ನವದೆಹಲಿ : ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು  ಶಿಲ್ಪಕಲಗಾರರಿಗೆ  ಅನುಕೂಲವಾಗುವಂತೆ ಸರ್ಕಾರವು ಹೊಸ ಯೋಜನೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ. 'ಪ್ರಧಾನಿ ವಿಶ್ವಕರ್ಮ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರವು ರಾಜ್ಯಗಳ ಹಿರಿಯ ಅಧಿಕಾರಿಗಳು, ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮತ್ತು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ (ಎಸ್‌ಎಲ್‌ಬಿಸಿ) ಸಭೆಯನ್ನು ಕರೆದಿದೆ. 'ಪಿಎಂ ವಿಶ್ವಕರ್ಮ' ಯೋಜನೆಯು ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು  ಶಿಲ್ಪಕಲಗಾರರಿಗೆ  ದೊಡ್ಡ ಮಟ್ಟದ ಪ್ರಯೋಜನವನ್ನು ನೀಡುತ್ತದೆ. 


COMMERCIAL BREAK
SCROLL TO CONTINUE READING

ಈ ಯೋಜನೆಯನ್ನು ಸೆಪ್ಟೆಂಬರ್ 17 ರಂದು ಪ್ರಾರಂಭ :
ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಶಿಲ್ಪಕಲಗಾರರಿಗೆ  ಸಹಾಯ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರ ಅಡಿಯಲ್ಲಿ ಒಟ್ಟು 13,000 ಕೋಟಿ ರೂ. ಮೀಸಲಿಡಲಾಗಿದೆ. ಈ ಯೋಜನೆಯನ್ನು ಸೆಪ್ಟೆಂಬರ್ 17 ರಂದು ಪರಿಚಯಿಸಲಾಗುವುದು. ಇದನ್ನು ಮೂರು ಸಚಿವಾಲಯಗಳು ಅಂದರೆ  MSME, ಕೌಶಲ್ಯ ಅಭಿವೃದ್ಧಿ ಮತ್ತು ಹಣಕಾಸು ಸಚಿವಾಲಯವು ಕಾರ್ಯಗತಗೊಳಿಸುತ್ತವೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳನ್ನು ಸೇರಿಸುವ ಗುರಿ ಹೊಂದಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ : ಮ್ಯೂಚವಲ್ ಫಂಡ್ ನಲ್ಲಿ ಯಾವ ರೀತಿ ಹೂಡಿಕೆಯನ್ನು ಮಾಡಿದರೆ ಹೆಚ್ಚು ಲಾಭದ ಜೊತೆಗೆ ಭದ್ರತೆ ಸಿಗುತ್ತದೆ?


ಕೌಶಲ್ಯ ವೃದ್ಧಿಗೆ 4-5 ದಿನಗಳ ಕಾಲ ತರಬೇತಿ ನೀಡಲಾಗುವುದು :
ಆಗಸ್ಟ್ 28 ರಂದು ಕೌಶಲ ಸಚಿವಾಲಯ ಸಭೆ ಕರೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದರಲ್ಲಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಬ್ಯಾಂಕ್‌ಗಳ ಎಂಡಿಗಳು ಮತ್ತು ಎಸ್‌ಎಲ್‌ಬಿಸಿ ಪ್ರತಿನಿಧಿಗಳನ್ನು ಕರೆಯಲಾಗಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಕರಡು ಅನುಷ್ಠಾನ ಹಾಗೂ ಯೋಜನೆಯ ಫಲಾನುಭವಿಗಳನ್ನು ಗುರುತಿಸುವ ಪ್ರಕ್ರಿಯೆ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಯೋಜನೆಯಡಿಯಲ್ಲಿ ಕುಶಲ ಕೆಲಸಗಾರರಿಗೆ 4-5 ದಿನಗಳ ತರಬೇತಿಯನ್ನು ನೀಡಿ ಅವರ ಕೌಶಲವನ್ನು ಹೆಚ್ಚಿಸಲಾಗುವುದು.


ತರಬೇತಿಯ ನಂತರ ಕುಶಲಕರ್ಮಿಗಳಿಗೆ ಸಾಲ ಸೌಲಭ್ಯ : 
ತರಬೇತಿಯ ನಂತರ ಅವರು ಸಾಲ ಪಡೆಯಲು ಅರ್ಹರಾಗಿರುತ್ತಾರೆ. 'ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೂರು ಲಕ್ಷ ಫಲಾನುಭವಿಗಳಿಗೆ ಸಾಲ ನೀಡುವ ಗುರಿ ಹೊಂದಿದ್ದೇವೆ. ಯೋಜನೆಯಡಿ ಗ್ರಾಮೀಣ ಪ್ರದೇಶಗಳಿಗೆ ವಿಶೇಷ ಗಮನ ನೀಡಲಾಗುವುದು. ಈ ಯೋಜನೆಗೆ ಸಂಬಂಧಿಸಿದ ಘೋಷಣೆಯನ್ನು ಪ್ರಧಾನಿ ಮೋದಿಯವರು ಆಗಸ್ಟ್ 15 ರಂದು ಕೆಂಪು ಕೋಟೆಯಿಂದ ಮಾಡಿದ ಭಾಷಣದಲ್ಲಿ ಮಾಡಿದರು. 13,000 ಕೋಟಿಯಿಂದ 15,000 ಕೋಟಿ ವೆಚ್ಚದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಸರ್ಕಾರ ಆರಂಭಿಸಲಿದೆ ಎಂದು ಪ್ರಧಾನಿ ಮೋದಿ ಅಂದು ಹೇಳಿದ್ದರು.


ಇದನ್ನೂ ಓದಿ : ಎಸ್ಬಿಐ ಗ್ರಾಹಕರಿಗೊಂದು ಸಂತಸದ ಸುದ್ದಿ, ಹೊಸ ಯೋಜನೆ ಆರಂಭಿಸಿದ ಬ್ಯಾಂಕ್!


ಯೋಜನೆಗೆ ಈಗಾಗಲೇ ಸಚಿವ ಸಂಪುಟದ ಒಪ್ಪಿಗೆ ದೊರೆತಿದೆ. ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಮೊದಲ ಕಂತಿನಲ್ಲಿ 1 ಲಕ್ಷ ಹಾಗೂ ಎರಡನೇ ಕಂತಿನಲ್ಲಿ 2 ಲಕ್ಷ ಸಾಲ ನೀಡುವುದಾಗಿ ಸಂಪುಟ ಸಭೆಯ ನಂತರ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು. ಈ ಸಾಲದ ಬಡ್ಡಿ ದರವೂ ಶೇ 5ರಷ್ಟು ಮಾತ್ರ ಇರುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.