Central Bank of India Recruitment 2023: ಬ್ಯಾಂಕಿಂಗ್ ನೇಮಕಾತಿಗೆ ಇಂದೇ ಅರ್ಜಿ ಸಲ್ಲಿಸಿ

Central Bank of India Recruitment 2023: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅಧಿಸೂಚನೆಯ ಪ್ರಕಾರ 21-45 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Written by - Puttaraj K Alur | Last Updated : Jul 25, 2023, 04:22 PM IST
  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
  • ಈ ನೇಮಕಾತಿಯಡಿ ಬಿಸಿನೆಸ್ ಕರೆಸ್ಪಾಂಡೆಂಟ್ ಮೇಲ್ವಿಚಾರಕರ ಹುದ್ದೆ ಭರ್ತಿ ಮಾಡಲಾಗುತ್ತಿದೆ
  • ಅಭ್ಯರ್ಥಿಗಳು ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ & ಮೈಸೂರಿನಲ್ಲಿ ಕಾರ್ಯನಿರ್ಹಿಸಲು ಸಿದ್ಧರಾಗಿರಬೇಕು
Central Bank of India Recruitment 2023: ಬ್ಯಾಂಕಿಂಗ್ ನೇಮಕಾತಿಗೆ ಇಂದೇ ಅರ್ಜಿ ಸಲ್ಲಿಸಿ  title=
Central Bank of India Recruitment 2023

ಬೆಂಗಳೂರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಡಿ ಬಿಸಿನೆಸ್ ಕರೆಸ್ಪಾಂಡೆಂಟ್ ಮೇಲ್ವಿಚಾರಕ(BC Supervisor)ರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.

ಹುದ್ದೆಯ ವಿವರ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 3 ಬಿಸಿನೆಸ್ ಕರೆಸ್ಪಾಂಡೆಂಟ್ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮತ್ತು ಮೈಸೂರಿನಲ್ಲಿ ಕಾರ್ಯನಿರ್ಹಿಸಲು ಸಿದ್ಧರಾಗಿರಬೇಕು.

ಇದನ್ನೂ ಓದಿ: ಜುಲೈನಲ್ಲಿ 43,804 ಕೋಟಿ ರೂಪಾಯಿ FPI ಹೂಡಿಕೆ

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, BE, M.Sc, MCA, MBA ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ 21 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 12,000 ರಿಂದ 15,000 ರೂ.ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕ: ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಇದೇ ಜುಲೈ 28 ಆಗಿರುತ್ತದೆ

ಅರ್ಜಿ ಕಳುಹಿಸಬೇಕಾದ ವಿಳಾಸ: Central Bank of India, Regional Office Bangalore, 2nd Floor, Grand Majestic Mall Gandhinagar, Bengaluru - 560009.

ಈ ನೇಮಕಾತಿ ಕುರಿತ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‍ಸೈಟ್ centralbankofindia.co.in ಭೇಟಿ ನೀಡಬಹುದು.

ಇದನ್ನೂ ಓದಿ: ಐಟಿಆರ್ ಸಲ್ಲಿಸಲು ಪ್ಯಾನ್ ಕಾರ್ಡ್ ಮಾತ್ರವಲ್ಲ ಈ ದಾಖಲೆ ಕೂಡಾ ಅಗತ್ಯ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News