ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಮಹಿಳೆಯರ ಅಭಿವೃದ್ದಿಗಾಗಿ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಈ ಯೋಜನೆಗಳ ಉದ್ದೇಶವು ದೇಶದ ಮಹಿಳೆಯರನ್ನು ಸ್ವ ಉದ್ಯೋಗಕ್ಕಾಗಿ ಉತ್ತೇಜಿಸುವುದು ಮತ್ತು ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು.
ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದ ಯೋಜನೆಗಳು :
ಉಚಿತ ಹೊಲಿಗೆ ಯಂತ್ರ ಯೋಜನೆ :
ದೇಶದಲ್ಲಿ ಹೆಚ್ಚಿನ ಜನಸಂಖ್ಯೆಯು ಬಡ ಮತ್ತು ಕಾರ್ಮಿಕ ಮಹಿಳೆಯರನ್ನು ಒಳಗೊಂಡಿದೆ. ಈ ಮಹಿಳೆಯರು ತಮ್ಮ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮಹಿಳೆಯರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರವು ಬಡ ಮತ್ತು ಕೂಲಿ ಕಾರ್ಮಿಕರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆಯನ್ನು ಪ್ರಾರಂಭಿಸಿದೆ.
ಇದನ್ನೂ ಓದಿ : ಪಿಂಚಣಿದಾರರಿಗೆ ಸರ್ಕಾರದ ಮಹತ್ವದ ಆದೇಶ : ಈ ಕೆಲಸ ಮಾಡದೇ ಹೋದಲ್ಲಿ ಪೆನ್ಶನ್ ಮೇಲಾಗುವುದು ನೇರ ಪರಿಣಾಮ
ಸುಕನ್ಯಾ ಸಮೃದ್ಧಿ ಯೋಜನೆ :
ಇದೊಂದು ಸಣ್ಣ ಉಳಿತಾಯ ಯೋಜನೆ.ಹೆಣ್ಣು ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸುವುದು ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯ ಪ್ರಯೋಜನವನ್ನು ಪಡೆಯಲು, ಹೆಣ್ಣು ಮಗುವಿಗೆ 10 ವರ್ಷ ವಯಸ್ಸಾಗುವ ಮೊದಲು ಅವರ ಹೆಸರಿನಲ್ಲಿ ಖಾತೆಯನ್ನು ತೆರೆಯಬೇಕಾಗುತ್ತದೆ.ಈ ಯೋಜನೆಯಲ್ಲಿ ಕನಿಷ್ಟ 250 ರೂಪಾಯಿ ಹೂಡಿಕೆ ಮಾಡಬೇಕಾಗುತ್ತದೆ. ಇನ್ನು ಈ ಯೋಜನೆಯಲ್ಲಿ ಗರಿಷ್ಠ 1.5 ಲಕ್ಷ ರೂಪಾಯಿ ಹೂಡಿಕೆ ಮಾಡಬಹುದು.
ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ :
ಈ ಯೋಜನೆಯನ್ನು ಭಾರತ ಸರ್ಕಾರವು 2015 ರಲ್ಲಿ ಪ್ರಾರಂಭಿಸಿತು. ಹೆಣ್ಣು ಲಿಂಗ ಅನುಪಾತದಲ್ಲಿನ ಕುಸಿತವನ್ನು ತಡೆಯುವ ನಿಟ್ಟಿನಲ್ಲಿ ಮತ್ತು ದೇಶದಲ್ಲಿ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಉದೇಶದಿಂದ ಈ ಯೋಜನೆ ಜಾರಿಗೆ ತರಲಾಯಿತು. ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಹಾಯ ಮಾಡುತ್ತಿದೆ.
ಇದನ್ನೂ ಓದಿ : ರೈತರಿಗೂ ಸಿಕ್ಕಿತು ದೀಪಾವಳಿ ಗಿಫ್ಟ್ : ಖಾತೆಗೆ ಬಿತ್ತು ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ
ಮಹಿಳಾ ಶಕ್ತಿ ಕೇಂದ್ರ ಯೋಜನೆ :
ಮಹಿಳೆಯರ ಸಬಲೀಕರಣ ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯನ್ನು 2017 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ದೇಶಾದ್ಯಂತ ಸಾಮಾಜಿಕ ಸಹಭಾಗಿತ್ವದ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವ ಕೆಲಸ ಮಾಡಲಾಗುತ್ತಿದೆ.
ಪ್ರಧಾನಮಂತ್ರಿ ಉಜ್ವಲಾ ಯೋಜನೆ :
ದೇಶದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳಿಲ್ಲದ ಮನೆಯಿದೆ. ಈ ಭಾಗದಲ್ಲಿ ಮಹಿಳೆಯರು ಅಡುಗೆಗೆ ಸೌದೆ, ಭರಣಿ, ಇತರ ವಸ್ತುಗಳನ್ನು ಬಳಸುತ್ತಾರೆ. ಹೀಗೆ ಅಡುಗೆ ಮಾಡುವಾಗ ಅಡುಗೆಮನೆಯಲ್ಲಿ ಸಾಕಷ್ಟು ಹೊಗೆ ಏಳುತ್ತದೆ. ಇದರಿಂದ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಕೂಡಾ ಎದುರಿಸಬೇಕಾಗುತ್ತದೆ. ಮಹಿಳೆಯರ ಈ ಸಮಸ್ಯೆಯನ್ನು ಪರಿಗಣಿಸಿ ಭಾರತ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಆರಂಭಿಸಿದೆ.









