಸಬಹುದು.ಆಧಾರ್ ಕಾರ್ಡ್,ವಿಮೆ ಸ್ಮಾರ್ಟ್ ಕಾರ್ಡ್, ಪ್ಯಾನ್ ಕಾರ್ಡ್, MNREGA ಜಾಬ್ ಕಾರ್ಡ್,ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್‌ಪೋರ್ಟ್ ಇತ್ಯಾದಿಗಳನ್ನು ತೋರಿಸಿ ಚುನಾವಣೆಯಲ್ಲಿ ಮತ ಚಲಾಯಿಸಬಹುದು.

ಯಾರು ಮತ ಚಲಾಯಿಸುವಂತಿಲ್ಲ :
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸೇರಿಸಿದ್ದರೆ ನೀವು ಮತ ​​ಚಲಾಯಿಸಬಹುದು. ಆದರೆ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನೀವು ಮತ ​​ಚಲಾಯಿಸುವಂತಿಲ್ಲ.

ಈ ಮಧ್ಯೆ ನೀವು ಆನ್‌ಲೈನ್ ಮತ್ತು ಆಫ್‌ಲೈನ್ ಮೋಡ್‌ನಲ್ಲಿ ನಿಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಬಹುದು.ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು, ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ https://hindi.eci.gov.in/ ನಿಂದ ಅರ್ಜಿ ಸಲ್ಲಿಸಿ .ಇದಲ್ಲದೆ, ನೀವು ಆಫ್‌ಲೈನ್ ಮೋಡ್‌ನಲ್ಲಿಯೂ ನಿಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಬಹುದು.ಇದಕ್ಕಾಗಿ ಸಮೀಪದ ಮತಗಟ್ಟೆ ಕೇಂದ್ರಕ್ಕೆ ತೆರಳಿ ಅರ್ಜಿ ಸಲ್ಲಿಸಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News