ಆನ್‌ಲೈನ್ ರೈಲ್ವೇ ಟಿಕೆಟ್ ಬುಕಿಂಗ್ ನಿಯಮದಲ್ಲಿ ಬದಲಾವಣೆ .! IRCTC ಹೊಸ ಆದೇಶ
Indian Railways IRCTC Ticket Booking: ಇದೀಗ ಆನ್‌ಲೈನ್ ಟಿಕೆಟ್ ಬುಕಿಂಗ್ ನಿಯಮಗಳನ್ನು ಬದಲಾಯಿಸಲಾಗಿದೆ. ಖಾತೆಯನ್ನು ಪರಿಶೀಲಿಸದ ಬಳಕೆದಾರರು, ಭವಿಷ್ಯದಲ್ಲಿ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುವುದಿಲ್ಲ.
Indian Railways IRCTC Ticket Booking: ರೈಲಿನಲ್ಲಿ ಪ್ರಯಾಣಿಸುವವರು IRCTCಯ ವೆಬ್‌ಸೈಟ್ ಅಥವಾ ಅಪ್ಲಿಕೇಶನ್ ಮೂಲಕ ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡುತ್ತಾರೆ. ಆದರೆ ಇದೀಗ ಆನ್‌ಲೈನ್ ಟಿಕೆಟ್ ಬುಕಿಂಗ್ ನಿಯಮಗಳನ್ನು ಬದಲಾಯಿಸಲಾಗಿದೆ. 2022 ರಲ್ಲಿ ಬಿಡುಗಡೆಯಾದ ಮಾಹಿತಿಯ ಪ್ರಕಾರ, IRCTC 30 ಮಿಲಿಯನ್ ನೋಂದಾಯಿತ ಬಳಕೆದಾರರನ್ನು ಹೊಂದಿದೆ. ಅಂತಹ ಪರಿಸ್ಥಿತಿಯಲ್ಲಿ, IRCTC ಮಾಡಿದ ಬದಲಾವಣೆಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅವಶ್ಯಕವಾಗಿದೆ.
ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ 40 ಲಕ್ಷ ಬಳಕೆದಾರರು ತಮ್ಮ ಖಾತೆಗಳನ್ನು ಪರಿಶೀಲಸಿಲ್ಲ. IRCTC ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಮೂಲಕ ಟಿಕೆಟ್ ಕಾಯ್ದಿರಿಸುವ ನಿಯಮಗಳನ್ನು ಇದೀಗ ರೈಲ್ವೆ ಬದಲಾಯಿಸಿದೆ. ಹೊಸ ನಿಯಮದ ಪ್ರಕಾರ, ಟಿಕೆಟ್‌ಗಳನ್ನು ಬುಕ್ ಮಾಡುವ ಮೊದಲು ಬಳಕೆದಾರರು ತಮ್ಮ ಖಾತೆಯನ್ನು ಪರಿಶೀಲಿಸಬೇಕಾಗುತದೆ. ಆದರೆ ಸುಮಾರು 40 ಲಕ್ಷ ಬಳಕೆದಾರರು ಇನ್ನೂ ತಮ್ಮ ಖಾತೆಯನ್ನು ಪರಿಶೀಲಿಸಿಲ್ಲ ಎನ್ನಲಾಗಿದೆ. ಖಾತೆಯನ್ನು ಪರಿಶೀಲಿಸದ ಬಳಕೆದಾರರು, ಭವಿಷ್ಯದಲ್ಲಿ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುವುದಿಲ್ಲ.
ಇದನ್ನೂ ಓದಿ : Arecanut today price: ರಾಜ್ಯದ ಬಹುತೇಕ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಕುಸಿತ!
ಆದಷ್ಟು ಬೇಗ ವೆರಿಫೈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ:
IRCTC ಹೊರಡಿಸಿದ ನಿಯಮದ ಅಡಿಯಲ್ಲಿ, ಬಳಕೆದಾರರು ಆನ್‌ಲೈನ್ ಟಿಕೆಟ್‌ಗಳನ್ನು ಬುಕ್ ಮಾಡುವ ಮೊದಲು ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿಯನ್ನು ವೆರಿಫೈ ಮಾಡುವುದು ಅವಶ್ಯಕ. ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರ ವೆಬ್‌ಸೈಟ್ ಅಥವಾ ಅಪ್ಲಿಕೇಶನ್ ಮೂಲಕ ಟಿಕೆಟ್ ಕಾಯ್ದಿರಿಸದ ಪ್ರಯಾಣಿಕರಿಗೆ , IRCTC ಜಾರಿಗೆ ತಂದಿರುವ ಈ ಬದಲಾವಣೆಯು ಅನ್ವಯಿಸುತ್ತದೆ. ನಿಮ್ಮ ಖಾತೆಯನ್ನು ನೀವು ಇಲ್ಲಿಯವರೆಗೆ ಪರಿಶೀಲಿಸದಿದ್ದರೆ, ಪರಿಶೀಲನೆ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ. ಇಲ್ಲವಾದರೆ ಟಿಕೆಟ್ ಬುಕಿಂಗ್ ಮಾಡುವಾಗ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಮೊಬೈಲ್ ಮತ್ತು ಇ-ಮೇಲ್ ವೆರಿಫೈ ಪ್ರಕ್ರಿಯೆ ಹೀಗಿದೆ :
- IRCTC ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ಗೆ ಹೋಗುವ ಮೂಲಕ ವೆರಿಫಿಕೆಶನ್ ವಿಂಡೋ ಮೇಲೆ ಕ್ಲಿಕ್ ಮಾಡಿ.
ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿಯನ್ನು ನಮೂದಿಸಿ.
ಎರಡೂ ಮಾಹಿತಿಯನ್ನು ನಮೂದಿಸಿದ ನಂತರ, ವೆರಿಫೈ ಬಟನ್ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ ಕ್ಲಿಕ್ ಮಾಡಿದಾಗ ನಿಮ್ಮ ಮೊಬೈಲ್‌ಗೆ OTP ಬರುತ್ತದೆ. ಅದನ್ನು ನಮೂದಿಸುವ ಮೂಲಕ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿ.
ಇ-ಮೇಲ್ ಐಡಿಯಲ್ಲಿ ಸ್ವೀಕರಿಸಿದ ಕೋಡ್ ಅನ್ನು ನಮೂದಿಸಿದ ನಂತರ, ನಿಮ್ಮ ಮೇಲ್ ಐಡಿಯನ್ನು ಪರಿಶೀಲಿಸಲಾಗುತ್ತದೆ.
ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ, ಆನ್‌ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಬಹುದು.
ಇದನ್ನೂ ಓದಿ : ಈ ಒಂದು ಕೆಲಸ ಮಾಡಿದರೆ ಕಾರು ಲೋನ್ ಮೇಲಿನ ಸಂಪೂರ್ಣ ಬಡ್ಡಿ ಮನ್ನಾವಾಗುತ್ತದೆ .!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.